Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | 5.5 ಕೋಟಿ ರೂ. ವೆಚ್ಚದ...

Harapanahalli | 5.5 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲತಾ ಮಲ್ಲಿಕಾರ್ಜುನ ಚಾಲನೆ

ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ16 Nov 2026 9:39 PM IST
share
Harapanahalli | 5.5 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲತಾ ಮಲ್ಲಿಕಾರ್ಜುನ ಚಾಲನೆ

ಹರಪನಹಳ್ಳಿ: ತಾಲೂಕಿನ ಕುಂಚೂರು ಮತ್ತು ದುಗ್ಗಾವತಿ ಗ್ರಾಮಗಳಲ್ಲಿ ಒಟ್ಟು 5.5 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಸೋಮವಾರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಕುಂಚೂರು ಗ್ರಾಮದಲ್ಲಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅಂದಾಜು 2.5 ಕೋಟಿ ರೂ. ವೆಚ್ಚದಲ್ಲಿ ಕುಂಚೂರು ಗ್ರಾಮದಿಂದ ಹಲುವಾಗಲು ಗ್ರಾಮದವರೆಗೆ ಆಯ್ದ ಭಾಗದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಬಳಿಕ ದುಗ್ಗಾವತಿ ಗ್ರಾಮದಲ್ಲಿ ಅಂದಾಜು 3 ಕೋಟಿ ರೂ. ವೆಚ್ಚದಲ್ಲಿ ಗ್ರಾಮದ ವ್ಯಾಪ್ತಿಯಿಂದ ತಾಲೂಕು ಗಡಿಯವರೆಗೆ ಆಯ್ದ ಭಾಗದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಲತಾ ಮಲ್ಲಿಕಾರ್ಜುನ, ಕಳೆದ ನಾಲ್ಕು ವರ್ಷಗಳಲ್ಲಿ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ತೃಪ್ತಿ ತಂದಿವೆ. ಅಭಿವೃದ್ಧಿ ಕೆಲಸಗಳ ಕುರಿತು ಜನರಿಗೆ ಮಾಹಿತಿ ತಲುಪಬೇಕಾದರೆ ಇಂತಹ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಕಾರ್ಯಕ್ರಮಗಳಿಗೆ ಜನರು ಬಾರದಿದ್ದರೆ ಅಭಿವೃದ್ಧಿ ಕಾರ್ಯಗಳ ಮಾಹಿತಿ ಜನರಿಗೆ ತಲುಪಿಸುವುದು ಹೇಗೆ ಎಂದು ಬೇಸರ ವ್ಯಕ್ತಪಡಿಸಿದರು. ಜನರ ಭಾಗವಹಿಸುವಿಕೆ ಮುಖ್ಯವಾದರೂ ಅಭಿವೃದ್ಧಿ ಕೆಲಸಗಳೇ ಪ್ರಮುಖವಾಗಿವೆ ಎಂದರು.

ಗುತ್ತಿಗೆದಾರರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು. ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ದುಗ್ಗಾವತಿ ಗ್ರಾಮವನ್ನು ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಎಂದು ಗುರುತಿಸಲಾಗುತ್ತಿದ್ದು, ಇಲ್ಲಿ ‘ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು’ ಎಂಬ ಸ್ವಾಗತ ಕಮಾನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಮಾತನಾಡಿ, ಶಾಸಕರು ತಾಲೂಕಿನಾದ್ಯಂತ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿ ದೂರವಾಗುವಂತೆ ಶ್ರಮಿಸುತ್ತಿದ್ದಾರೆ. ಜನರ ತೆರಿಗೆ ಹಣ ಪೋಲಾಗದಂತೆ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡುತ್ತಿದ್ದಾರೆ. ಕೆಲವರು ಟೀಕೆ ಮಾಡಬಹುದು. ಆದರೆ, ಟೀಕೆಗಳು ಮರೆಯಾಗುತ್ತವೆ, ಅಭಿವೃದ್ಧಿ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳು ಬದಲಾವಣೆಯ ಸಂಕೇತವಾಗಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಸದಸ್ಯ ಲಾಟಿ ದಾದಾಪೀರ್, ಎಇಇ ರಾಘವೇಂದ್ರ, ಮುಖಂಡರಾದ ಮಂಜುನಾಥ, ಪ್ರಕಾಶ, ಮಹೇಶ್, ಸಂತೋಷ, ವೇಣುರಾಜ, ಹನುಮಂತಪ್ಪ, ಹರಿಯಮ್ಮನಹಳ್ಳಿ ಶಿವರಾಜ್, ಕುಂಚೂರು ಶೌಕತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Latha MallikarjunHarapanahalli
share
ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ
ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ

ಮಹಮ್ಮದ್ ಗೌಸ್ ಅವರು ಕಳೆದ ಆರು ವರ್ಷಗಳಿಂದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಮಾಧ್ಯಮ ಚಟುವಟಿಕೆಗಳಲ್ಲಿ ಅನುಭವ ಹೊಂದಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ವಿಜಯನಗರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ

Next Story
X