ಹೊಸಪೇಟೆ | ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಅವಧಿ ವಿಸ್ತರಣೆ : ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್

ಹೊಸಪೇಟೆ :ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್‌ರವರ ಏಕಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.
ಮೊದಲನೆಯ ಹಂತದ ಮನೆಮನೆ ಭೇಟಿ ಸಮೀಕ್ಷೆಯನ್ನು ಮೇ.25ರವರೆಗೆ ವಿಸ್ತರಿಸಲಾಗಿದೆ. ಎರಡನೇ ಹಂತದ ವಿಶೇಷ ಶಿಬಿರ ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ ಮೇ.26 ರಿಂದ ಮೇ.28 ರವರೆಗೆ ಮರು ನಿಗದಿಪಡಿಸಲಾಗಿದೆ. ಮೂರನೇ ಹಂತದ ಅನ್‌ಲೈನ್ ಮೂಲಕ ಸ್ವಯಂ ಘೋಷಣೆಯನ್ನು ಮೇ.19 ರಿಂದ ಮೇ.28 ರವರೆಗೆ ನಿಗದಿಪಡಿಸಲಾಗಿದೆ ಎಂದು ಹೇಳಿದರು.
ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಸಮೀಕ್ಷೆಯ ಕುರಿತು ಯಾವುದೇ ಮಾಹಿತಿಗಳಿದ್ದಲ್ಲಿ ಆಯಾ ವ್ಯಾಪ್ತಿಯ ಕಂಟ್ರೋಲ್ ರೂಂ ಅಥವಾ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಿದರು.
Next Story





