Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಕನ್ನಾಯಕನಹಳ್ಳಿ ಬಸ್...

Harapanahalli | ಕನ್ನಾಯಕನಹಳ್ಳಿ ಬಸ್ ಮಾರ್ಗದ ವಿದ್ಯುತ್ ಕಂಬ ತೆರವು

ವಾರ್ತಾಭಾರತಿ ವರದಿ ಫಲಶ್ರುತಿ

ವಾರ್ತಾಭಾರತಿವಾರ್ತಾಭಾರತಿ23 Sept 2026 5:23 PM IST
share
Harapanahalli | ಕನ್ನಾಯಕನಹಳ್ಳಿ ಬಸ್ ಮಾರ್ಗದ ವಿದ್ಯುತ್ ಕಂಬ ತೆರವು

ಹರಪನಹಳ್ಳಿ: ತಾಲೂಕಿನ ಕನ್ನಾಯಕನಹಳ್ಳಿ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ನಡೆಸುತ್ತಿದ್ದ ಹೋರಾಟಕ್ಕೆ ಫಲ ಸಿಕ್ಕಿದ್ದು, ಬಸ್ ಸಂಚಾರಕ್ಕೆ ಅಡ್ಡಿಯಾಗಿದ್ದ ವಿದ್ಯುತ್ ಕಂಬವನ್ನು ತೆರವುಗೊಳಿಸಲಾಗಿದೆ. ‘ವಾರ್ತಾಭಾರತಿ’ಯಲ್ಲಿ ಸಮಸ್ಯೆ ಕುರಿತು ವರದಿ ಪ್ರಕಟವಾದ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಕನ್ನಾಯಕನಹಳ್ಳಿ ಗ್ರಾಮಕ್ಕೆ ಸಮರ್ಪಕ ಸಾರಿಗೆ ಸೌಲಭ್ಯ ಇಲ್ಲದ ಕಾರಣ ವಿದ್ಯಾರ್ಥಿಗಳು, ವೃದ್ಧರು ಹಾಗೂ ಸಾರ್ವಜನಿಕರು ಹಲವು ವರ್ಷಗಳಿಂದ ಸಂಕಷ್ಟ ಅನುಭವಿಸುತ್ತಿದ್ದರು. ಗ್ರಾಮಕ್ಕೆ ಬಸ್ ಸಂಚಾರ ಆರಂಭಿಸಲು ಉದ್ದೇಶಿಸಲಾಗಿದ್ದ ಮಾರ್ಗದಲ್ಲೇ ವಿದ್ಯುತ್ ಕಂಬ ಅಡ್ಡಿಯಾಗಿದ್ದರಿಂದ ಬಸ್ ಓಡಾಟ ಸಾಧ್ಯವಾಗುತ್ತಿರಲಿಲ್ಲ.

ಈ ಕುರಿತು ‘ವಾರ್ತಾಭಾರತಿ’ಯಲ್ಲಿ ವಾಸ್ತವಾಂಶಗಳೊಂದಿಗೆ ವರದಿ ಪ್ರಕಟಗೊಂಡ ನಂತರ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಕಂಬ ತೆರವು ಮತ್ತು ಸ್ಥಳಾಂತರ ಕಾರ್ಯಕ್ಕೆ ಮುಂದಾದರು.

ಬೆಸ್ಕಾಂ ವತಿಯಿಂದ ಹೊಸ ಕಂಬ ಒದಗಿಸಲಾಗಿದ್ದು, ಕಂಬ ತೆರವು ಹಾಗೂ ಸ್ಥಳಾಂತರ ಕಾರ್ಯಕ್ಕೆ ಬೇಕಾದ ಸಿಬ್ಬಂದಿ ವೆಚ್ಚವನ್ನು ಸ್ಥಳೀಯವಾಗಿ ಭರಿಸಬೇಕೆಂದು ಅಧಿಕಾರಿಗಳು ತಿಳಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಅಶೋಕ್ ಅವರು ಸಾರ್ವಜನಿಕರ ಅನುಕೂಲಕ್ಕಾಗಿ ತಮ್ಮ ವೈಯಕ್ತಿಕ ಹಣದಿಂದ ಸಿಬ್ಬಂದಿ ವೆಚ್ಚವನ್ನು ಭರಿಸಿ ಕಾಮಗಾರಿ ಪೂರ್ಣಗೊಳ್ಳಲು ಸಹಕರಿಸಿದರು. ಅವರ ಈ ನಡೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿದ್ಯುತ್ ಕಂಬ ತೆರವುಗೊಂಡಿರುವುದರಿಂದ ಗ್ರಾಮಕ್ಕೆ ಬಸ್ ಸಂಚಾರ ಆರಂಭಿಸಲು ಇದ್ದ ಪ್ರಮುಖ ತಾಂತ್ರಿಕ ಅಡಚಣೆ ನಿವಾರಣೆಯಾಗಿದೆ.

ಕನ್ನಾಯಕನಹಳ್ಳಿಯಲ್ಲಿ 300ಕ್ಕೂ ಅಧಿಕ ಮನೆಗಳು ಮತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಬಸ್ ಸೌಲಭ್ಯಕ್ಕಾಗಿ ಗ್ರಾಮಸ್ಥರು ಹಲವು ಬಾರಿ ಮನವಿ ಸಲ್ಲಿಸಿದ್ದರು. ಸಾರಿಗೆ ಸೌಲಭ್ಯ ಇಲ್ಲದ ಕಾರಣ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ದೂರದ ಊರುಗಳಿಗೆ ತೆರಳಲು ತೊಂದರೆ ಅನುಭವಿಸುತ್ತಿದ್ದರು.

ಇದೀಗ ಸಮಸ್ಯೆ ಬಗೆಹರಿದಿರುವ ಹಿನ್ನೆಲೆಯಲ್ಲಿ ಕೆಕೆಆರ್‌ಟಿಸಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕನ್ನಾಯಕನಹಳ್ಳಿ ಗ್ರಾಮಕ್ಕೆ ಶೀಘ್ರ ನಿಯಮಿತ ಬಸ್ ಸೇವೆ ಆರಂಭಿಸಬೇಕು ಎಂದು ಗ್ರಾಮಸ್ಥರು ಹಾಗೂ ಕೆ. ಅಶೋಕ್ ಒತ್ತಾಯಿಸಿದ್ದಾರೆ.

ಬಸ್ ಸಂಚಾರಕ್ಕೆ ಅಡ್ಡಿಯಾಗಿದ್ದ ವಿದ್ಯುತ್ ಕಂಬವನ್ನು ತೆರವುಗೊಳಿಸಿರುವ ವಿಷಯ ನನ್ನ ಗಮನಕ್ಕೆ ಬಂದ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೂ ತಂದಿದ್ದೇನೆ. ಇಲಾಖೆಯ ನಿಯಮಾವಳಿಗಳನ್ನು ಪೂರ್ಣಗೊಳಿಸಿ ಇದೇ ಶನಿವಾರ ಅಥವಾ ಸೋಮವಾರದಿಂದ ಕನ್ನಾಯಕನಹಳ್ಳಿ ಗ್ರಾಮಕ್ಕೆ ಬಸ್ ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳುತ್ತೇವೆ.

–ಸುಶೀಲ, ಘಟಕ ವ್ಯವಸ್ಥಾಪಕರು, ಕೆಕೆಆರ್‌ಟಿಸಿ ಹರಪನಹಳ್ಳಿ

Tags

KannayakanahalliHarapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X