Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ‘ಜ್ಞಾನ ಭಾರತಂ ಮಿಷನ್’ಗೆ ವಿಜಯನಗರ...

‘ಜ್ಞಾನ ಭಾರತಂ ಮಿಷನ್’ಗೆ ವಿಜಯನಗರ ಜಿಲ್ಲೆಯಲ್ಲಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ15 May 2026 8:20 PM IST
share
‘ಜ್ಞಾನ ಭಾರತಂ ಮಿಷನ್’ಗೆ ವಿಜಯನಗರ ಜಿಲ್ಲೆಯಲ್ಲಿ ಚಾಲನೆ

ವಿಜಯನಗರ (ಹೊಸಪೇಟೆ) : ಶತಮಾನಗಳ ಇತಿಹಾಸ ಹೊಂದಿರುವ ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಹಾಗೂ ಐತಿಹಾಸಿಕ ದಾಖಲೆಗಳನ್ನು ಆಧುನಿಕ ತಂತ್ರಜ್ಞಾನದ ಮೂಲಕ ಸಂರಕ್ಷಿಸುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ‘ಜ್ಞಾನ ಭಾರತಂ ಮಿಷನ್’ ಯೋಜನೆಗೆ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.

ಈ ಯೋಜನೆಯಡಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಇರುವ ಪ್ರಾಚೀನ ಹಸ್ತಪ್ರತಿಗಳು, ಕೈಬರಹದ ಪಠ್ಯಗಳು ಮತ್ತು ಐತಿಹಾಸಿಕ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಶಾಶ್ವತವಾಗಿ ಸಂರಕ್ಷಿಸುವ ಗುರಿ ಹೊಂದಲಾಗಿದೆ. ದೇಶದ ಅಮೂಲ್ಯ ಜ್ಞಾನ ಸಂಪತ್ತನ್ನು ಒಂದೇ ವೇದಿಕೆಯಡಿ ತಂದು “ರಾಷ್ಟ್ರೀಯ ಹಸ್ತಪ್ರತಿ ಭಂಡಾರ” ನಿರ್ಮಿಸುವುದು ಈ ಮಿಷನ್‌ನ ಪ್ರಮುಖ ಉದ್ದೇಶವಾಗಿದೆ.

ಹಸ್ತಪ್ರತಿಗಳ ಮಾಹಿತಿಯನ್ನು ವಿಶೇಷ ಮೊಬೈಲ್ ಅಪ್ಲಿಕೇಶನ್ ಮೂಲಕ ಅಪ್ಲೋಡ್ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ನೋಡಲ್ ಇಲಾಖೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಸಮೀಕ್ಷೆಯ ಕ್ಲಸ್ಟರ್ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಮಠಗಳು, ದೇವಾಲಯಗಳು, ಗ್ರಂಥಾಲಯಗಳು, ಶೈಕ್ಷಣಿಕ ಸಂಸ್ಥೆಗಳು ಹಾಗೂ ಖಾಸಗಿ ವ್ಯಕ್ತಿಗಳ ಬಳಿ ಇರುವ ಹಸ್ತಪ್ರತಿಗಳನ್ನು ಪತ್ತೆಹಚ್ಚುವ ಜವಾಬ್ದಾರಿಯನ್ನು ಸಮಿತಿ ಹೊತ್ತಿದೆ. ಸಮೀಕ್ಷೆ ಸಂಪೂರ್ಣ ತಂತ್ರಜ್ಞಾನ ಆಧಾರಿತವಾಗಿದ್ದು, ಹಸ್ತಪ್ರತಿಗಳ ಜಿಯೋಟ್ಯಾಗಿಂಗ್ ಹಾಗೂ ಮೆಟಾಡೇಟಾ ದಾಖಲೀಕರಣ ಕಾರ್ಯವೂ ನಡೆಯುತ್ತಿದೆ.

ರಾಜ್ಯದಲ್ಲಿ ಈಗಾಗಲೇ 17 ಜಿಲ್ಲೆಗಳಲ್ಲಿ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಏಪ್ರಿಲ್ 27ರವರೆಗೆ ಒಟ್ಟು 2,13,255 ಹಸ್ತಪ್ರತಿಗಳ ಮಾಹಿತಿ ಸಂಗ್ರಹಿಸಲಾಗಿದೆ. ಪ್ರಸ್ತುತ ವಿಜಯನಗರ ಜಿಲ್ಲೆಯಲ್ಲಿ ಸಮೀಕ್ಷಾ ಕಾರ್ಯ ಮುಂದುವರಿದಿದ್ದು, ಮೇ ಅಂತ್ಯದವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಲಾಗಿದೆ.

ವಿಜಯನಗರ ಜಿಲ್ಲೆಯ ಸಾರ್ವಜನಿಕರು, ಮಠಗಳು, ದೇವಸ್ಥಾನಗಳು, ವಿಶ್ವವಿದ್ಯಾನಿಲಯಗಳು ಹಾಗೂ ಖಾಸಗಿ ವ್ಯಕ್ತಿಗಳ ಬಳಿ ಪ್ರಾಚೀನ ಹಸ್ತಪ್ರತಿಗಳು, ತಾಳೆಗರಿಗಳು ಅಥವಾ ಹಳೆಯ ಬರಹಗಳಿದ್ದಲ್ಲಿ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಪುರಾತತ್ವ ಸಹಾಯಕ ಡಾ. ಆರ್. ಮಂಜನಾಯ್ಕ್ (ಮೊ: 9945415518) ಹಾಗೂ ಪ್ರವಾಸೋದ್ಯಮ ಇಲಾಖೆ ಪ್ರವಾಸಿ ಅಧಿಕಾರಿ ಶ್ರೀಹರಿ ಮಾಸನೂರು (ಮೊ: 7892722443) ಅವರನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Tags

Vijayanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X