ವಿಜಯನಗರ | ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ವಿವಿಧ ಯೋಜನೆಗಳಿಗೆ ಅರ್ಜಿ ಅಹ್ವಾನ

ವಿಜಯನಗರ : 2025-26ನೇ ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ವಿವಿಧ ಯೋಜನೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ಬರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಕಿರು ಆರ್ಥಿಕ ಚಟುವಟಿಕೆಗಳಿಗೆ, ಕುರಿಸಾಕಾಣಿಕೆ, ಹೈನುಗಾರಿಕೆ ಸೇರಿದಂತೆ ಇತರ ಸ್ವಯಂ ಉದ್ಯೋಗಕ್ಕೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು ಸೆ.10ರಂದು ಕೊನೆಯ ದಿನವಾಗಿದೆ. ಅರ್ಹ ಫಲಾನುಭವಿಗಳು ಹತ್ತಿರದ ಸೇವಾಸಿಂಧು, ಗ್ರಾಮ್‌ಒನ್ ಮತ್ತು ಕರ್ನಾಟಕಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕ ರಮೇಶ್ ನಾಯ್ಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





