Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಜಲಮೂಲಗಳ ಸಂರಕ್ಷಣೆಗೆ ಗಣತಿ ಕಾರ್ಯ...

ಜಲಮೂಲಗಳ ಸಂರಕ್ಷಣೆಗೆ ಗಣತಿ ಕಾರ್ಯ ಅಚ್ಚುಕಟ್ಟಾಗಿ ನಿರ್ವಹಿಸಿ: ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಸೂಚನೆ

ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ3 July 2025 7:42 PM IST
share
ಜಲಮೂಲಗಳ ಸಂರಕ್ಷಣೆಗೆ ಗಣತಿ ಕಾರ್ಯ ಅಚ್ಚುಕಟ್ಟಾಗಿ ನಿರ್ವಹಿಸಿ: ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಸೂಚನೆ

ವಿಜಯನಗರ(ಹೊಸಪೇಟೆ): ಜಿಲ್ಲೆಯಲ್ಲಿರುವ ನೀರಾವರಿ ಪ್ರದೇಶಗಳಲ್ಲಿನ ನೀರಿನಾಸರೆಗಳ ಗಣತಿ ಕಾರ್ಯವನ್ನು ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸಿ ಸೂಕ್ತ ಅಂಕಿಅಂಶಗಳನ್ನು ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಂಖ್ಯಿಕ ವಿಭಾಗ ಮತ್ತು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಗುರುವಾರ ಮಾತನಾಡಿದರು, ಜಲಸಂಪನ್ಮೂಲ ಇಲಾಖೆಯ ಶೇ.100 ರಷ್ಟು ಕೇಂದ್ರ ಸುರಕ್ಷಿತ ಸಣ್ಣ ನೀರಾವರಿ ಅಂಕಿ-ಅಂಶಗಳ ಸಮನ್ವಯೀಕರಣ ಯೋಜನೆಯಡಿಯಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ಸಣ್ಣ ನೀರಾವರಿ ಗಣತಿಯನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿರುವ ಎಲ್ಲಾ ಸಣ್ಣ ನೀರಾವರಿ ಹಾಗೂ ನೀರಿನಾಸರೆಗಳ ಗಣತಿಯನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ಗಣತಿ ಕಾರ್ಯ ಮಾಡುವ ಮೇಲ್ವಿಚಾರಕರಿಗೆ ಮತ್ತು ತಾಲೂಕು ಮಟ್ಟದಲ್ಲಿ ಗಣತಿ ಕಾರ್ಯ ಕೈಗೊಳ್ಳುವ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಗಣತಿ ಕಾರ್ಯ ವಿಧಾನದ ಕುರಿತು ಸೂಕ್ತ ತರಬೇತಿ ಹೊಂದಬೇಕಿದೆ. ಕಂದಾಯ ಇಲಾಖೆ, ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಭಾರಿ ಮತ್ತು ಮಧ್ಯಮ ನೀರಾವರಿ ಇಲಾಖೆ, ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯತೆಯಿಂದ ಗಣತಿ ಕ್ಷೇತ್ರ ಕಾರ್ಯ ಕೈಗೊಳ್ಳಬೇಕು ಎಂದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಪತ್ರಿಬಸಪ್ಪ ಅವರು ಮಾತನಾಡಿ, ಪ್ರಸ್ತುತ 2023-24ನೇ ವರ್ಷವನ್ನು ಆಧರಿಸಿ 7ನೇ ಸಣ್ಣ ನೀರಾವರಿ ಹಾಗೂ 2ನೇ ನೀರಿನಾಸರೆಗಳ ಗಣತಿಯನ್ನು ಡಿಜಿಟಲ್ ಮೋಡ್‌ನೊಂದಿಗೆ ಪ್ರಥಮ ಬಾರಿಗೆ ಮೊಬೈಲ್ ಆಪ್ ಬಳಸಿ ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಗಣತಿ ಕಾರ್ಯಕ್ಕೆ ತಾಲೂಕು ಮಟ್ಟದಲ್ಲಿ ಸಂಬಂಧಪಟ್ಟ ಸಿಬ್ಬಂದಿಗೆ ತರಬೇತಿ ಏರ್ಪಡಿಸಲಾಗುವುದು. ಅಂತರ್ಜಲ ಯೋಜನೆಗಳು ಹಾಗೂ ಮೇಲ್ಮೈಜಲ ಯೋಜನೆಗಳು ಎಂದು ವರ್ಗೀಕರಿಸಲಾಗಿದೆ. 40 ಹೆಕ್ಟೇರ್‌ವರೆಗಿನ ಅಚ್ಚುಕಟ್ಟು ಇರುವ ಯೋಜನೆಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧೀನದಲ್ಲಿರುತ್ತದೆ. 40 ಹೆಕ್ಟೇರ್‌ಗಳಿಗೆ ಮೇಲಿನ 2 ಸಾವಿರ ಹೆಕ್ಟೇರ್‌ವರೆಗಿನ ಅಚ್ಚುಕಟ್ಟು ಇರುವ ಯೋಜನೆಗಳು ಸಣ್ಣ ನೀರಾವರಿ ಇಲಾಖೆಯ ಅಧೀನದಲ್ಲಿರುತ್ತವೆ. 2 ಸಾವಿರ ಹೆಕ್ಟೇರ್‌ಗಳಿಗೆ ಮೇಲಿನ ಅಚ್ಚುಕಟ್ಟು ಇರುವ ಯೋಜನೆಗಳು ಬೃಹತ್ ನೀರಾವರಿ ಇಲಾಖೆಯ ಅಧೀನದಲ್ಲಿರುತ್ತವೆ. ಅಂತರ್ಜಲ ಯೋಜನೆಗಳನ್ನು 4 ವಿಧಗಳಾಗಿ ಅಗೆದ ಬಾವಿ, ಆಳವಲ್ಲದ ಕೊಳವೆ ಬಾವಿ, ಮಧ್ಯಮ ಆಳದ ಕೊಳವೆ ಬಾವಿ ಮತ್ತು ಆಳದ ಕೊಳವೆ ಬಾವಿಗಳಾಗಿ ವರ್ಗಿಕರಿಸಲಾಗಿದೆ. ಹಾಗೂ ನೀರಿನಾಸರೆಯ ವಿಧಗಳು, ಹೊಂಡಗಳು, ಸರೋವರಗಳು, ಕೆರೆಗಳ, ಜಲಾಶಯಗಳು, ಜಲಸಂರಕ್ಷಣಾ ಯೋಜನೆಗಳಾಗಿವೆ ಎಂದರು.

