Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಕಂಪ್ಲಿ | ಅಪರಾಧ ತಡೆ ಮಾಸಾಚರಣೆ...

ಕಂಪ್ಲಿ | ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 Dec 2025 7:52 PM IST
share
ಕಂಪ್ಲಿ | ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

ಕಂಪ್ಲಿ , ಡಿ. 29: ಅಪರಾಧ ತಡೆ ಮಾಸಾಚರಣೆಯ ಕಾರ್ಯಕ್ರಮ ಅಂಗವಾಗಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮತ್ತು ಬಂಗಾರದ ಅಂಗಡಿಗಳ ಮಾಲಕರಿಗೆ ವಿಶೇಷ ಸಭೆ ಆಯೋಜಿಸಲಾಗಿತ್ತು.

ಠಾಣೆಯ ಪಿಐ ಕೆ.ಬಿ.ವಾಸುಕುಮಾರ ಮಾತನಾಡಿ, ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಯವರು ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಗುಣಮಟ್ಟದ ಸಿಸಿಟಿವಿ ಕ್ಯಾಮೆರಾ ಬ್ಯಾಂಕಿನ ಒಳಗೆ ಮತ್ತು ಹೊರಗೆ ಅಳವಡಿಸಿ, 24/7 ರೆಕಾರ್ಡಿಂಗ್ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು.

ಅಗತ್ಯಕ್ಕೆ ಅನುಗುಣವಾಗಿ ನುರಿತ ಸಶಸ್ತ್ರ ಭದ್ರತಾ ಸಿಬ್ಬಂದಿ ನೇಮಿಸಿಕೊಳ್ಳಬೇಕು, ತುರ್ತು ಸಂದರ್ಭದಲ್ಲಿ ಶಬ್ಧ ಮಾಡುವ ’ಸೈರನ್’ ಅಥವಾ ’ಪ್ಯಾನಿಕ್ ಬಟನ್’ಗಳನ್ನು ಸುಲಭವಾಗಿ ಕೈಗೆಟುಕುವ ಜಾಗದಲ್ಲಿ ಇರಿಸಬೇಕು ಎಂದು ಸಲಹೆ ನೀಡಿದರು.

ಹೆಚ್ಚಿನ ಹಣ ಸಾಗಿಸುವಾಗ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಅಥವಾ ಖಾಸಗಿ ಭದ್ರತಾ ವಾಹನ ಬಳಸಬೇಕು. ಬಂಗಾರದ ಅಂಗಡಿಗಳ ಮಾಲಕರು ಚಿನ್ನಾಭರಣ ಇರಿಸಲು ಅತ್ಯಾಧುನಿಕ ಮತ್ತು ಭದ್ರವಾದ ಲಾಕರ್ ಅಥವಾ ಸೇಫ್‌ಗಳನ್ನು ಬಳಸಿ, ಅಂಗಡಿಗೆ ಬರುವ ಅಪರಿಚಿತರ ಚಲನವಲನದ ಮೇಲೆ ನಿಗಾ ಇಡಬೇಕು. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಮುಂದಾಗುವ ಅನಾಹುತ ತಡೆಗಟ್ಟಬೇಕು ಎಂದರು.

ಅಂಗಡಿಯ ಸುತ್ತಮುತ್ತ ರಾತ್ರಿಯ ವೇಳೆಯೂ ಕೂಡ ಉತ್ತಮ ಬೆಳಕಿನ ವ್ಯವಸ್ಥೆ ಇರಬೇಕು, ಪ್ರತಿಯೊಬ್ಬ ಗ್ರಾಹಕರ ಗುರುತಿನ ಚೀಟಿ ಅಥವಾ ಮೊಬೈಲ್ ಸಂಖ್ಯೆ ದಾಖಲಿಸಿಕೊಳ್ಳುವ ಅಭ್ಯಾಸ ಮಾಡಿಕೊಳ್ಳಬೇಕು. ಇನ್ನೂ ಸ್ಥಳೀಯ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ ತುರ್ತು ಸಂಪರ್ಕಕ್ಕಾಗಿ ಪ್ರದರ್ಶಿಸಬೇಕು ಹಾಗೂ ಅಪರಾಧ ತಡೆ ಕುರಿತು ಪೊಲೀಸರು ನೀಡುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅರಿವು ಮೂಡಿಸಿದರು.

ಯಾವುದೇ ಅಹಿತಕರ ಘಟನೆ ಸಂಭವಿಸಿದರೆ ತಕ್ಷಣವೇ 112 ಸಹಾಯವಾಣಿಗೆ ಕರೆ ಮಾಡಿ ತಿಳಿಸಬೇಕು ಎಂದು ಬ್ಯಾಂಕ್ ಹಾಗೂ ಆಭರಣಗಳ ಅಂಗಡಿ ಮಾಲಕರಿಗೆ ಕರೆ ನೀಡಿದರು.

ಕಾನೂನು ಸುವ್ಯವಸ್ಥೆಯ ಪಿಎಸ್‌ಐ ಅವಿನಾಶ್ ಕಾಂಬ್ಳೆ ಸೇರಿದಂತೆ ಠಾಣಾಧಿಕಾರಿಗಳು, ಪೊಲೀಸ್ ಪೇದೆಗಳು, ವಿವಿಧ ಅಂಗಡಿ ಮಾಲೀಕರು, ಬ್ಯಾಂಕಿನ ಮುಖ್ಯಸ್ಥರು, ಸಾರ್ವಜನಿಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X