ವಿಜಯನಗರ ಜಿಲ್ಲಾ ಪಂಚಾಯಿತಿಯ ನೂತನ ಸಿಇಒ ಆಗಿ ಗರಿಮಾ ಪನ್ವಾರ್ ಅಧಿಕಾರ ಸ್ವೀಕಾರ

ವಿಜಯನಗರ (ಹೊಸಪೇಟೆ): ವಿಜಯನಗರ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗರಿಮಾ ಪನ್ವಾರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಒಂದು ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಆಡಳಿತದ ಎಲ್ಲ ಕಾರ್ಯಗಳು ಸಮನ್ವಯದಿಂದ ನಡೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಪ್ರಕಟಣೆಯ ಪ್ರಕಾರ, ಇನ್ನು ಮುಂದೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಸಂಬಂಧಿಸಿದ ಆಡಳಿತಾತ್ಮಕ ಪತ್ರ ವ್ಯವಹಾರಗಳು, ಮನವಿಗಳು ಹಾಗೂ ಅಧಿಕೃತ ಕೋರಿಕೆಗಳನ್ನು ನೂತನ ಸಿಇಒ ಗರಿಮಾ ಪನ್ವಾರ್ ಅವರ ಹೆಸರಿನಲ್ಲಿ ಸಲ್ಲಿಸುವಂತೆ ಸೂಚಿಸಲಾಗಿದೆ.
Next Story




