ಹೊಸಪೇಟೆ| ಅಡುಗೆ ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ 8 ಮಂದಿಗೆ ಗಾಯ

ವಿಜಯನಗರ : ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಬೆಳಗಿನ ಜಾವ ಅಡುಗೆ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಡೆದಿದೆ.
ಸ್ಫೋಟದ ರಭಸಕ್ಕೆ ಮನೆ ಗೋಡೆ ಕುಸಿದು ಒಂದೇ ಕುಟುಂಬದ ಎಂಟು ಜನರಿಗೆ ಗಾಯಗಳಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಚಿಕಿತ್ಸೆಗೆ ಹತ್ತಿರದ ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ, ಹೊಸಪೇಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಸ್ಪತ್ರೆಗೆ ಸಚಿವರ ಭೇಟಿ :
ಸಿಲಿಂಡರ್ ಸ್ಫೋಟದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹ್ಮದ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭ ಶಾಸಕ ಎನ್.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿ ಕವಿತಾ ಮಣ್ಣಿಕೇರಿ, ಎಸ್.ಪಿ ಜಾನ್ಹವಿ ಉಪಸ್ಥಿತರಿದ್ದರು.
Next Story







