ವಿಜಯನಗರ |ಎಸೆಸೆಲ್ಸಿ ಪರೀಕ್ಷೆ-2 ಸುಗಮವಾಗಿ ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ : ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್

ವಿಜಯನಗರ : ಜಿಲ್ಲೆಯ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ಎಸೆಸೆಲ್ಸಿ-2 ಪರೀಕ್ಷೆ ಸುಗಮವಾಗಿ ನಡೆಯಲು ಎಲ್ಲಾ ರೀತಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.
ಮೇ.26ರಿಂದ ಜೂ.2ರವರೆಗೆ ಎಸೆಸೆಲ್ಸಿ-2 ಪರೀಕ್ಷೆ ನಡೆಯಲಿದೆ. ಎಸೆಸೆಲ್ಸಿ ಪರೀಕ್ಷೆಗಳು ಪಾರದರ್ಶಕವಾಗಿ, ಕಟ್ಟುನಿಟ್ಟಾಗಿ, ಸುಗಮವಾಗಿ ನಡೆಸುವ ದೃಷ್ಟಿಯಿಂದ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಅಧಿಕಾರಿಗಳು ಪರೀಕ್ಷಾ ವೇಳಾ ಪಟ್ಟಿಯಂತೆ ನಿಯೋಜಿಸಿದ ಕೇಂದ್ರಗಳಲ್ಲಿ ಪರೀಕ್ಷಾ ಪೂರ್ವ ಸಿದ್ದತೆಯನ್ನು ಮಾಡಿಕೊಂಡಿರುವ ಬಗ್ಗೆ ಖಚಿತ ಪಡಿಸಿಕೊಂಡು ಮೂಲಭೂತ ಸೌಕರ್ಯಗಳಾದ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಗಾಳಿ ಮತ್ತು ಬೆಳಕಿನ ವ್ಯವಸ್ಥೆಗಳನ್ನು ಒದಗಿಸಿಕೊಂಡಿರುವ ಬಗ್ಗೆ ಪರಿಶೀಲಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





