Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಎಸ್‌ಟಿ ಪಟ್ಟಿಗೆ ಕುರುಬ ಸಮಾಜ ಸೇರ್ಪಡೆ...

ಎಸ್‌ಟಿ ಪಟ್ಟಿಗೆ ಕುರುಬ ಸಮಾಜ ಸೇರ್ಪಡೆ ಯತ್ನ ಆರೋಪ: ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಬಹಿಷ್ಕಾರ

ವಾರ್ತಾಭಾರತಿವಾರ್ತಾಭಾರತಿ20 Sept 2025 11:41 PM IST
share
ಎಸ್‌ಟಿ ಪಟ್ಟಿಗೆ ಕುರುಬ ಸಮಾಜ ಸೇರ್ಪಡೆ ಯತ್ನ ಆರೋಪ: ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಬಹಿಷ್ಕಾರ

ವಿಜಯನಗರ/ಹೊಸಪೇಟೆ: ರಾಜ್ಯ ಸರಕಾರ ಎಸ್‌ಟಿ ಪಟ್ಟಿಗೆ ಕುರುಬ ಸಮಾಜವನ್ನು ಸೇರ್ಪಡೆ ಮಾಡಲು ಮುಂದಾಗಿರುವ ಕ್ರಮವನ್ನು ಖಂಡಿಸಿ, ವಾಲ್ಮೀಕಿ ನಾಯಕ ಸಮಾಜದ ಬಂಧುಗಳು ಶುಕ್ರವಾರ ಜಿಲ್ಲಾಧಿಕಾರಿ ಕಚೆೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯನ್ನು ಬಹಿಷ್ಕರಿಸಿದ ಘಟನೆ ಜರಗಿತು.

ಅ.೭ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅಧ್ಯಕ್ಷತೆಯಲ್ಲಿ ಜಯಂತಿ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಸಭೆಯ ಆರಂಭದಲ್ಲಿಯೇ ಮಾತನಾಡಿದ ತಾಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಗೋಸಲ ಭರಮಪ್ಪ, ದಾವಣಗೆರೆಯ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಗುರುವಾರ ಡಾ.ಪ್ರಸನ್ನಾನಂದಪುರಿ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಜರಗಿದ ರಾಜ್ಯ ಮಟ್ಟದ ವಾಲ್ಮೀಕಿ ಸಮಾಜದ ಸಭೆಯಲ್ಲಿ ಸರಕಾರ ಎಸ್‌ಟಿ ಪಟ್ಟಿಯಲ್ಲಿ ಕುರುಬ ಸೇರಿದಂತೆ ಇತರ ಸಮಾಜಗಳನ್ನು ಸೇರ್ಪಡೆ ಮಾಡಲು ಮುಂದಾಗಿರುವ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ರಾಜ್ಯ ಮಟ್ಟದ ಸಭೆಯ ತೀರ್ಮಾನದಂತೆ ಸೆ.೨೫ರಂದು ರಾಜ್ಯಾದ್ಯಂತ ವಾಲ್ಮೀಕಿ ಸಮಾಜ ಪ್ರತಿಭಟನೆ ನಡೆಸಿ, ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು. ನಮ್ಮ ಮನವಿಗೆ ಸ್ಪಂದಿಸಿ ಸರಕಾರ ಎಸ್‌ಟಿ ಪಟ್ಟಿಗೆ ವಾಲ್ಮೀಕಿ ಸಮಾಜವನ್ನು ಸೇರ್ಪಡೆ ಮಾಡುವ ಪ್ರಯತ್ನದಿಂದ ಹಿಂದೆ ಸರಿಯಬೇಕು. ಈ ಬಗ್ಗೆ ಸರಕಾರದ ನಡೆಯನ್ನು ಗಮನಿಸಿಕೊಂಡು ಆಚರಿಸಲಾಗುವ ವಾಲ್ಮೀಕಿ ಜಯಂತಿಯಲ್ಲಿ ಸಮಾಜ ಭಾಗವಹಿಸಬೇಕೋ, ಬೇಡವೋ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಸಭೆಯನ್ನು ಬಹಿಷ್ಕರಿಸಿ, ಸಭೆಯಿಂದ ಹೊರ ನಡೆದರು.

ಈ ಸಂದರ್ಭಲ್ಲಿ ತಾಲೂಕು ವಾಲ್ಮೀಕಿ ಸಮಾಜದ ಪ್ರಧಾನ ಕಾರ್ಯದರ್ಶಿ ದೇವರಮನಿ ಶ್ರೀನಿವಾಸ, ಮುಖಂಡರಾದ ಡಾ.ಪನ್ನಂಗಧರ್, ಕಿಶೋರ್ ಕುಮಾರ್, ಕಿಚಿಡಿ ಶ್ರೀನಿವಾಸ, ದುರುಗಪ್ಪ ಪೂಜಾರಿ, ಗುಜ್ಜಲ ಚಂದ್ರಶೇಖರ್, ಬಿಸಾಟಿ ತಾಯಪ್ಪ ನಾಯಕ, ಬಂಡೆ ಶ್ರೀನಿವಾಸ, ಎಸ್.ಎಸ್.ಚಂದ್ರಶೇಖರ್, ಗುಜ್ಜಲ ಶ್ರೀನಾಥ, ಕಣ್ಣಿ ಶ್ರೀಕಂಠ, ಜಂಬಾನಳ್ಳಿ ವಸಂತ, ಜಂಬಾನಳ್ಳಿ ಸತ್ಯನಾರಾಯಣ, ಕಟಿಗಿ ರಾಮಕೃಷ್ಣ, ನಾಣಿಕೇರಿ ವೆಂಕೋಬ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X