ಹೊಸಪೇಟೆ: ದತ್ತು ಮತ್ತು ಪೋಷಕತ್ವ ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ

ವಿಜಯನಗರ: ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ವಲಯದ ಅಂಗನವಾಡಿ ಶಿಕ್ಷಕಿಯರಿಗೆ ದತ್ತು ಮತ್ತು ಪೋಷಕತ್ವ ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯನಗರ ಹಾಗೂ ಡಾನ್ ಬೋಸ್ಕೊ ಸಂಸ್ಥೆ ಹೊಸಪೇಟೆ ಸಂಯುಕ್ತಾಶ್ರಯದಲ್ಲಿ ಪೋಷಕತ್ವ ಯೋಜನೆ ಅಡಿಯಲ್ಲಿ ಮಗುವಿನ ಪಾಲನೆ ಪೋಷಣೆ ರಕ್ಷಣೆಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಆದೇಶದ ಮೇರೆಗೆ ಜೈವಿಕ ಕುಟುಂಬವಲ್ಲದ ಬೇರೊಂದು ಕುಟುಂಬಕ್ಕೆ ತಾತ್ಕಾಲಿಕ ಅಥವಾ ವಿಸ್ತರಿಸಲ್ಪಟ್ಟ ಅವಧಿಯವರೆಗೆ 2 ವರ್ಷಕ್ಕೆ ಮೀರದ ಅವಧಿವರೆಗೆ ಬಾಲ ನ್ಯಾಯ ಕಾಯ್ದೆ 2015ರ ಕಲಂ 44ರ ಪ್ರಕಾರ ಮಗುವನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ಜಿಲ್ಲಾ ಸಂಯೋಜಕ ಜಿ ಸ್ವಾಮಿ ತಿಳಿಸಿದರು.
ಪೋಷಕತ್ವ ಎಂದರೆ ಕಾನೂನಿನ ಪ್ರಕಾರ ಪಾಲನೆ ಪೋಷಣೆ ರಕ್ಷಣೆಯಿಂದ ವಂಚಿತರಾದ ಮಕ್ಕಳು ಹಾಗೂ ಪರಿವಾರದ ಆರೈಕೆಯಿಂದ ವಂಚಿತರಾದ ಮಕ್ಕಳಿಗೆ ತಾತ್ಕಾಲಿಕ ಪರಿವಾರದ ಮೂಲಕ ಸಿಗುವ ಕಾಳಜಿಯೇ ಪೋಷಕತ್ವ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕಿ ರೇಣುಕಾ ಅವರು, ಪೋಷಕತ್ವ ಯೋಜನೆ ಕುರಿತು ಪ್ರಾಸ್ತವಿಕವಾಗಿ ಮಾತನಾಡಿದರು.





