Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಹೋಬಳಿ ಮಟ್ಟದಲ್ಲೇ ಜನರ...

Harapanahalli | ಹೋಬಳಿ ಮಟ್ಟದಲ್ಲೇ ಜನರ ಸಮಸ್ಯೆಗಳಿಗೆ ಪರಿಹಾರ : ತಹಶೀಲ್ದಾರ್ ಗಿರೀಶ್ ಬಾಬು

‘ಪ್ರಜಾಸೇವಾ ಆಂದೋಲನ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ26 Sept 2026 8:03 PM IST
share
Harapanahalli | ಹೋಬಳಿ ಮಟ್ಟದಲ್ಲೇ ಜನರ ಸಮಸ್ಯೆಗಳಿಗೆ ಪರಿಹಾರ : ತಹಶೀಲ್ದಾರ್ ಗಿರೀಶ್ ಬಾಬು

ಹರಪನಹಳ್ಳಿ: ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಆಲಿಸಿ, ಸಂಬಂಧಪಟ್ಟ ಇಲಾಖೆಗಳ ಮೂಲಕ ಕಾಲಮಿತಿಯೊಳಗೆ ಪರಿಹರಿಸುವ ಉದ್ದೇಶದಿಂದ ಹೋಬಳಿ ಮಟ್ಟದಲ್ಲಿ ‘ಪ್ರಜಾಸೇವಾ ಆಂದೋಲನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಗಿರೀಶ್ ಬಾಬು ಹೇಳಿದರು.

ತಾಲೂಕಿನ ಚಿಗಟೇರಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ಇಲಾಖೆಗಳ ಆಡಳಿತಾತ್ಮಕ ಸೇವೆಗಳು ಗ್ರಾಮೀಣ ಭಾಗದ ಜನರಿಗೆ ಸುಲಭವಾಗಿ ದೊರೆಯಬೇಕು. ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಗ್ರಾಮೀಣ ಜನರು ತಾಲೂಕು ಕೇಂದ್ರಕ್ಕೆ ಪದೇಪದೇ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಹೋಬಳಿ ಮಟ್ಟದಲ್ಲಿಯೇ ಅಹವಾಲು ಸ್ವೀಕಾರ ಹಾಗೂ ಪರಿಹಾರ ಕ್ರಮಕ್ಕೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಅರ್ಜಿಗಳನ್ನು ಸಲ್ಲಿಸುವ ಮೂಲಕ ಸರ್ಕಾರದ ಸೇವೆಗಳನ್ನು ಪಡೆದುಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸೌಲಭ್ಯಗಳು ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್. ಚಂದ್ರಶೇಖರ್ ಮಾತನಾಡಿ, ಪ್ರಜಾಸೇವಾ ಆಂದೋಲನದಲ್ಲಿ ಸ್ವೀಕರಿಸಲಾದ ಅಹವಾಲುಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಿಶೀಲಿಸಿ ನಿಯಮಾನುಸಾರ ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರಿಂದ ಒಟ್ಟು 27 ಅಹವಾಲುಗಳು ಸ್ವೀಕರಿಸಲಾಯಿತು. ಅವುಗಳಲ್ಲಿ ಮೂರು ಅಹವಾಲುಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಗಿದ್ದು, ಉಳಿದ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳ ಮೂಲಕ ಪರಿಶೀಲಿಸಿ 15 ದಿನಗಳೊಳಗೆ ವಿಲೇವಾರಿ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಆಡಳಿತದ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags

Harapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X