Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಕುಡಿಯುವ ನೀರಿಗಾಗಿ...

Harapanahalli | ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಹಾರಕನಾಳು ಸಣ್ಣ ತಾಂಡದ 280 ಕುಟುಂಬಗಳು

ವಾರ್ತಾಭಾರತಿವಾರ್ತಾಭಾರತಿ19 Aug 2026 8:45 PM IST
share
Harapanahalli | ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಹಾರಕನಾಳು ಸಣ್ಣ ತಾಂಡದ 280 ಕುಟುಂಬಗಳು
ಬೋರ್‌ವೆಲ್‌ಗಳೇ ಆಸರೆ; ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಆಗ್ರಹ

ಹರಪನಹಳ್ಳಿ: ತಾಲೂಕಿನ ಹಾರಕನಾಳು ಸಣ್ಣ ತಾಂಡದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಗ್ರಾಮಸ್ಥರು ಪ್ರತಿನಿತ್ಯ ಊರಿನ ಹೊರವಲಯದಲ್ಲಿರುವ ರೈತರ ಬೋರ್‌ವೆಲ್‌ಗಳಿಂದ ಬಂಡಿ ಗಾಡಿಗಳ ಮೂಲಕ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಾಮದಲ್ಲಿ ಅನುಸೂಚಿತ ಜಾತಿ ಹಾಗೂ ಅಲೆಮಾರಿ ಜನಾಂಗದವರು ಸೇರಿದಂತೆ ಸುಮಾರು 280 ಕುಟುಂಬಗಳು ಹಾಗೂ ಎರಡು ಸಾವಿರಕ್ಕೂ ಅಧಿಕ ಜನಸಂಖ್ಯೆ ಇದೆ. ಇಷ್ಟೊಂದು ದೊಡ್ಡ ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಶಾಶ್ವತ ಪರಿಹಾರ ಕಲ್ಪಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮದಲ್ಲಿ ಕೊರೆಸಲಾಗಿದ್ದ ಮೂರು ಬೋರ್‌ವೆಲ್‌ಗಳ ಪೈಕಿ ನೀರಿನ ಪ್ರಮಾಣ ಕಡಿಮೆಯಾಗಿ ಎರಡು ಬೋರ್‌ವೆಲ್‌ಗಳು ಬಳಕೆಗೆ ಬಾರದಂತಾಗಿವೆ. ಮತ್ತೊಂದು ಬೋರ್‌ವೆಲ್‌ನಲ್ಲಿ ನೀರು ಲಭ್ಯವಿದ್ದರೂ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಗ್ರಾಮಸ್ಥರು ಖಾಸಗಿ ರೈತರ ಬೋರ್‌ವೆಲ್‌ಗಳನ್ನು ಅವಲಂಬಿಸುವಂತಾಗಿದೆ. ರೈತರು ನೀರು ನೀಡದ ಪರಿಸ್ಥಿತಿ ನಿರ್ಮಾಣವಾದರೆ ಗ್ರಾಮಸ್ಥರ ಬದುಕೇ ಅತಂತ್ರವಾಗುವ ಆತಂಕ ಎದುರಾಗಿದೆ.

ಇದರೊಂದಿಗೆ ಗ್ರಾಮದಲ್ಲಿ ಸಾರ್ವಜನಿಕರಿಗಾಗಿ ಅಳವಡಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕವೂ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದು, ಕೂಡಲೇ ದುರಸ್ತಿಪಡಿಸಿ ಬಳಕೆಗೆ ಮುಕ್ತಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕುಡಿಯುವ ನೀರಿನ ಸಮಸ್ಯೆಯಿಂದ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೂ ತೊಂದರೆಯಾಗುತ್ತಿದೆ.

ಸಮಸ್ಯೆ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಿದರೂ ಇದುವರೆಗೆ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ಐದಾರು ತಿಂಗಳಿಂದ ಸಮಸ್ಯೆ ಉಲ್ಬಣಗೊಂಡಿದ್ದು, ಕೂಡಲೇ ಪರಿಹಾರ ಕಲ್ಪಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಉಗ್ರ ಹೋರಾಟ ನಡೆಸುವುದಾಗಿ ಹಾರಕನಾಳು ಸಣ್ಣ ತಾಂಡದ ಮುಖಂಡ ಎಲ್.ಬಿ. ಹಾಲೇಶನಾಯ್ಕ್ ಎಚ್ಚರಿಸಿದ್ದಾರೆ.

ಗ್ರಾಮ ಪಂಚಾಯಿತಿ ಪಿಡಿಓ ಎಂ.ಕೆ. ರಮೇಶ್ ಮಾತನಾಡಿ, ಗ್ರಾಮದಲ್ಲಿ ಕೊರೆದ ಬೋರ್‌ವೆಲ್‌ಗಳಲ್ಲಿ ನೀರು ಲಭ್ಯವಾಗಿಲ್ಲ. ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ನೀರು ಸಿಗುವ ಸಾಧ್ಯತೆ ಇರುವುದರಿಂದ ಅನುಮತಿ ಪಡೆದು ಬೋರ್‌ವೆಲ್ ಕೊರೆಸಲು ಕ್ರಮ ಕೈಗೊಳ್ಳಲಾಗುವುದು. ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ತಕ್ಷಣ ದುರಸ್ತಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹರಪನಹಳ್ಳಿ ಎಇಇ ಮಂಜ್ಯಾನಾಯ್ಕ್ ಮಾತನಾಡಿ, ಗ್ರಾಮದಲ್ಲಿರುವ ಮೂರು ಕೊಳವೆಬಾವಿಗಳ ಪೈಕಿ ಎರಡರಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ನೀರು ಲಭ್ಯವಿರುವ ಕೊಳವೆಬಾವಿಯಲ್ಲಿ ಹೆಚ್ಚಿನ ಆಳಕ್ಕೆ ಪೈಪ್ ಇಳಿಸಿ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಖಾಸಗಿ ಬೋರ್‌ವೆಲ್‌ನಿಂದಲೂ ತಕ್ಷಣ ನೀರು ಪೂರೈಸಲಾಗುವುದು ಎಂದು ತಿಳಿಸಿದ್ದಾರೆ.

Tags

Harapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X