Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | 4,44,094 ಮಕ್ಕಳಿಗೆ...

ವಿಜಯನಗರ | 4,44,094 ಮಕ್ಕಳಿಗೆ ಅಲ್ಬೆಂಡಜೋಲ್ ಮಾತ್ರೆ ವಿತರಣೆ ಗುರಿ: ಡಿಎಚ್‌ಒ ಡಾ.ಟಿ.ಲಿಂಗರಾಜು

ವಾರ್ತಾಭಾರತಿವಾರ್ತಾಭಾರತಿ10 Aug 2026 9:15 PM IST
share
ವಿಜಯನಗರ | 4,44,094 ಮಕ್ಕಳಿಗೆ ಅಲ್ಬೆಂಡಜೋಲ್ ಮಾತ್ರೆ ವಿತರಣೆ ಗುರಿ: ಡಿಎಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ): ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ 1,583 ಅಂಗನವಾಡಿ ಕೇಂದ್ರಗಳು, 1,203 ಸರ್ಕಾರಿ ಶಾಲೆಗಳು ಹಾಗೂ 406 ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 4,44,094 ಮಕ್ಕಳಿಗೆ ಅಲ್ಬೆಂಡಜೋಲ್ ಮಾತ್ರೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಲಿಂಗರಾಜು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಸೋಮವಾರ ಅಮರಾವತಿ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಂತುಹುಳುಗಳ ಬಾಧೆಯಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗಿ, ದೈಹಿಕ ಬೆಳವಣಿಗೆಯ ಜೊತೆಗೆ ಜ್ಞಾಪಕ ಶಕ್ತಿಯ ಮೇಲೂ ಪರಿಣಾಮ ಬೀರುತ್ತದೆ. ಆದ್ದರಿಂದ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು. ದೇಶದಲ್ಲಿ ಶೇ.56ರಷ್ಟು ಜನರಲ್ಲಿ ರಕ್ತಹೀನತೆ ಕಂಡುಬರುತ್ತಿದ್ದು, ಮಹಿಳೆಯರು ಹಾಗೂ ಮಕ್ಕಳಲ್ಲಿ ಇದರ ಪ್ರಮಾಣ ಹೆಚ್ಚಾಗಿ ಕಂಡುಬರುತ್ತದೆ. ಜಂತುಹುಳುಗಳ ಸೋಂಕಿನಿಂದ ಮಕ್ಕಳನ್ನು ರಕ್ಷಿಸಲು ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಊಟ ಮಾಡುವ ಮೊದಲು ಹಾಗೂ ಶೌಚಾಲಯ ಬಳಕೆಯ ನಂತರ ಸೋಪಿನಿಂದ ಕೈಗಳನ್ನು ಚೆನ್ನಾಗಿ ತೊಳೆಯಬೇಕು. ಬಿಸಿಯಾದ ಆಹಾರವನ್ನು ಸೇವಿಸಬೇಕು. ತರಕಾರಿ ಹಾಗೂ ಹಣ್ಣುಗಳನ್ನು ಸೇವಿಸುವ ಮೊದಲು ಸ್ವಚ್ಛವಾಗಿ ತೊಳೆಯಬೇಕು. ಮಕ್ಕಳು ಬರಿಗಾಲಿನಲ್ಲಿ ಓಡಾಡುವುದನ್ನು ತಪ್ಪಿಸಬೇಕು ಎಂದು ಸಲಹೆ ನೀಡಿದರು. ಜಂತುಹುಳು ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ನೀಡುವ ಅಲ್ಬೆಂಡಜೋಲ್ ಮಾತ್ರೆಗಳನ್ನು ಸೇವಿಸಬೇಕು. 1ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಜಂತುಹುಳು ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಸಹಕರಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಅಮರಾವತಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಜೀವ್ ಅವರು ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ನಾಗರಾಜ್ ಹವಲ್ದಾರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ರಾಧಿಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಗಂಗಪ್ಪ, ಅಮರಾವತಿ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯ ಪ್ರಾಂಶುಪಾಲ ವೆಂಕಟೇಶ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಉಪಸ್ತಿತರಿದ್ದರು.




Tags

childrenAlbendazolevijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X