Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಸ್ವಾತಂತ್ರ್ಯ ಎಂದರೆ...

Harapanahalli | ಸ್ವಾತಂತ್ರ್ಯ ಎಂದರೆ ಜವಾಬ್ದಾರಿಯುತವಾಗಿ ಬದುಕುವ ಅವಕಾಶ: ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ

ವಾರ್ತಾಭಾರತಿವಾರ್ತಾಭಾರತಿ15 Aug 2026 6:19 PM IST
share
Harapanahalli | ಸ್ವಾತಂತ್ರ್ಯ ಎಂದರೆ ಜವಾಬ್ದಾರಿಯುತವಾಗಿ ಬದುಕುವ ಅವಕಾಶ: ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ: ಸ್ವಾತಂತ್ರ್ಯ ಎಂದರೆ ಕೇವಲ ಬಂಧನಗಳಿಂದ ಮುಕ್ತಿಯಾಗುವುದಲ್ಲ; ಅದು ಜವಾಬ್ದಾರಿಯುತವಾಗಿ ಬದುಕುವ ಅವಕಾಶ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.

ನಗರದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಶನಿವಾರ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಸಂಖ್ಯಾತ ಜನರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು, ಅದರ ಮಹತ್ವವನ್ನು ಪ್ರತಿಯೊಬ್ಬರೂ ಅರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಸ್ವಾತಂತ್ರ್ಯ ದೊರೆತ ಬಳಿಕ ಪ್ರಜಾಪ್ರಭುತ್ವ, ಸಮಾನತೆ ಹಾಗೂ ಸಹೋದರತ್ವದಂತಹ ಉನ್ನತ ಮೌಲ್ಯಗಳ ಆಧಾರದ ಮೇಲೆ ದೇಶ ನಿರ್ಮಾಣವಾಗಿದೆ. ಹಲವು ಭಾಷೆ, ಧರ್ಮ, ಸಂಸ್ಕೃತಿ ಹಾಗೂ ಸಂಪ್ರದಾಯಗಳ ವೈವಿಧ್ಯತೆಯ ನಡುವೆಯೂ ಭಾರತೀಯರು ಒಗ್ಗಟ್ಟಿನಿಂದ ಬದುಕುತ್ತಿರುವುದು ದೇಶದ ಹೆಮ್ಮೆ ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸೋಣ :

ಉಪವಿಭಾಗಾಧಿಕಾರಿ ಸುರೇಶ ಕುಮಾರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಅನೇಕರ ತ್ಯಾಗ ಮತ್ತು ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದೆ. ಅವರ ಆದರ್ಶಗಳನ್ನು ಸ್ಮರಿಸಿಕೊಂಡು ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ದೇಶದ ಸಾಕ್ಷರತೆ ಪ್ರಮಾಣ ಕಡಿಮೆ ಇದ್ದರೂ, ಇಂದು ಸಾಕ್ಷರತೆ ಗಣನೀಯವಾಗಿ ಹೆಚ್ಚಾಗಿದೆ. ಶಿಕ್ಷಣದ ಮೂಲಕ ದೇಶದ ಅಭಿವೃದ್ಧಿಗೆ ಮತ್ತಷ್ಟು ಕೊಡುಗೆ ನೀಡಬೇಕು ಎಂದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ದೇಶಭಕ್ತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉದಯಶಂಕರ್, ತಹಶೀಲ್ದಾರ್ ಬಿ.ವಿ. ಗಿರೀಶ್ ಬಾಬು, ಡಿವೈಎಸ್ಪಿ ಸಂತೋಷ್ ಚವ್ಹಾಣ್, ತಾ.ಪಂ. ಇಒ ಚಂದ್ರಶೇಖರ, ನಗರಸಭೆ ಪೌರಾಯುಕ್ತೆ ರೇಣುಕಾ ಎಸ್. ದೇಸಾಯಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಲೇಪಾಕ್ಷಪ್ಪ, ತಾಲೂಕು ಆರೋಗ್ಯಾಧಿಕಾರಿ ಅರವಿಂದ, ಟಿಪಿಒ ಷಣ್ಮುಖಪ್ಪ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Tags

FreedomHarapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X