Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹರಪನಹಳ್ಳಿ | ಅರಸೀಕೆರೆ ಹೋಬಳಿ...

ಹರಪನಹಳ್ಳಿ | ಅರಸೀಕೆರೆ ಹೋಬಳಿ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ13 March 2026 8:13 PM IST
share
ಹರಪನಹಳ್ಳಿ | ಅರಸೀಕೆರೆ ಹೋಬಳಿ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ

ಹರಪನಹಳ್ಳಿ : ಅರಸೀಕೆರೆ ಹೋಬಳಿಯ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಶುಕ್ರವಾರ ಅರಸೀಕೆರೆ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದವು.

ತಾಲ್ಲೂಕಿನ ಅತಿದೊಡ್ಡ ಹಾಗೂ ಪ್ರತ್ಯೇಕ ತಾಲೂಕು ಕೇಂದ್ರದ ಅರ್ಹತೆ ಹೊಂದಿರುವ ಅರಸೀಕೆರೆ ಹೋಬಳಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ನಲುಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ವಿವಿಧ ತಾಲ್ಲೂಕುಗಳಿಗೆ ಸಂಪರ್ಕ ಕಲ್ಪಿಸುವ ಅರಸೀಕೆರೆ ಗ್ರಾಮಕ್ಕೆ ಸುಸಜ್ಜಿತ ಬಸ್ ನಿಲ್ದಾಣ ಇಲ್ಲದಿರುವುದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಅವರು ಹೇಳಿದರು.

ಹೋಬಳಿ ವ್ಯಾಪ್ತಿಯಲ್ಲಿ 11 ಗ್ರಾಮ ಪಂಚಾಯಿತಿಗಳು ಸೇರಿದ್ದು, ಶಿಕ್ಷಣದ ದೃಷ್ಟಿಯಿಂದ ಪ್ರಮುಖ ಕೇಂದ್ರವಾಗಿದೆ. ಶಾಲೆ, ಪಿಯು ಹಾಗೂ ಪದವಿ ಕಾಲೇಜುಗಳಿದ್ದು, ನಿತ್ಯ ನೂರಾರು ವಿದ್ಯಾರ್ಥಿಗಳು ಆಗಮಿಸುತ್ತಾರೆ. ಆದರೆ ಬಾಲಕರಿಗೆ ಮಾತ್ರ ಒಂದು ವಸತಿ ನಿಲಯವಿದ್ದು, ಬಾಲಕಿಯರ ವಸತಿ ನಿಲಯದ ಕೊರತೆಯಿಂದ ವಿದ್ಯಾರ್ಥಿನಿಯರು ಶಿಕ್ಷಣವನ್ನು ಮಧ್ಯದಲ್ಲಿ ನಿಲ್ಲಿಸುವ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ದೂರಿದರು.

ಹೋಬಳಿ ವ್ಯಾಪ್ತಿಯ ಬಹುತೇಕ ರಸ್ತೆಗಳು ಹದಗೆಟ್ಟಿದ್ದು, ಸಾರಿಗೆ ವ್ಯವಸ್ಥೆಯೂ ಸಮರ್ಪಕವಾಗಿಲ್ಲ. ನಾಲ್ಕು ವರ್ಷಗಳ ಹಿಂದೆ ಆರಂಭವಾದ ಉಚ್ಚಂಗಿದುರ್ಗ ಗ್ರಾಮದ ಬಸ್ ನಿಲ್ದಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು.

ಅರಸೀಕೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಅಗತ್ಯ ಚಿಕಿತ್ಸಾ ಸೌಲಭ್ಯಗಳ ಕೊರತೆಯಿಂದ ರೋಗಿಗಳು ಪರದಾಡುತ್ತಿದ್ದಾರೆ. ಆಂಬ್ಯುಲೆನ್ಸ್ ಸೇವೆಯ ಕೊರತೆಯಿಂದ ಕೆಲವರು ಪ್ರಾಣ ಕಳೆದುಕೊಂಡ ಘಟನೆಗಳೂ ನಡೆದಿವೆ ಎಂದು ಹೇಳಿದರು.

ಹೋಬಳಿ ವ್ಯಾಪ್ತಿಯಲ್ಲಿ ನೀರಿನ ಮೂಲಗಳ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದು, ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ 105 ಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ವೇಳೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಸಮುದಾಯ ಆರೋಗ್ಯ ಕೇಂದ್ರದಿಂದ ಗಿಲ್ಲಿ ನಗರ ಸರ್ಕಲ್, ಪೊಲೀಸ್ ಠಾಣೆ ಮೂಲಕ ಗುಡಿಹಳ್ಳಿ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ನೂರಾರು ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೆಲಕಾಲ ರಸ್ತೆ ತಡೆ ನಡೆಸಿದರು.

ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಸಮಾಜ ಕಲ್ಯಾಣಾಧಿಕಾರಿ ಗಂಗಪ್ಪ, ತಾಲೂಕು ಆರೋಗ್ಯಾಧಿಕಾರಿ ಪೃಥ್ವಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಅಖಿಲ ಭಾರತ ಕಿಸಾನ್ ಸಭಾದ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ್, ಕಬ್ಬಳ್ಳಿ ಮೈಲಪ್ಪ, ಕಬ್ಬಳ್ಳಿ ಡಿ. ನಾಗರಾಜ್, ಬುದಿಹಾಳ್ ಸಿದ್ದಪ್ಪ, ಮಹಾದೇವಪ್ಪ, ಭೀಮಪ್ಪ, ನಿರ್ಮಲಾ ನಂದಿಹಳ್ಳಿ ಮಠ, ಚೂಟಿ ಪ್ರೇಮ, ನಾಗರಾಜ್ ಗೌಡ್ರು, ಎಬಿ ಮಲ್ಲನ ಗೌಡ್ರು, ರಮೇಶ್, ಮಂಜಪ್ಪ, ಮಾರುತಿ, ವಿಶಾಲಮ್ಮ, ರಂಗಪ್ಪ, ಹಾಲಪ್ಪ, ಡಿ. ಅರುಣ್ ಕುಮಾರ್, ಪ್ರಭುಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Harapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X