Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಅ.5ರಂದು ವಿಜಯನಗರ ಜಿಲ್ಲೆಗೆ ಕೇಂದ್ರ ಬರ...

ಅ.5ರಂದು ವಿಜಯನಗರ ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ : ಕವಿತಾ ಎಸ್. ಮನ್ನಿಕೇರಿ

ವಾರ್ತಾಭಾರತಿವಾರ್ತಾಭಾರತಿ3 Oct 2026 6:48 PM IST
share
ಅ.5ರಂದು ವಿಜಯನಗರ ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ : ಕವಿತಾ ಎಸ್. ಮನ್ನಿಕೇರಿ

ವಿಜಯನಗರ (ಹೊಸಪೇಟೆ) : ಮುಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬರದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ, ಅ. 5ರಂದು ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಆಗಮಿಸಲಿದೆ. ತಂಡವು ಜಿಲ್ಲೆಯ ವಿವಿಧ ತಾಲ್ಲೂಕುಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ, ಕೃಷಿ ಹಾಗೂ ಕುಡಿಯುವ ನೀರಿನ ಸ್ಥಿತಿಗತಿ ಸೇರಿದಂತೆ ವಿವಿಧ ಕ್ಷೇತ್ರಗಳ ಕುರಿತು ಅಧ್ಯಯನ ನಡೆಸಲಿರುವುದರಿಂದ, ಅಧಿಕಾರಿಗಳು ಕೇಂದ್ರ ತಂಡಕ್ಕೆ ಜಿಲ್ಲೆಯ ನೈಜ ಪರಿಸ್ಥಿತಿಯನ್ನು ಯಾವುದೇ ಮುಚ್ಚುಮರೆಯಿಲ್ಲದೆ ಸಮರ್ಪಕವಾಗಿ ಮನವರಿಕೆ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕೇಂದ್ರ ಬರ ಅಧ್ಯಯನ ತಂಡದ ಭೇಟಿಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇಂದ್ರ ತಂಡ ಜಿಲ್ಲೆಗೆ ಆಗಮಿಸುವ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಜವಾಬ್ದಾರಿಗಳನ್ನು ಅರಿತು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ತಂಡವು ಯಾವುದೇ ಇಲಾಖೆ ಅಥವಾ ವಿಷಯಕ್ಕೆ ಸಂಬಂಧಿಸಿದ ಮಾಹಿತಿ ಕೇಳಿದರೂ ವಿಳಂಬವಿಲ್ಲದೆ ದಾಖಲೆ ಹಾಗೂ ವಾಸ್ತವಾಂಶಗಳನ್ನು ಆಧರಿಸಿದ ಸಮರ್ಪಕ ಮಾಹಿತಿಯನ್ನು ಒದಗಿಸಬೇಕು. ಯಾವುದೇ ಕಾರಣಕ್ಕೂ ತಪ್ಪು, ಅಪೂರ್ಣ ಅಥವಾ ದಾರಿ ತಪ್ಪಿಸುವ ಮಾಹಿತಿಯನ್ನು ನೀಡಬಾರದು ಎಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು.

ಬರ ಪರಿಸ್ಥಿತಿಯ ನೈಜ ಚಿತ್ರಣವನ್ನು ಕೇಂದ್ರ ತಂಡಕ್ಕೆ ತಿಳಿಸುವುದು ಅತ್ಯಂತ ಮುಖ್ಯವಾಗಿದೆ. ಮಳೆ ಕೊರತೆ, ಬೆಳೆ ನಷ್ಟ, ಕೃಷಿ ಚಟುವಟಿಕೆಗಳ ಮೇಲಿನ ಪರಿಣಾಮ, ಜಲಮೂಲಗಳ ಸ್ಥಿತಿ, ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು ಹಾಗೂ ಉದ್ಯೋಗದ ಅಗತ್ಯತೆ ಸೇರಿದಂತೆ ಬರದಿಂದ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸ್ಥಳೀಯ ಮಟ್ಟದ ವಾಸ್ತವಾಂಶಗಳನ್ನು ಅಧಿಕಾರಿಗಳು ಸಿದ್ಧವಾಗಿಟ್ಟುಕೊಳ್ಳಬೇಕು ಎಂದರು.

