Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ:...

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ: ಕೂಡ್ಲಿಗಿಯ ಬಾಲಕಿ ಕುಸುಮಗೆ ಕಂಚಿನ ಪದಕ

ವಾರ್ತಾಭಾರತಿವಾರ್ತಾಭಾರತಿ18 Oct 2026 7:42 PM IST
share
ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ: ಕೂಡ್ಲಿಗಿಯ ಬಾಲಕಿ ಕುಸುಮಗೆ ಕಂಚಿನ ಪದಕ

ಕೂಡ್ಲಿಗಿ/ವಿಜಯನಗರ: ಅಜ್ಜಿಯ ಪ್ರೇರಣೆಯಿಂದ ಚಿಕ್ಕ ವಯಸ್ಸಿನಲ್ಲೇ ಯೋಗದತ್ತ ಒಲವು ಬೆಳೆಸಿಕೊಂಡ ಕೂಡ್ಲಿಗಿಯ ಪ್ರತಿಭಾವಂತ ವಿದ್ಯಾರ್ಥಿನಿ ಕೆ.ಎನ್. ಕುಸುಮ, ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದಸರಾ ಕ್ರೀಡಾ ಉಪಸಂಸ್ಥೆ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ 'ಸಿ.ಎಂ. ಕಪ್' ಯೋಗಾಸನ ವಿಭಾಗದಲ್ಲಿ ಕುಸುಮ ಈ ಗಮನಾರ್ಹ ಸಾಧನೆ ಮಾಡಿದ್ದಾರೆ. ಈ ಮೂಲಕ ತಮ್ಮ ಅದ್ಭುತ ಯೋಗ ಪ್ರತಿಭೆಯನ್ನು ರಾಜ್ಯಮಟ್ಟದಲ್ಲಿ ಅನಾವರಣಗೊಳಿಸಿದ್ದಾರೆ.

ಕೂಡ್ಲಿಗಿಯ ನಾಗರಾಜ ಕೊಟ್ರಪ್ಪನವರ್ ಅವರ ಪುತ್ರಿಯಾಗಿರುವ ಕುಸುಮ, ಪಟ್ಟಣದ ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಬಾಲ್ಯದಿಂದಲೇ ತನ್ನ ಅಜ್ಜಿ ಬ್ಯಾಳಿ ಗೌರಮ್ಮ ಅವರ ಮಾರ್ಗದರ್ಶನದಲ್ಲಿ ನಿರಂತರವಾಗಿ ಯೋಗಾಭ್ಯಾಸ ನಡೆಸುತ್ತಾ ಬಂದಿರುವ ಈ ಬಾಲಕಿಯ ಶಿಸ್ತು ಹಾಗೂ ಕಠಿಣ ಪರಿಶ್ರಮವೇ ಈ ಯಶಸ್ಸಿಗೆ ಕಾರಣವಾಗಿದೆ.

ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡಾಕ್ಷೇತ್ರದಲ್ಲೂ ಮುನ್ನುಗ್ಗುತ್ತಿರುವ ಕುಸುಮಳ ಈ ಸಾಧನೆಗೆ ಪೋಷಕರು, ಶಾಲಾ ಶಿಕ್ಷಕರು ಹಾಗೂ ಕೂಡ್ಲಿಗಿ ತಾಲೂಕಿನ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ.

Tags

Bronze medalKusumaKudligi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X