Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಒಳಮೀಸಲಾತಿ, ರೋಸ್ಟರ್...

Harapanahalli | ಒಳಮೀಸಲಾತಿ, ರೋಸ್ಟರ್ ಬಿಂದು ಆದೇಶ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ29 Aug 2026 6:34 PM IST
share
Harapanahalli | ಒಳಮೀಸಲಾತಿ, ರೋಸ್ಟರ್ ಬಿಂದು ಆದೇಶ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ಹರಪನಹಳ್ಳಿ: ಅವೈಜ್ಞಾನಿಕ ಒಳಮೀಸಲಾತಿ ಹಂಚಿಕೆ ಹಾಗೂ ರೋಸ್ಟರ್ ಬಿಂದು ಆದೇಶವನ್ನು ರದ್ದುಗೊಳಿಸಿ, ಹಳೆಯ ಮೀಸಲಾತಿ ವ್ಯವಸ್ಥೆ ಮತ್ತು ರೋಸ್ಟರ್ ಬಿಂದು ಪದ್ಧತಿಯನ್ನೇ ಮುಂದುವರಿಸಬೇಕು ಎಂದು ಒತ್ತಾಯಿಸಿ ಬಂಜಾರ, ಭೋವಿ, ಕೊರಚ ಹಾಗೂ ಕೊರಮ ಸಮುದಾಯದ ವಿದ್ಯಾರ್ಥಿಗಳ ಒಕ್ಕೂಟದ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಹರಿಹರ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಐ.ಬಿ. ವೃತ್ತಕ್ಕೆ ತೆರಳಿ ಬಹಿರಂಗ ಸಭೆಯಾಗಿ ಮಾರ್ಪಟ್ಟಿತು. ಈ ವೇಳೆ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಒಳಮೀಸಲಾತಿ ಹಂಚಿಕೆ ಕುರಿತು ಆಕ್ಷೇಪ ವ್ಯಕ್ತಪಡಿಸಿದರು.

ಬಂಜಾರ, ಭೋವಿ, ಕೊರಚ ಹಾಗೂ ಕೊರಮ ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಮಾನ ಅವಕಾಶ ಕಲ್ಪಿಸಬೇಕು. ಅಲೆಮಾರಿ ಸಮುದಾಯದ 59 ಜಾತಿಗಳನ್ನು ಸಿ. ಗುಂಪಿನಿಂದ ಪ್ರತ್ಯೇಕಿಸಿ ಶೇ.1ರಷ್ಟು ಮೀಸಲಾತಿ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ರೋಸ್ಟರ್ ಬಿಂದುಗಳಿಗೆ ಸಂಬಂಧಿಸಿದ ಲೋಪದೋಷಗಳನ್ನು ಪರಿಶೀಲಿಸಿ, ನ್ಯಾಯಯುತವಾಗಿ ಹುದ್ದೆಗಳನ್ನು ಹಂಚಿಕೆ ಮಾಡಬೇಕು. ಒಳಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇರುವುದರಿಂದ ಅಂತಿಮ ತೀರ್ಪು ಬರುವವರೆಗೆ ಹಳೆಯ ಮೀಸಲಾತಿ ಪದ್ಧತಿಯಂತೆ ನೇಮಕಾತಿ ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಬಂಜಾರ ಸಮುದಾಯದ ಶಿವಪ್ರಕಾಶ ಮಹಾರಾಜ, ಕಿರಣ್, ಶರತ್, ಎಲ್.ಬಿ. ಹಾಲೇಶನಾಯ್ಕ, ಎಲ್. ಮಂಜನಾಯ್ಕ, ಬಿ. ಹಾಲೇಶನಾಯ್ಕ, ಕೊರಚ ಸಮಾಜದ ಹೊನ್ನಪ್ಪ, ಪ್ರಸಾದ್ ಕಾವಡ ಹಾಗೂ ಭೋವಿ ಸಮಾಜದ ಮುಖಂಡರು ಸೇರಿದಂತೆ ನೂರಾರು ಯುವಕರು ಪಾಲ್ಗೊಂಡಿದ್ದರು.

Tags

Harapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X