ಅಲ್ಪಸಂಖ್ಯಾತ ಸಮುದಾಯದವರಿಗೆ ಸರಳ ವಿವಾಹ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ವಿಜಯನಗರ : 2025-26ನೇ ಸಾಲಿಗೆ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರ ಸಮುದಾಯದವರಿಗೆ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://dom.karnataka.gov.in ಅನ್ನು ವೀಕ್ಷಿಸಿ ಹಾಗೂ ಅಲ್ಪಸಂಖ್ಯಾತರ ಜಿಲ್ಲಾ ಮತ್ತು ತಾಲೂಕು ಕಚೇರಿಗಳು, ಅಲ್ಪಸಂಖ್ಯಾತರ ಜಿಲ್ಲಾ ಹಾಗೂ ತಾಲೂಕು ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದಾಗಿದೆ.
ಹೊಸಪೇಟೆ ಮೊ.8050435366, ಕೂಡ್ಲಿಗಿ ಮತ್ತು ಕೊಟ್ಟೂರು ಮೊ.9060330060, ಹರಪನಹಳ್ಳಿ ಮೊ.8494927891, ಹೂವಿನಹಡಗಲಿ ಮೊ.7353696984, ಹಗರಿಬೊಮ್ಮನಹಳ್ಳಿ ಮೊ.9980237242 ಸಂಖ್ಯೆಗೆ ಕರೆ ಮಾಡಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.
Next Story