ಜಿಪಂ ಮುಖ್ಯಯೋಜನಾಧಿಕಾರಿ ಅನ್ನದಾನ ಸ್ವಾಮಿ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಸರ್ಮಪಕವಾಗಿ ಅನುಷ್ಠಾನಗೊಳಿಸಲು ಅಂಕಿ ಅಂಶಗಳು ಬಹಳ ಮುಖ್ಯ. ಆಯಾ ಇಲಾಖೆಯ ಅಧಿನಿಯಮದಲ್ಲಿರುವ ಕೆರೆಗಳ ಮಾಹಿತಿಯನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಬೇಕು. ಅವರು ಗ್ರಾಮ ಆಡಳಿತಾಧಿಕಾರಿ ಮೊಬೈಲ್‌ನಲ್ಲಿ ಅಳವಡಿಸಲು ಅನುಕೂಲ ಮಾಡುತ್ತಾರೆ. ಜೆಸ್ಕಾಂರವರು ಕೃಷಿಗಳಲ್ಲಿ ನೀರಿನ ಮೀಟರ್ ಬೋರ್ಡ್ಗಳು ಎಷ್ಟು ಅಳವಡಿಸಿದ್ದಾರೆ ಎಂದು ಅದರ ಮಾಹಿತಿಯನ್ನು ನೀಡಿದರೆ ಸಣ್ಣ ನೀರಾವರಿ ಹಾಗೂ ನೀರಿನಾಸರೆಗಳ ಗಣತಿ ಕಾರ್ಯವನ್ನು ಬಹಳ ಬೇಗ ಬಗೆಹರಿಸಬಹುದು ಎಂದರು.

ಈ ವೇಳೆ ಜಿಪಂ ಉಪ ಕಾರ್ಯದರ್ಶಿ ತಿಮ್ಮಪ್ಪ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಆರ್.ವೆಂಕಟೇಶ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆ.ಎಂ.ರಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X