Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹಂಪಿ ಉತ್ಸವದ ಯಶಸ್ಸಿಗೆ ಅಧಿಕಾರಿಗಳು...

ಹಂಪಿ ಉತ್ಸವದ ಯಶಸ್ಸಿಗೆ ಅಧಿಕಾರಿಗಳು ಜವಾಬ್ದಾರಿಯಿಂದ ಶ್ರಮಿಸಿ : ಜಿಲ್ಲಾಧಿಕಾರಿ ಎಸ್.ಮನ್ನಿಕೇರಿ

ವಾರ್ತಾಭಾರತಿವಾರ್ತಾಭಾರತಿ21 Jan 2026 9:13 PM IST
share
ಹಂಪಿ ಉತ್ಸವದ ಯಶಸ್ಸಿಗೆ ಅಧಿಕಾರಿಗಳು ಜವಾಬ್ದಾರಿಯಿಂದ ಶ್ರಮಿಸಿ : ಜಿಲ್ಲಾಧಿಕಾರಿ ಎಸ್.ಮನ್ನಿಕೇರಿ

ಹೊಸಪೇಟೆ : ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಅತ್ಯಂತ ವೈಭವದಿಂದ ಮತ್ತು ಯಶಸ್ವಿಯಾಗಿ ಆಯೋಜಿಸಲು ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಯಾವುದೇ ಲೋಪದೋಷವಿಲ್ಲದೆ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಹಂಪಿ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿ ಫೆ.13 ರಿಂದ 15ರವರೆಗೆ ಮೂರು ದಿನಗಳ ಕಾಲ ಉತ್ಸವ ನಡೆಯಲಿದ್ದು, ಸಿದ್ಧತೆಗಳಿಗಾಗಿ ಈಗಾಗಲೇ 21 ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಈ ಬಾರಿಯ ಉತ್ಸವದಲ್ಲಿ ಒಟ್ಟು ಐದು ವೇದಿಕೆಗಳನ್ನು ನಿರ್ಮಿಸಲಾಗುತ್ತಿದ್ದು, ಚಂದನವನದ ಖ್ಯಾತ ಕಲಾವಿದರಾದ ಡಾಲಿ ಧನಂಜಯ್, ಧ್ರುವ ಸರ್ಜಾ, ರಚಿತಾ ರಾಮ್, ರುಕ್ಮಿಣಿ ವಸಂತ್, ಉಪೇಂದ್ರ ಹಾಗೂ ಗಾಯಕರಾದ ಸಂಜಿತ್ ಹೆಗ್ಡೆ, ಶ್ರೇಯಾ ಘೋಷಾಲ್ ಸೇರಿದಂತೆ ಹಲವು ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಇವರೆಲ್ಲರಿಗೂ ಸೂಕ್ತ ವಸತಿ ಮತ್ತು ಶಿಷ್ಟಾಚಾರದಂತೆ ಆತಿಥ್ಯ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ನೆರೆ ಜಿಲ್ಲೆಗಳಿಂದ ಬರುವ ಪ್ರವಾಸಿಗರಿಗಾಗಿ ಕೆಎಸ್‌ಆರ್‌ಟಿಸಿ ವತಿಯಿಂದ ಹೆಚ್ಚಿನ ಬಸ್ ವ್ಯವಸ್ಥೆ ಮಾಡಲಾಗುವುದು. ಹಂಪಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿನ 'ಬ್ಲಾಕ್‌ಸ್ಪಾಟ್'ಗಳನ್ನು ಗುರುತಿಸಿ ಕೂಡಲೇ ದುರಸ್ತಿಪಡಿಸಲು ಮತ್ತು ರಸ್ತೆ ಬದಿಯ ಜಂಗಲ್ ತೆರವುಗೊಳಿಸಲು ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಲಾಗಿದೆ. ಹಿರಿಯ ನಾಗರಿಕರಿಗಾಗಿ ವಿಶೇಷವಾಗಿ 'ಪಿಕಪ್ ಮತ್ತು ಡ್ರಾಪ್' ವ್ಯವಸ್ಥೆಯನ್ನು ಪ್ರಾದೇಶಿಕ ಸಾರಿಗೆ ಇಲಾಖೆ ಮಾಡಲಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ವತಿಯಿಂದ ಸ್ವಚ್ಛತೆ, ಕುಡಿಯುವ ನೀರು ಮತ್ತು ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುವಂತೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ತಿಮ್ಮಪ್ಪ ಅವರಿಗೆ ಸೂಚಿಸಲಾಯಿತು. ಜನರ ಆರೋಗ್ಯ ರಕ್ಷಣೆಗಾಗಿ ಉತ್ಸವದ ಸ್ಥಳದಲ್ಲಿ 8 ವೈದ್ಯಕೀಯ ಸ್ಟಾಲ್‌ಗಳು ಹಾಗೂ 108 ಅಂಬುಲೆನ್ಸ್ ಸದಾ ಸಿದ್ಧವಿರಲಿವೆ. ಅರಣ್ಯ ಇಲಾಖೆ ವತಿಯಿಂದ ಕೃತಕ ಮೃಗಾಲಯ ಹಾಗೂ ವಿಜಯನಗರದ ಗತ ವೈಭವ ಸಾರುವ ಸ್ತಬ್ದಚಿತ್ರಗಳು ಜನರ ಕಣ್ಮನ ಸೆಳೆಯಲಿವೆ ಎಂದು ಹೇಳಿದರು.

ಸಾಹಸ ಕ್ರೀಡೆ, ಗಾಳಿಪಟ ಉತ್ಸವ, ಶಿಲ್ಪಕಲೆ, ರಂಗೋಲಿ ಸ್ಪರ್ಧೆ ಹಾಗೂ ಕವಿಗೋಷ್ಠಿ, ವಿಚಾರಗೋಷ್ಠಿಗಳ ಮೂಲಕ ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗುವುದು. ಪೊಲೀಸ್ ಇಲಾಖೆಯ ವತಿಯಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗುವುದು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಯಾವುದೇ ಗೊಂದಲಗಳಿದ್ದಲ್ಲಿ ನೇರವಾಗಿ ಜಿಲ್ಲಾಧಿಕಾರಿ ಅಥವಾ ಸಿಇಓ ಅವರನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳುವಂತೆ ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ನೋಗ್ಜಾಯ್ ಮಹಮದ್ ಅಲಿ ಅಕ್ರಂ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Hampi Festival
share
ವಾರ್ತಾಭಾರತಿ
ವಾರ್ತಾಭಾರತಿ
Next Story
X