ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಸೌಲಭ್ಯ ಪಡೆಯಲು https://www.kaushalkar.com ವೆಬ್‌ಸೈಟ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಮೇಲ್ಕಂಡ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತವೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿ ಸಲಿಸಲು ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡಿನಲ್ಲಿರುವಂತೆ ಹೆಸರು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‌ಪುಸ್ತಕದಲ್ಲಿ ಹೊಂದಾಣಿಕೆಯಾಗಬೇಕು. ಗ್ರಾಮಒನ್, ಬೆಂಗಳೂರು ಒನ್, ಕರ್ನಾಟಕ ಒನ್, ನಾಗರಿಕ ಸೇವಾ ಕೇಂದ್ರಗಳ ಮೂಲಕ ಸೇವಾಸಿಂಧು ಪೋರ್ಟಲ್ www.sevasindhu.karnataka.gov.in ನಲ್ಲಿ ಆನ್‌ಲೈನ್‌ನಲ್ಲಿ ಜೂ.30 ರೊಳಗೆ ಅರ್ಜಿ ಸಲ್ಲಿಸಬೇಕು. ಸೌಲಭ್ಯಗಳ ವಿವರ, ಅರ್ಹತೆ, ಮಾನದಂಡ ಮತ್ತು ದಾಖಲಾತಿಗಳ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.dbcdc.karnataka.gov.in ಗೆ ಭೇಟಿ ನೀಡಬಹುದು ಅಥವಾ ನಿಗಮದ ದೂರವಾಣಿ ಸಂಖ್ಯೆ 080-22374832 ಮತ್ತು ಮೊಬೈಲ್ ಸಂಖ್ಯೆ: 8050770004, 8050770005 ಗೆ ಅಥವಾ ಕೊಪ್ಪಳ ಕಚೇರಿ ದೂ.ಸಂ: 08539-221847 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.