Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ಗಳಿಗೆ...

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ಗಳಿಗೆ ಚೈನ್ ಅಳವಡಿಕೆ ಕಾರ್ಯ ಜೂನ್ ಒಳಗೆ ಪೂರ್ಣ: ಶಾಸಕ ಗವಿಯಪ್ಪ

ವಾರ್ತಾಭಾರತಿವಾರ್ತಾಭಾರತಿ25 May 2026 7:19 PM IST
share
ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ಗಳಿಗೆ ಚೈನ್ ಅಳವಡಿಕೆ ಕಾರ್ಯ ಜೂನ್ ಒಳಗೆ ಪೂರ್ಣ: ಶಾಸಕ ಗವಿಯಪ್ಪ

ವಿಜಯನಗರ(ಹೊಸಪೇಟೆ) : ತುಂಗಭದ್ರಾ ಜಲಾಶಯದ ಸುರಕ್ಷತೆ ಹಾಗೂ ಆಧುನೀಕರಣದ ದೃಷ್ಟಿಯಿಂದ ಮಹತ್ವದ ಕ್ರಸ್ಟ್ ಗೇಟ್‌ಗಳಿಗೆ ಚೈನ್ ಅಳವಡಿಸುವ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದ್ದು, ಜೂನ್ 15 ಅಥವಾ 20ರೊಳಗೆ ಎಲ್ಲಾ ಗೇಟ್‌ಗಳ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ತಿಳಿಸಿದ್ದಾರೆ.

ಜಲಾಶಯದ ಒಟ್ಟು 33 ಗೇಟ್‌ಗಳ ಫ್ಯಾಬ್ರಿಕೇಷನ್ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ತುಕ್ಕು ಹಿಡಿದ ಹಳೆಯ ತಾಂತ್ರಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ನವೀಕರಿಸಲಾಗುತ್ತಿದೆ. ಈಗಾಗಲೇ ಎರಡು ಗೇಟ್‌ಗಳಿಗೆ ಹೊಸ ಚೈನ್ ಅಳವಡಿಸಲಾಗಿದ್ದು, ಮೇ ಅಂತ್ಯದೊಳಗೆ 15 ಗೇಟ್‌ಗಳ ಕೆಲಸ ಮುಗಿಯಲಿದೆ ಎಂದು ಅವರು ಮಾಹಿತಿ ನೀಡಿದರು.

ಪ್ರಸ್ತುತ 17 ಗೇಟ್‌ಗಳಿಗೆ ಅಗತ್ಯವಿರುವ ಚೈನ್‌ಗಳು ಸಿದ್ಧವಾಗಿದ್ದು, ಉಳಿದ ಚೈನ್‌ಗಳು ಜೂನ್ ಮೊದಲ ವಾರದಲ್ಲಿ ಲಭ್ಯವಾಗಲಿವೆ. ಪ್ರತಿಯೊಂದು ಗೇಟ್ ಸುಮಾರು 50 ಟನ್ ತೂಕ ಹೊಂದಿದ್ದು, ಎರಡು ಚೈನ್‌ಗಳ ತೂಕ ಸೇರಿ ಒಟ್ಟು 55 ಟನ್ ತೂಕದ ವ್ಯವಸ್ಥೆಯನ್ನು ಸುರಕ್ಷಿತವಾಗಿ ಅಳವಡಿಸಲಾಗುತ್ತಿದೆ ಎಂದು ಹೇಳಿದರು.

ಮೂರು-ನಾಲ್ಕು ವರ್ಷಗಳ ಹಿಂದೆ ಜಲಾಶಯದ ಸುರಕ್ಷತಾ ಸರ್ವೇ ನಡೆಸಲಾಗಿದ್ದು, ನೀರಿನ ಸೋರಿಕೆ ಕಂಡುಬಂದ ಭಾಗಗಳಲ್ಲಿ ಗ್ರೌಟಿಂಗ್ ಮತ್ತು ಇಂಜೆಕ್ಷನ್ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಇದರಿಂದ ಮುಂದಿನ 40 ವರ್ಷಗಳ ಕಾಲ ಜಲಾಶಯ ಸುರಕ್ಷಿತವಾಗಿರಲಿದೆ ಎಂದು ಟಿಬಿ ಬೋರ್ಡ್ ಅಧಿಕಾರಿಗಳು ತಾಂತ್ರಿಕ ಭರವಸೆ ನೀಡಿದ್ದಾರೆ ಎಂದರು.

ನವಲಿ ಪರ್ಯಾಯ ಜಲಾಶಯ ನಿರ್ಮಾಣದ ಅಗತ್ಯತೆ ಕುರಿತು ಮಾತನಾಡಿದ ಅವರು, ತುಂಗಭದ್ರಾ ಜಲಾಶಯದಲ್ಲಿ ಸುಮಾರು 30 ಟಿಎಂಸಿ ಹೂಳು ತುಂಬಿರುವ ಹಿನ್ನೆಲೆ ಹೊಸ ಜಲಾಶಯ ನಿರ್ಮಾಣ ಅಗತ್ಯವಾಗಿದೆ. ಸಿಡಬ್ಲ್ಯೂಸಿ ಅನುಮತಿ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗೆ 10ರಿಂದ 15 ವರ್ಷ ಬೇಕಾಗುವ ಸಾಧ್ಯತೆ ಇರುವುದರಿಂದ ಶೀಘ್ರದಲ್ಲೇ ಎಲ್ಲಾ ಶಾಸಕರ ನಿಯೋಗದೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಯೋಜನೆ ಆರಂಭಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಟಿಬಿ ಡ್ಯಾಂ ಕಾರ್ಯನಿರ್ವಾಹಕ ಅಧಿಕಾರಿ ಎನ್.ಚಂದ್ರಶೇಖರ್, ಎಇಇ ಕೆ.ಜ್ಞಾನೇಶ್ವರ, ಸಹಾಯಕ ಇಂಜಿನಿಯರ್ ಕಿರಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Tungabhadra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X