Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಧರ್ಮೇಂದ್ರ ಪ್ರಧಾನ್,...

Harapanahalli | ಧರ್ಮೇಂದ್ರ ಪ್ರಧಾನ್, ಅಮಿತ್ ಷಾ ರಾಜೀನಾಮೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 July 2026 10:12 PM IST
share
Harapanahalli | ಧರ್ಮೇಂದ್ರ ಪ್ರಧಾನ್, ಅಮಿತ್ ಷಾ ರಾಜೀನಾಮೆಗೆ ಆಗ್ರಹ

ಹರಪನಹಳ್ಳಿ: ನೀಟ್ ಪರೀಕ್ಷೆ ಅಕ್ರಮಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ರಾಜೀನಾಮೆಗೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್‌ನ್ನು ಖಂಡಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ವತಿಯಿಂದ ನಗರದ ಇಜಾರಿ ಶಿರಸಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ನೀಟ್ ಪರೀಕ್ಷೆಯಲ್ಲಿ ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ದೇಶದ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ‘ಸಂಸತ್ ಚಲೋ’ ಕಾರ್ಯಕ್ರಮ ಹಮ್ಮಿಕೊಂಡಿದ್ದವು. ಈ ವೇಳೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಬರ್ಬರವಾಗಿ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಹೇಳಿದರು.

ಎಐಎಸ್‌ಎಫ್ ಸೇರಿದಂತೆ ಎಡಪಂಥೀಯ ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳು ಜಂತರ್-ಮಂತರ್‌ನಲ್ಲಿ ನಡೆದ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದವು. ಉಚಿತ ಗ್ರಂಥಾಲಯ, ಜಾಗೃತಿ ಕಾರ್ಯಕ್ರಮಗಳು ಹಾಗೂ ಉಪವಾಸ ಸತ್ಯಾಗ್ರಹದ ಮೂಲಕ ವಿದ್ಯಾರ್ಥಿಗಳು ಪ್ರಜಾಸತ್ತಾತ್ಮಕ ರೀತಿಯಲ್ಲಿ ತಮ್ಮ ಹೋರಾಟ ಮುಂದುವರಿಸಿದ್ದರು. ಆದರೆ, ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಲಿಸುವ ಬದಲು ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತಾಳಿ ಪೊಲೀಸ್ ಬಲಪ್ರಯೋಗದ ಮೂಲಕ ಹೋರಾಟ ಹತ್ತಿಕ್ಕಲು ಮುಂದಾಗಿದೆ ಎಂದು ಆರೋಪಿಸಿದರು.

ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಕೂಡಲೇ ಈಡೇರಿಸಬೇಕು. ನೀಟ್ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಅಖಿಲ ಭಾರತ ಕಿಸಾನ್ ಸಭಾದ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ್, ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ಎಂ. ಸಂತೋಷ್, ತಾಲೂಕು ಕಾರ್ಯದರ್ಶಿ ರಮೇಶನಾಯ್ಕ ಎಚ್., ಜಿಲ್ಲಾ ಕಾರ್ಯಕಾರಿ ಮಂಡಳಿ ಸದಸ್ಯ ಗುಡಿಹಳ್ಳಿ ಹಾಲೇಶ್, ಬಳಿಗಾನೂರು ಕೊಟ್ರೇಶ, ಹೊಸಹಳ್ಳಿ ಮಲ್ಲೇಶ, ರಾಗಿಮಸಲವಾಡ ಹನುಮಂತಪ್ಪ, ಶಿವರಮ್, ಚೌಡಪ್ಪ, ಹನುಮಂತ ನಾಯ್ಕ, ಮುಜೀಬುರ್ ರಹಮಾನ್, ಅರುಣಕುಮಾರ್, ಆಕಾಶ್, ಹನುಮಂತಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Amit ShahDharmendra PradhanHarapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X