Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹೊಸಪೇಟೆ ಪ್ರಜಾಸೇವಾ ಅಭಿಯಾನದಲ್ಲಿ 71...

ಹೊಸಪೇಟೆ ಪ್ರಜಾಸೇವಾ ಅಭಿಯಾನದಲ್ಲಿ 71 ಅರ್ಜಿ ಸ್ವೀಕಾರ : ಆಲಂ ಭಾಷಾ

ವಾರ್ತಾಭಾರತಿವಾರ್ತಾಭಾರತಿ7 Nov 2026 7:50 PM IST
share
ಹೊಸಪೇಟೆ ಪ್ರಜಾಸೇವಾ ಅಭಿಯಾನದಲ್ಲಿ 71 ಅರ್ಜಿ ಸ್ವೀಕಾರ : ಆಲಂ ಭಾಷಾ

ವಿಜಯನಗರ (ಹೊಸಪೇಟೆ) : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜನಪರ ಪ್ರಜಾಸೇವಾ ಕಾರ್ಯಕ್ರಮದಡಿ ತಾಲೂಕು ಮಟ್ಟದಲ್ಲಿ ಒಟ್ಟು 71 ಅರ್ಜಿಗಳು ಸ್ವೀಕೃತಿಯಾಗಿವೆ. ತಕ್ಷಣವೇ ಪರಿಹರಿಸಬಹುದಾದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಾಗುವುದು. ಕಾಲಮಿತಿಯೊಳಗೆ ಪರಿಹರಿಸಬೇಕಾದ ಅರ್ಜಿಗಳಿಗೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆಲಂ ಭಾಷಾ ಹೇಳಿದರು.

ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಜಾಸೇವಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಜನಪರ ನೀತಿಗಳು ಹಾಗೂ ಮುಖ್ಯಮಂತ್ರಿಗಳ ಆಶಯದಂತೆ ರಾಜ್ಯದ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಅಹವಾಲುಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಕಾರ್ಯಕ್ರಮವನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.

ಹೊಸಪೇಟೆ ನಗರಸಭೆಗೆ ಸಂಬಂಧಿಸಿದ 34 ಅರ್ಜಿಗಳು, ತಾಲೂಕು ಪಂಚಾಯಿತಿಗೆ 23, ಆಹಾರ ಇಲಾಖೆಗೆ 5 ಹಾಗೂ ಕಂದಾಯ ಇಲಾಖೆಗೆ 2 ಅರ್ಜಿಗಳು ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಒಟ್ಟು 71 ಅರ್ಜಿಗಳು ಸ್ವೀಕೃತಿಯಾಗಿವೆ ಎಂದು ಮಾಹಿತಿ ನೀಡಿದರು.

ಪ್ರಜಾಸೇವಾ ಅಭಿಯಾನದಡಿ ವಿವಿಧ ಇಲಾಖೆಗಳ ಅಧಿಕಾರಿಗಳು ಒಂದೇ ಸೂರಿನಡಿ, ಒಂದೇ ವೇದಿಕೆಯಲ್ಲಿ ಸಾರ್ವಜನಿಕರ ಅಹವಾಲು ಮತ್ತು ಅರ್ಜಿಗಳನ್ನು ಸ್ವೀಕರಿಸುವ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಅರ್ಜಿಗಳನ್ನು ಆನ್‌ಲೈನ್ ಮೂಲಕ ದಾಖಲಿಸಿ, ಅವುಗಳ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಈ ಪ್ರಕ್ರಿಯೆಯ ಮೇಲ್ವಿಚಾರಣೆಯನ್ನೂ ನಡೆಸಲಾಗುವುದು ಎಂದು ಹೇಳಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ವಿವಿಧ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವರ ಸಮಸ್ಯೆಗಳನ್ನು ಆಲಿಸಿ ಸೂಕ್ತವಾಗಿ ಸ್ಪಂದಿಸಲು ಪ್ರಜಾಸೇವಾ ಕಾರ್ಯಕ್ರಮ ಸಹಕಾರಿಯಾಗಲಿದೆ. ಆದ್ದರಿಂದ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರೇಷ್ಮೆ ಇಲಾಖೆ ಉಪನಿರ್ದೇಶಕ ಹರ್ಷ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಗಂಗಪ್ಪ, ತಹಶೀಲ್ದಾರ್ ಕಾರ್ತಿಕ, ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags

Hosapete
share
ವಾರ್ತಾಭಾರತಿ
ವಾರ್ತಾಭಾರತಿ
Next Story
X