Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ:...

ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ: ಶಾಸಕ ಹೆಚ್.ಆರ್.ಗವಿಯಪ್ಪ

ವಾರ್ತಾಭಾರತಿವಾರ್ತಾಭಾರತಿ19 Sept 2025 6:52 PM IST
share
ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ: ಶಾಸಕ ಹೆಚ್.ಆರ್.ಗವಿಯಪ್ಪ

ವಿಜಯನಗರ (ಹೊಸಪೇಟೆ): ಶಾಲೆಗಳ ಅಭಿವೃದ್ಧಿ ಸೇರಿದಂತೆ ಅಗತ್ಯ ಮೂಲಸೌಕರ್ಯವನ್ನು ಸರಕಾರ ಒದಗಿಸಬಹುದು. ಆದರೆ ,ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಶಿಕ್ಷಕರ ಹೊಣೆಗಾರಿಕೆ. ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ ಎಂದು ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ ಹೇಳಿದರು.

ನಗರದ ಸಾಯಿಲೀಲಾ ರಂಗಮಂದಿರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ 2 ವರ್ಷಗಳಲ್ಲಿ ಹೊಸಪೇಟೆ ಕ್ಷೇತ್ರದಲ್ಲಿ 90 ತರಗತಿ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದ್ದು, 350 ಶೀಥಿಲಾವಸ್ಥೆಯಲ್ಲಿದ್ದ ಕೊಠಡಿಗಳ ದುರಸ್ತಿ ಕಾರ್ಯ ನಡೆದಿದೆ. ಶೈಕ್ಷಣಿಕ ಪ್ರಗತಿಗೆ ಸರ್ಕಾರ ಮೊದಲ ಆದ್ಯತೆ ನೀಡುತ್ತಿದೆ ಎಂದರು.

ನಗರದ ಜಿಲ್ಲಾ ಕ್ರೀಡಾಂಗಣದ ಬಳಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಪಟುಗಳಿಗೆ ತರಬೇತಿ, ವಸತಿ ಮತ್ತು ಸೌಲಭ್ಯಗಳೊಂದಿಗೆ ಹೊಸ ಕ್ರೀಡಾ ಶಾಲೆಯನ್ನು ನಿರ್ಮಿಸಲಾಗುತ್ತಿದೆ. ಜೊತೆಗೆ ಜಿಲ್ಲಾ ಕ್ರೀಡಾಂಗಣದ ಅಭಿವೃದ್ಧಿಗೆ ಸಹ 5 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಮಕ್ಕಳಲ್ಲಿ ಮೊಬೈಲ್ ವ್ಯಸನ ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಶಿಕ್ಷಕರು ಅವರನ್ನು ಮೈದಾನಕ್ಕೆ ಕರೆತಂದು ಕ್ರೀಡೆಗಳ ಆಸಕ್ತಿ ಬೆಳೆಸಬೇಕು ಎಂದು ಸಲಹೆ ನೀಡಿದರು. ಕ್ಷೇತ್ರದ 117 ಸರ್ಕಾರಿ ಶಾಲೆಗಳ ಪೈಕಿ ಐದು ಪ್ರೌಢಶಾಲೆಗಳನ್ನು ಆಯ್ಕೆ ಮಾಡಿ ಮಾದರಿಯುತ ಸ್ಮಾರ್ಟ್ ಶಾಲೆಗಳಾಗಿ ಪರಿವರ್ತಿಸುವ ಯೋಜನೆ ರೂಪಿಸಲಾಗಿದೆ. ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಸರ್ಕಾರಿ ಶಾಲೆಗಳೇ ನೀಡಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ಕಳೆದ ವರ್ಷ ಎಸೆಸೆಲ್ಸಿ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ರಾಜ್ಯದಲ್ಲಿ 18ನೇ ಸ್ಥಾನ ಪಡೆದು, ಕಲ್ಯಾಣ ಕರ್ನಾಟಕದಲ್ಲಿ ಪ್ರಥಮ ಸ್ಥಾನ ಗಳಿಸಿದೆ. ಮುಂದಿನ ಫಲಿತಾಂಶದಲ್ಲಿ ಹೆಚ್ಚಿನ ಪ್ರಗತಿಯನ್ನು ನಿರೀಕ್ಷಿಸಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಅವರು, ಮಕ್ಕಳಿಗೆ ಸಂಸ್ಕಾರಯುತ ಮತ್ತು ನೈತಿಕತೆಯ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವವಾಗಿದ್ದು, ಶಿಕ್ಷಕ ವೃತ್ತಿಯೇ ವಿಶ್ವದಲ್ಲೇ ಪವಿತ್ರವಾದ ವೃತ್ತಿ ಎಂದು ಹೊಗಳಿದರು.

ವಿಶ್ರಾಂತ ಪ್ರಾಧ್ಯಾಪಕ ಡಾ. ಶಿವಾನಂದ ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್. ನಿಯಾಜಿ, ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಕೆ. ಶಿವಮೂರ್ತಿ, ಶಾಲಾ ಶಿಕ್ಷಣ ಇಲಾಖೆ ಡಯಟ್ ಉಪನಿರ್ದೇಶಕ ಜೆ.ಎಂ. ತಿಪ್ಪೇಸ್ವಾಮಿ, ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ, ಬಿಇಒ ಶೇಖರಪ್ಪ ಹೊರಪೇಟೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X