Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಅಂತಿಮ ಮತದಾರರ ಪಟ್ಟಿ ಪ್ರಕಟ | ವಿಜಯನಗರ...

ಅಂತಿಮ ಮತದಾರರ ಪಟ್ಟಿ ಪ್ರಕಟ | ವಿಜಯನಗರ ಜಿಲ್ಲೆಯಲ್ಲಿ 10,08,367 ಮತದಾರರು : ಡಿಸಿ ಕವಿತಾ ಎಸ್. ಮನ್ನಿಕೇರಿ

ವಾರ್ತಾಭಾರತಿವಾರ್ತಾಭಾರತಿ27 Oct 2026 11:04 PM IST
share
ಅಂತಿಮ ಮತದಾರರ ಪಟ್ಟಿ ಪ್ರಕಟ  | ವಿಜಯನಗರ ಜಿಲ್ಲೆಯಲ್ಲಿ 10,08,367 ಮತದಾರರು : ಡಿಸಿ ಕವಿತಾ ಎಸ್. ಮನ್ನಿಕೇರಿ

ವಿಜಯನಗರ (ಹೊಸಪೇಟೆ) : ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿ ವಿಜಯನಗರ ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜಿಲ್ಲೆಯ 1,301 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಒಟ್ಟು 10,08,367 ಮತದಾರರಿದ್ದು, ಇವರಲ್ಲಿ 5,05,785 ಪುರುಷರು, 5,02,477 ಮಹಿಳೆಯರು ಹಾಗೂ 105 ತೃತೀಯ ಲಿಂಗದ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ಹಾಗೂ ಯುನೆಸ್ಕೋ ತಂಡದ ಭೇಟಿ ಕುರಿತು ಮಾಹಿತಿ ಹಂಚಿಕೊಳ್ಳಲು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕಾರ, ಪ್ರತಿ 1,000 ಪುರುಷ ಮತದಾರರಿಗೆ 994 ಮಹಿಳಾ ಮತದಾರರ ಅನುಪಾತವಿದೆ. ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಜಿಲ್ಲೆಯಲ್ಲಿ ಹೊಸದಾಗಿ 14,210 ಮತದಾರರು ಸೇರ್ಪಡೆಯಾಗಿದ್ದು, ಇದು ಒಟ್ಟು ಮತದಾರರ ಸಂಖ್ಯೆಯ ಶೇ. 1.31ರಷ್ಟಿದೆ. ಸೇವಾ ಮತದಾರರ ವಿಭಾಗದಲ್ಲಿ 356 ಮಂದಿ ನೋಂದಾಯಿತರಾಗಿದ್ದು, ಇವರಲ್ಲಿ 351 ಪುರುಷರು ಹಾಗೂ ಐವರು ಮಹಿಳೆಯರಿದ್ದಾರೆ ಎಂದು ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಮೃತಪಟ್ಟವರು, ವಿಳಾಸ ಬದಲಿಸಿಕೊಂಡವರು, ಗೈರುಹಾಜರಾದವರು ಹಾಗೂ ಬೇರೆಡೆ ಈಗಾಗಲೇ ನೋಂದಾಯಿಸಿಕೊಂಡವರ ವಿವರಗಳನ್ನು ಪರಿಶೀಲಿಸಲಾಗಿದೆ. ಜಿಲ್ಲೆಯಲ್ಲಿ ಈ ಹಿಂದೆ ಒಟ್ಟು 11,42,732 ಮತದಾರರಿದ್ದರು. ಇವರಲ್ಲಿ 38,412 ಮಂದಿ ಮೃತಪಟ್ಟವರು, 21,224 ಮಂದಿ ಗೈರುಹಾಜರಾದವರು, 69,598 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡವರು, 415 ಮಂದಿ ಇತರ ವರ್ಗಕ್ಕೆ ಸೇರಿದವರು ಹಾಗೂ 18,926 ಮಂದಿ ಈಗಾಗಲೇ ಬೇರೆಡೆ ನೋಂದಾಯಿಸಿಕೊಂಡವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಒಟ್ಟು 1,48,575 ಮತದಾರರ ಹೆಸರುಗಳನ್ನು ವಿಶೇಷ ಪರಿಷ್ಕರಣೆ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ 30,622 ಮತದಾರರಿಗೆ ನೋಟಿಸ್ ಜಾರಿಗೊಳಿಸಲಾಗಿತ್ತು. ಏಳು ದಿನಗಳೊಳಗೆ ಅಗತ್ಯ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾದವರ ಪೈಕಿ ದಾಖಲೆಗಳನ್ನು ಪರಿಶೀಲಿಸಿ ಅರ್ಹರೆಂದು ಕಂಡುಬಂದ 30,494 ಮತದಾರರನ್ನು ಅಂತಿಮ ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಒಟ್ಟು 128 ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಗುರುತಿಸಲಾಗಿದೆ. ಇವರಲ್ಲಿ 26 ಮಂದಿ ಮೃತಪಟ್ಟವರು, 43 ಮಂದಿ ಸ್ಥಳಾಂತರಗೊಂಡವರು ಹಾಗೂ 50 ಮಂದಿ ಬೇರೆಡೆ ಈಗಾಗಲೇ ನೋಂದಾಯಿಸಿಕೊಂಡವರಾಗಿದ್ದಾರೆ. ವಿಳಾಸದಲ್ಲಿ ಲಭ್ಯವಾಗದ ಒಂಬತ್ತು ಮತದಾರರ ವಿವರಗಳನ್ನೂ ಪರಿಶೀಲಿಸಲಾಗಿದ್ದು, ಅವರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮತದಾರರು ತಮ್ಮ ಹೆಸರು, ವಿಳಾಸ ಸೇರಿದಂತೆ ಮತದಾರರ ಪಟ್ಟಿಯಲ್ಲಿರುವ ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು. ಯಾವುದೇ ತಿದ್ದುಪಡಿ ಅಥವಾ ಸೇರ್ಪಡೆ ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಕ್ರಮ ಕೈಗೊಳ್ಳಬಹುದು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಬಿಟ್ಟುಹೋಗಿದ್ದರೆ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಹೊಸದಾಗಿ ನೋಂದಾಯಿಸಿಕೊಳ್ಳಬಹುದು. ಈ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಉಪಸ್ಥಿತರಿದ್ದರು.

Tags

vijayanagaraVotersFinal Electoral Roll Published
share
ವಾರ್ತಾಭಾರತಿ
ವಾರ್ತಾಭಾರತಿ
Next Story
X