Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಬಿಎಸ್‍ವೈ ಅಭಿಮಾನೋತ್ಸವ ಹಿನ್ನೆಲೆ :...

ಬಿಎಸ್‍ವೈ ಅಭಿಮಾನೋತ್ಸವ ಹಿನ್ನೆಲೆ : ಹೊಸಪೇಟೆಯಲ್ಲಿ ಬಸ್ ಸಂಚಾರ ಅಸ್ತವ್ಯಸ್ತ

ವಾರ್ತಾಭಾರತಿವಾರ್ತಾಭಾರತಿ9 May 2026 8:25 PM IST
share
ಬಿಎಸ್‍ವೈ ಅಭಿಮಾನೋತ್ಸವ ಹಿನ್ನೆಲೆ : ಹೊಸಪೇಟೆಯಲ್ಲಿ ಬಸ್ ಸಂಚಾರ ಅಸ್ತವ್ಯಸ್ತ
ಬಸ್‌ಗಳ ಕೊರತೆಯಿಂದ ಪ್ರಯಾಣಿಕರ ಪರದಾಟ : ವಿದ್ಯಾರ್ಥಿಗಳಿಗೆ ಸಂಕಷ್ಟ

ಹೊಸಪೇಟೆ / ವಿಜಯನಗರ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ “50 ವರ್ಷದ ರಾಜಕೀಯ ಸಾರ್ಥಕ ಜೀವನ” ಅಂಗವಾಗಿ ಚಿತ್ರದುರ್ಗದಲ್ಲಿ ನಡೆದ ಖಾಸಗಿ ಕಾರ್ಯಕ್ರಮದ ಹಿನ್ನೆಲೆ ವಿಜಯನಗರ ಜಿಲ್ಲೆಯ ಹೊಸಪೇಟೆ ಬಸ್ ನಿಲ್ದಾಣದಲ್ಲಿ ಸರ್ಕಾರಿ ಬಸ್ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸಿದ ಘಟನೆ ಶನಿವಾರ ಕಂಡುಬಂದಿತು.

ಸಾಮಾನ್ಯ ದಿನಗಳಲ್ಲಿ ಹೊಸಪೇಟೆಯಿಂದ ಬಳ್ಳಾರಿ ಮಾರ್ಗಕ್ಕೆ ಐದು ರಿಂದ ಹತ್ತು ನಿಮಿಷಕ್ಕೊಮ್ಮೆ ಬಸ್ ಸೌಲಭ್ಯ ಲಭ್ಯವಿರುತ್ತದೆ. ಆದರೆ ಕಾರ್ಯಕ್ರಮಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಬಸ್‌ಗಳನ್ನು ನಿಯೋಜಿಸಿರುವ ಕಾರಣ ಎರಡು ಗಂಟೆಗಳಾದರೂ ಒಂದು ಬಸ್ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು.

ಬೆಳಗ್ಗೆಯಿಂದಲೇ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರು, ವಯೋವೃದ್ಧರು, ಗರ್ಭಿಣಿಯರು ಹಾಗೂ ಆಸ್ಪತ್ರೆಗಳಿಗೆ ತೆರಳಬೇಕಿದ್ದ ರೋಗಿಗಳು ಪರದಾಡುತ್ತಿರುವ ದೃಶ್ಯ ಕಂಡುಬಂತು. ನಿಗದಿತ ಸ್ಥಳಗಳಿಗೆ ತೆರಳಬೇಕಿದ್ದವರು ಗಂಟೆಗಟ್ಟಲೆ ಕಾಯುವಂತಾಯಿತು.

“ರಾಜಕಾರಣಿಗಳ ಸಂಭ್ರಮ ಒಂದೆಡೆ ನಡೆಯುತ್ತಿದ್ದರೆ ಸಾರ್ವಜನಿಕರ ಗೋಳು ಕೇಳುವವರು ಯಾರು?” ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಬಸ್‌ಗಳ ಕೊರತೆಯಿಂದ ಹೊಸಪೇಟೆ ಬಸ್ ನಿಲ್ದಾಣ ಬಹುತೇಕ ಬಿಕೋ ಎನ್ನುತ್ತಿದ್ದು, ಜನರು ಅನಿವಾರ್ಯವಾಗಿ ಖಾಸಗಿ ಟ್ರಾವೆಲ್ಸ್, ಆಟೋ ಹಾಗೂ ಖಾಸಗಿ ಬಸ್‌ಗಳತ್ತ ಮುಖ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಸಂದರ್ಭವನ್ನು ಬಳಸಿಕೊಂಡ ಕೆಲ ಖಾಸಗಿ ವಾಹನ ಚಾಲಕರು ಪ್ರಯಾಣ ದರ ಹೆಚ್ಚಿಸಿರುವುದಾಗಿ ಪ್ರಯಾಣಿಕರು ಆರೋಪಿಸಿದರು.

“ಸಾರ್ವಜನಿಕರ ಸೇವೆಗೆ ಇರುವ ಸರ್ಕಾರಿ ಬಸ್‌ಗಳನ್ನು ಖಾಸಗಿ ಕಾರ್ಯಕ್ರಮಗಳಿಗೆ ಬಳಸುವುದರಿಂದ ಸಾಮಾನ್ಯ ಜನರು ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆಗೆ, ಕಾರ್ಮಿಕರು ಕೆಲಸಕ್ಕೆ, ರೋಗಿಗಳು ಆಸ್ಪತ್ರೆಗೆ ಹೋಗಲು ಸಂಕಷ್ಟ ಎದುರಾಗಿದೆ. ಯಾವ ರಾಜಕೀಯ ಪಕ್ಷವಾದರೂ ಇಂತಹ ಸಂದರ್ಭಗಳಲ್ಲಿ ಬಲಿಯಾಗುವುದು ಬಡವರು ಮತ್ತು ವಿದ್ಯಾರ್ಥಿಗಳೇ” ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದರು.

ವಿಶೇಷವಾಗಿ ಬಳ್ಳಾರಿ, ಕುರುಗೋಡು, ಸಂಡೂರು ಹಾಗೂ ಕಂಪ್ಲಿ ಮಾರ್ಗಗಳಲ್ಲಿಯೂ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಕ್ರಮದ ವಿರುದ್ಧ ಪ್ರಯಾಣಿಕರು ತೀವ್ರ ಆಕ್ರೋಶ ಹೊರಹಾಕಿದರು.

ಇಂತಹ ಕಾರ್ಯಕ್ರಮಗಳಿಗಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಅಸ್ತವ್ಯಸ್ತಗೊಳಿಸಬಾರದು. ಸಾರ್ವಜನಿಕರ ಅನುಕೂಲತೆ ಗಮನದಲ್ಲಿಟ್ಟುಕೊಂಡು ಸಾರಿಗೆ ಇಲಾಖೆ ತುರ್ತು ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Tags

HospetBSY
share
ವಾರ್ತಾಭಾರತಿ
ವಾರ್ತಾಭಾರತಿ
Next Story
X