ಹರಪನಹಳ್ಳಿ | ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಹರಪನಹಳ್ಳಿ: ತಾಲ್ಲೂಕಿನ ಅರಸೀಕೆರೆ ಗ್ರಾಮದಿಂದ ನಾಪತ್ತೆಯಾಗಿದ್ದ ಎನ್. ರಾಮಪ್ಪ (51) ಎಂಬುವವರ ಮೃತದೇಹಶುಕ್ರವಾರ ಗುಡಿಹಳ್ಳಿ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ.
ಮೃತ ವ್ಯಕ್ತಿಯು ಮದ್ಯಪಾನ ಮಾಡಿ ಕೆರೆಯಲ್ಲಿ ಈಜಲು ಹೋದ ಸಂದರ್ಭದಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ರಾಮಪ್ಪ ಅವರು ನಾಪತ್ತೆಯಾದ ಬಗ್ಗೆ ದೂರು ದಾಖಲಾದ ಹಿನ್ನೆಲೆಯಲ್ಲಿ ಶೋಧ ಕಾರ್ಯ ತೀವ್ರಗೊಳಿಸಲಾಗಿತ್ತು.
ಸ್ಥಳೀಯ ಪೊಲೀಸರು, ಎಸ್‌ಡಿಆರ್‌ಎಫ್ (SDRF) ತಂಡ ಹಾಗೂ ನುರಿತ ಈಜುಗಾರರ ತಂಡದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಲಾಯಿತು. ತೀವ್ರ ಪರಿಶೋಧನೆಯ ನಂತರ ಕೆರೆಯ ನೀರಿನಲ್ಲಿ ಮುಳುಗಿದ್ದ ಮೃತದೇಹವನ್ನು ಪತ್ತೆ ಹಚ್ಚಿ ಹೊರತೆಗೆಯಲಾಯಿತು.
ಈ ಘಟನೆಗೆ ಸಂಬಂಧಿಸಿದಂತೆ ತಾಲ್ಲೂಕಿನ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





