Harapanahalli | ಸಿಂಗ್ರಿಹಳ್ಳಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಹರಪನಹಳ್ಳಿ: ತಾಲೂಕಿನ ಸಿಂಗ್ರಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸಿ. ಹಾಲೇಶ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳು ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.
ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷರು ಹಾಗೂ ಸದಸ್ಯರು, ಮುಖ್ಯಶಿಕ್ಷಕ ಜಿ. ಕೃಷ್ಣಮೂರ್ತಿ, ಸಹ ಶಿಕ್ಷಕರು, ಅತಿಥಿ ಶಿಕ್ಷಕರು, ಬಿಸಿಯೂಟದ ಸಿಬ್ಬಂದಿ, ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು, ಗ್ರಾಮದ ಮುಖಂಡರು, ಗಣ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Next Story




