Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಕನ್ನಡ ಉಳಿವಿಗೆ ಬೀದರ್‌ನಿಂದ...

ಕನ್ನಡ ಉಳಿವಿಗೆ ಬೀದರ್‌ನಿಂದ ಬೆಂಗಳೂರಿನವರೆಗೆ ಕಾಲ್ನಡಿಗೆ ಜಾಥಾ: ರೂಪೇಶ್ ಪುತ್ತೂರು

ವಾರ್ತಾಭಾರತಿವಾರ್ತಾಭಾರತಿ28 July 2026 8:27 PM IST
share
ಕನ್ನಡ ಉಳಿವಿಗೆ ಬೀದರ್‌ನಿಂದ ಬೆಂಗಳೂರಿನವರೆಗೆ ಕಾಲ್ನಡಿಗೆ ಜಾಥಾ: ರೂಪೇಶ್ ಪುತ್ತೂರು
ಕನ್ನಡ ಶಾಲೆಗಳ ಸಂರಕ್ಷಣೆ, ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ.70 ಉದ್ಯೋಗ ಮೀಸಲಾತಿಗೆ ಆಗ್ರಹ

ಹರಪನಹಳ್ಳಿ: ಕನ್ನಡ ಶಾಲೆಗಳ ಉಳಿವು, ಕನ್ನಡ ಭಾಷೆಯ ಸಂರಕ್ಷಣೆ ಹಾಗೂ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ.70ರಷ್ಟು ಉದ್ಯೋಗ ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೀದರ್‌ನಿಂದ ಬೆಂಗಳೂರಿನವರೆಗೆ ಕಾಲ್ನಡಿಗೆ ಜಾಥಾ ಕೈಗೊಂಡಿದ್ದೇನೆ ಎಂದು ರೂಪೇಶ್ ಪುತ್ತೂರು ತಿಳಿಸಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಾದ್ಯಂತ ಕನ್ನಡಿಗರ ಹಕ್ಕುಗಳ ಪರ ಜಾಗೃತಿ ಮೂಡಿಸುವುದು ಹಾಗೂ ಕನ್ನಡ ಭಾಷೆಯ ಮಹತ್ವವನ್ನು ಜನರಿಗೆ ತಲುಪಿಸುವುದು ಜಾಥಾದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕನ್ನಡ ಶಾಲೆಗಳು ಮುಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಂಡು ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಉತ್ತೇಜನ ನೀಡಬೇಕು ಎಂದು ಆಗ್ರಹಿಸಿದರು.

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಸಮರ್ಪಕ ಉದ್ಯೋಗಾವಕಾಶ ದೊರೆಯುತ್ತಿಲ್ಲ. ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಕಂಪನಿಗಳು ಸ್ಥಳೀಯರಿಗೆ ಆದ್ಯತೆ ನೀಡುವ ಜೊತೆಗೆ ಕನಿಷ್ಠ ಶೇ.70ರಷ್ಟು ಉದ್ಯೋಗಗಳನ್ನು ಕನ್ನಡಿಗರಿಗೆ ಮೀಸಲಿಡುವಂತೆ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಕಾಲ್ನಡಿಗೆ ಜಾಥಾ ವೇಳೆ ವಿವಿಧ ಜಿಲ್ಲೆಗಳ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಗುತ್ತಿದ್ದು, ಕನ್ನಡ ಭಾಷೆ ಹಾಗೂ ಶಿಕ್ಷಣದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ವಿದ್ಯಾರ್ಥಿಗಳು, ಯುವಕರು ಹಾಗೂ ವಿವಿಧ ಸಂಘಟನೆಗಳ ಸದಸ್ಯರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಜಾಥಾ ಪೂರ್ಣಗೊಂಡ ಬಳಿಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಬೇಡಿಕೆಗಳ ಈಡೇರಿಕೆಗೆ ಮುಂದಿನ ಹಂತದ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಕೀಲ ಬಸವರಾಜ್ ಸಂಗಪ್ಪನವರ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಸ್. ರಾಮಪ್ಪ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಬಿ. ರಾಜಶೇಖರ, ಶಿಕ್ಷಕರಾದ ಕೃಷ್ಣ ನಾಯ್ಕ್, ಅತ್ತವುಲ್ಲಾ, ಅರ್ಜುನ್ ಪರಸ್ಪಪ, ಕೆ. ಮನ್ಸೂರ್ ಅಹ್ಮದ್, ಪದ್ಮರಾಜ್, ಕೆ. ಹನುಮಂತಪ್ಪ, ಟಿ. ಕೊಟ್ರೇಶ್, ಬಿ. ಚಂದ್ರಮೌಳಿ, ಶಿವಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

BengaluruBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X