Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ...

ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ಬೇಡ: ಸಿಎಂಗೆ ಸಚಿವ ಝಮೀರ್ ಅಹ್ಮದ್ ಪತ್ರ

ವಾರ್ತಾಭಾರತಿವಾರ್ತಾಭಾರತಿ14 Aug 2026 8:30 AM IST
share
ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ಬೇಡ: ಸಿಎಂಗೆ ಸಚಿವ ಝಮೀರ್ ಅಹ್ಮದ್ ಪತ್ರ

ಹೊಸಪೇಟೆ/ವಿಜಯನಗರ: ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಅವರು ವಿಜಯನಗರ ಜಿಲ್ಲೆ ಸೇರಿದಂತೆ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಬಿಬಿಎಂಪಿ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ವಿಧಾನಸಭಾ ಉಪಚುನಾವಣೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಸಮಯ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡದಂತೆ ಸಚಿವರು ಮನವಿ ಮಾಡಿದ್ದಾರೆ.

ಈ ಹಿಂದೆ ವಿಜಯನಗರ ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಅಧ್ಯಯನ ವರದಿ ಸಿದ್ಧಪಡಿಸುವ ಜವಾಬ್ದಾರಿಯನ್ನು ತಮಗೆ ನೀಡಲಾಗಿತ್ತು. ಆ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ, ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

ಆ.15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಅವಕಾಶ ನೀಡಿದ್ದಕ್ಕಾಗಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿರುವ ಝಮೀರ್ ಅಹ್ಮದ್ ಖಾನ್ ಅವರು, ಇದೀಗ ವಿಜಯನಗರದಲ್ಲಿ ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲೂ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ಆದ್ಯತೆ ನೀಡುವ ಉದ್ದೇಶದಿಂದ ಜಿಲ್ಲೆ ಉಸ್ತುವಾರಿ ಸೇರಿದಂತೆ ಹೆಚ್ಚುವರಿ ಜವಾಬ್ದಾರಿಗಳಿಂದ ಹಿಂದೆ ಸರಿಯುವ ಸಚಿವರ ನಿರ್ಧಾರ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಯ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಝಮೀರ್ ಅವರ ಪತ್ರ ಮಹತ್ವ ಪಡೆದುಕೊಂಡಿದೆ.

Tags

CMzameer ahmed
share
ವಾರ್ತಾಭಾರತಿ
ವಾರ್ತಾಭಾರತಿ
Next Story
X