ಬರ ಪರಿಸ್ಥಿತಿಯಲ್ಲಿ ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಬರ ನಿರ್ವಹಣೆಯ ಭಾಗವಾಗಿ ನಡೆಯುತ್ತಿರುವ ವಿ.ಜಿ. ರಾಮ್ ಜಿ ಕಾಮಗಾರಿಗಳು ನಿಯಮಾನುಸಾರ ಮತ್ತು ಪಾರದರ್ಶಕವಾಗಿ ನಡೆಯುತ್ತಿವೆಯೇ ಎಂಬುದರ ಕುರಿತು ಅಧಿಕಾರಿಗಳು ವಿಶೇಷ ಗಮನಹರಿಸಬೇಕು. ಕಾಮಗಾರಿಗಳ ಆಯ್ಕೆ, ಸ್ಥಳ, ಹಾಜರಾತಿ, ಕೂಲಿ ಕಾರ್ಮಿಕರ ಭಾಗವಹಿಸುವಿಕೆ, ಕೂಲಿ ಪಾವತಿ ಸೇರಿದಂತೆ ಪ್ರತಿಯೊಂದು ಹಂತದಲ್ಲೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.

ಕೂಲಿ ಕಾರ್ಮಿಕರಿಗೆ ಅವರ ಶ್ರಮಕ್ಕೆ ಅನುಗುಣವಾಗಿ ನೇರವಾಗಿ ಹಾಗೂ ಸಮಯಕ್ಕೆ ಸರಿಯಾಗಿ ಕೂಲಿ ಹಣ ಪಾವತಿಯಾಗುವಂತೆ ಕ್ರಮವಹಿಸಬೇಕು. ಯಾವುದೇ ಹಂತದಲ್ಲೂ ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು. ಕಾರ್ಮಿಕರ ಹೆಸರಿನಲ್ಲಿ ಬೇರೆಯವರು ಹಣ ಪಡೆಯುವುದು, ಕಾಮಗಾರಿಗಳಲ್ಲಿ ಅಕ್ರಮ ಅಥವಾ ಅವ್ಯವಹಾರಕ್ಕೆ ಅವಕಾಶ ನೀಡುವುದು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕೇಂದ್ರ ತಂಡದ ಭೇಟಿ ಸಂದರ್ಭದಲ್ಲಿ ಯಾವುದೇ ಲೋಪದೋಷಗಳು ಅಥವಾ ಗೊಂದಲಗಳಿಗೆ ಅವಕಾಶವಾಗದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಅಗತ್ಯ ದಾಖಲೆಗಳು, ಅಂಕಿ-ಅಂಶಗಳು ಹಾಗೂ ಕ್ಷೇತ್ರಮಟ್ಟದ ಮಾಹಿತಿಯನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿನ ಬರ ಪರಿಸ್ಥಿತಿ ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ಸ್ಪಷ್ಟ ಮಾಹಿತಿಯನ್ನು ಹೊಂದಿರಬೇಕು ಎಂದರು.

ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕುಡಿಯುವ ನೀರು, ಪಶುಸಂಗೋಪನೆ, ಆಹಾರ ಮತ್ತು ನಾಗರಿಕ ಸರಬರಾಜು ಸೇರಿದಂತೆ ಬರ ಪರಿಸ್ಥಿತಿಗೆ ಸಂಬಂಧಿಸಿದ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕೇಂದ್ರ ತಂಡ ಭೇಟಿ ನೀಡುವ ಸ್ಥಳಗಳಲ್ಲಿ ಅಗತ್ಯ ಮೂಲಸೌಕರ್ಯ ಹಾಗೂ ಮಾಹಿತಿಯನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಕೇಂದ್ರ ತಂಡದ ಭೇಟಿ ಕೇವಲ ದಾಖಲೆಗಳ ಪರಿಶೀಲನೆಗೆ ಸೀಮಿತವಾಗದೆ, ಬರದಿಂದ ಜನರು ಹಾಗೂ ರೈತರು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವ ಅವಕಾಶವಾಗಬೇಕು. ಆದ್ದರಿಂದ ಅಧಿಕಾರಿಗಳು ಕಚೇರಿ ದಾಖಲೆಗಳ ಜೊತೆಗೆ ಕ್ಷೇತ್ರದಲ್ಲಿನ ವಾಸ್ತವ ಪರಿಸ್ಥಿತಿಯನ್ನೂ ತಂಡದ ಗಮನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಉಪವಿಭಾಗಾಧಿಕಾರಿ ವಿವೇಕಾನಂದ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೆ. ತಿಮ್ಮಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

vijayanagaradrought
share
ವಾರ್ತಾಭಾರತಿ
ವಾರ್ತಾಭಾರತಿ
Next Story
X