Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹಂಪಿಯಲ್ಲಿ ಶೀಘ್ರವೇ ತಲೆ ಎತ್ತಲಿದೆ...

ಹಂಪಿಯಲ್ಲಿ ಶೀಘ್ರವೇ ತಲೆ ಎತ್ತಲಿದೆ ಅತ್ಯಾಧುನಿಕ ‘ಸ್ಟ್ರೀಟ್ ಫುಡ್ ಹಬ್’

ವಾರ್ತಾಭಾರತಿವಾರ್ತಾಭಾರತಿ7 May 2026 11:22 PM IST
share
ಹಂಪಿಯಲ್ಲಿ ಶೀಘ್ರವೇ ತಲೆ ಎತ್ತಲಿದೆ ಅತ್ಯಾಧುನಿಕ ‘ಸ್ಟ್ರೀಟ್ ಫುಡ್ ಹಬ್’

ವಿಜಯನಗರ (ಹೊಸಪೇಟೆ): ವಿಶ್ವವಿಖ್ಯಾತ ಪ್ರವಾಸಿ ತಾಣ ಹಂಪಿಯಲ್ಲಿ ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಒಂದೇ ಸೂರಿನಡಿ ತರಹೇವಾರಿ ಗುಣಮಟ್ಟದ ಆಹಾರ ಖಾದ್ಯಗಳ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ 'ಪಿ.ಎಂ. ಸ್ವನಿಧಿ' ಯೋಜನೆಯಡಿ ಅತ್ಯಾಧುನಿಕ 'ಸ್ಟ್ರೀಟ್ ಫುಡ್ ಹಬ್' ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪಿಎಂ ಸ್ವನಿಧಿ ಯೋಜನೆಯಡಿ ಸ್ಟ್ರೀಟ್ ಫುಡ್ ಹಬ್ ಸ್ಥಾಪನೆಗೆ ಸಂಬಂಧಿಸಿದಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಂಪಿಗೆ ಬರುವ ಸಾವಿರಾರು ದೇಶಿ-ವಿದೇಶಿ ಪ್ರವಾಸಿಗರಿಗೆ ಒಂದೇ ಸೂರಿನಡಿ ಸ್ವಚ್ಛ ಹಾಗೂ ವೈವಿಧ್ಯಮಯ ಆಹಾರಗಳನ್ನು ಒದಗಿಸುವುದು ಈ ಫುಡ್ ಹಬ್‌ನ ಮುಖ್ಯ ಉದ್ದೇಶವಾಗಿದೆ. ಇದರಿಂದ ಸ್ಥಳೀಯ ಬೀದಿ ಬದಿ ವ್ಯಾಪಾರಿಗಳಿಗೂ ಆರ್ಥಿಕ ಸಬಲೀಕರಣಕ್ಕೆ ಅವಕಾಶ ಸಿಗಲಿದ್ದು, ಹಂಪಿಯ ಪ್ರವಾಸೋದ್ಯಮಕ್ಕೆ ಹೊಸ ಮೆರುಗು ಸಿಗಲಿದೆ. ಕೇಂದ್ರ ಸರ್ಕಾರದ ಪಿ.ಎಂ. ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳ ಉಪ ಘಟಕದಡಿ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಅದರಂತೆ ರಾಜ್ಯದಲ್ಲಿ ಚಾಮುಂಡಿ ಬೆಟ್ಟ, ಬೇಲೂರು-ಹಳೇಬೀಡು, ಗಾಣಗಾಪುರ, ಪಟ್ಟದಕಲ್ಲು ಹಾಗೂ ಹಂಪಿ ಸೇರಿ 5 ಪ್ರದೇಶಗಳಲ್ಲಿ ಸ್ಟ್ರೀಟ್ ಫುಡ್ ಹಬ್ ಸ್ಥಾಪಿಸಲು ನಿರ್ಧರಿಸಲಾಗಿದೆ. ಅದರಲ್ಲಿ ನಮ್ಮ ಹಂಪಿಯೂ ಸೇರಿದ್ದು, ಹೆಮ್ಮೆಯ ಸಂಗತಿ. ಈ ಸ್ಟ್ರೀಟ್ ಫುಡ್ ಹಬ್ ಸ್ಥಾಪಿಸಲು ಒಂದು ಕ್ಲಸ್ಟರ್‌ಗೆ 4 ಕೋಟಿ ವೆಚ್ಚದಲ್ಲಿ ತಾತ್ಕಾಲಿಕ ಮಳಿಗೆ ಸ್ಥಾಪಿಸಿ ವ್ಯಾಪಾರ ನಡೆಸಲು ಅನುಮತಿ ನೀಡಲಾಗುವುದು. ಈ ಯೋಜನೆಯ ಅನುಷ್ಠಾನಕ್ಕಾಗಿ ಹಂಪಿ ಗ್ರಾಮ ಪಂಚಾಯಿತಿ ಹಾಗೂ ಕಮಲಾಪುರ ಪುರಸಭೆ ಜಂಟಿಯಾಗಿ ಕಾರ್ಯನಿರ್ವಹಿಸಲಿವೆ. ಈಗಾಗಲೇ ಈ ಯೋಜನೆಗಾಗಿ ಮಳಿಗೆ ಸ್ಥಾಪಿಸಲು 3 ಸ್ಥಳ ಗುರುತಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪೈಕಿ ಈಗಾಗಲೇ ದೊಡ್ಡ ಆಲದ ಮರದ ಎದುರು ಹಾಗೂ ಹಂಪಿ ಪಾರ್ಕಿಂಗ್ ಸ್ಥಳದ ಹತ್ತಿರ ಗುತ್ತಿಲ್ಯಾಂಡ್ ಸೇರಿ ಎರಡು ಕಡೆ ಸ್ಥಳ ಸಹ ಗುರುತಿಸಲಾಗಿದ್ದು, ಭೂಮಿ ಮಂಜೂರಾತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ.

ಈ ನಿಟ್ಟಿನಲ್ಲಿ ಒಂದು ಸ್ಟ್ರೀಟ್ ಫುಡ್ ಹಬ್‌ನಲ್ಲಿ 50 ಜನ ವ್ಯಾಪಾರಗಾರರಿಗೆ ಅವಕಾಶವಿದ್ದು, ದೇಶ ವಿದೇಶಗಳಿಂದ ಆಹಾರ ಹರಸಿ ಬರುವವರಿಗೆ ಶುಚಿ ಮತ್ತು ರುಚಿಯಾದ ಶುದ್ದ ಆಹಾರ ಒದಗಿಸಬೇಕು. ಜತೆಗೆ ಗ್ರಾಹಕರಿಗೆ ನೀರು, ನೆರಳು ಸೇರಿ ಅಗತ್ಯ ಮೂಲ ಸೌಕರ್ಯಗಳನ್ನೊಳಗೊಂಡಂತೆ ಮಳಿಗೆಗಳ ಸುತ್ತ ಸ್ವಚ್ಚತೆ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದರು.

ಈ ವೇಳೆ ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಮನೋಹರ್, ಹಂಪಿ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ರಮೇಶ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಜಿಲ್ಲಾ ಅಭಿಯಾನ ವ್ಯವಸ್ಥಾಪಕ ದೇವರಾಜ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Tags

HampiStreet Food Hub
share
ವಾರ್ತಾಭಾರತಿ
ವಾರ್ತಾಭಾರತಿ
Next Story
X