Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹರಪನಹಳ್ಳಿ | 8 ಜಿ.ಪಂ, 22 ತಾ.ಪಂ...

ಹರಪನಹಳ್ಳಿ | 8 ಜಿ.ಪಂ, 22 ತಾ.ಪಂ ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ10 Oct 2026 7:32 PM IST
share
ಹರಪನಹಳ್ಳಿ | 8 ಜಿ.ಪಂ, 22 ತಾ.ಪಂ ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ

ಹರಪನಹಳ್ಳಿ: ಬಹುದಿನಗಳಿಂದ ನಿರೀಕ್ಷಿಸಲಾಗುತ್ತಿದ್ದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಹರಪನಹಳ್ಳಿ ತಾಲ್ಲೂಕಿನ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಆಕಾಂಕ್ಷಿಗಳು ತಮ್ಮ ಕ್ಷೇತ್ರಗಳ ಮೀಸಲಾತಿ ವಿವರಗಳನ್ನು ಪರಿಶೀಲಿಸುವುದರ ಜೊತೆಗೆ ಮುಂದಿನ ರಾಜಕೀಯ ನಡೆಗಳ ಬಗ್ಗೆ ಇದೀಗ ಲೆಕ್ಕಾಚಾರ ಆರಂಭಿಸಿದ್ದಾರೆ.

ತಾಲ್ಲೂಕಿನಲ್ಲಿ ಒಟ್ಟು 8 ಜಿಲ್ಲಾ ಪಂಚಾಯಿತಿ (ಜಿ.ಪಂ.) ಕ್ಷೇತ್ರಗಳು ಹಾಗೂ 22 ತಾಲ್ಲೂಕು ಪಂಚಾಯಿತಿ (ತಾ.ಪಂ.) ಕ್ಷೇತ್ರಗಳಿದ್ದು, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪೈಕಿ 4 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಅದೇ ರೀತಿ, ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪೈಕಿ 11 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಒಟ್ಟಾರೆ ಎರಡೂ ಹಂತಗಳ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಪ್ರಾತಿನಿಧ್ಯ ಕಲ್ಪಿಸಲಾಗಿದೆ.

ಜಿ.ಪಂ. ಕ್ಷೇತ್ರಗಳ ಮೀಸಲಾತಿ ವಿವರ:

ತಾಲ್ಲೂಕಿನ 8 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪೈಕಿ ಪರಿಶಿಷ್ಟ ಜಾತಿಗೆ 2, ಪರಿಶಿಷ್ಟ ಪಂಗಡಕ್ಕೆ 1, ಹಿಂದುಳಿದ ವರ್ಗ 'ಅ‘ಗೆ 1 ಹಾಗೂ ಸಾಮಾನ್ಯ ವರ್ಗಕ್ಕೆ 4 ಸ್ಥಾನಗಳನ್ನು ನಿಗದಿಪಡಿಸಲಾಗಿದೆ. ಈ ವರ್ಗವಾರು ಹಂಚಿಕೆಯಡಿ ಮಹಿಳೆಯರಿಗೆ ಮೀಸಲಾದ ಸ್ಥಾನಗಳೂ ಸೇರಿವೆ.

ತಾ.ಪಂ. ಕ್ಷೇತ್ರಗಳ ಮೀಸಲಾತಿ ವಿವರ:

ಒಟ್ಟು 22 ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪೈಕಿ ಪರಿಶಿಷ್ಟ ಜಾತಿಗೆ 6, ಪರಿಶಿಷ್ಟ ಪಂಗಡಕ್ಕೆ 4, ಹಿಂದುಳಿದ ವರ್ಗ 'ಅ‘ಗೆ 1 ಹಾಗೂ ಸಾಮಾನ್ಯ ವರ್ಗಕ್ಕೆ 11 ಸ್ಥಾನಗಳನ್ನು ನಿಗದಿಪಡಿಸಲಾಗಿದೆ. ಈ ಕ್ಷೇತ್ರಗಳಲ್ಲಿಯೂ ಒಟ್ಟು 11 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ.

ಆಕಾಂಕ್ಷಿಗಳಲ್ಲಿ ಹೆಚ್ಚಿದ ಕುತೂಹಲ:

ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಯಾವ ಕ್ಷೇತ್ರದಲ್ಲಿ ಯಾವ ವರ್ಗದ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ದೊರೆತಿದೆ ಎಂಬುದರ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ. ಈಗಾಗಲೇ ಕ್ಷೇತ್ರಗಳಲ್ಲಿ ಜನಸಂಪರ್ಕ ಬೆಳೆಸಿಕೊಂಡು ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದ ಆಕಾಂಕ್ಷಿಗಳು ತಮ್ಮ ಕ್ಷೇತ್ರದ ಮೀಸಲಾತಿಯನ್ನು ಆಧರಿಸಿ ಮುಂದಿನ ತಂತ್ರ ರೂಪಿಸುತ್ತಿದ್ದಾರೆ.

ಮೀಸಲಾತಿ ಬದಲಾವಣೆಯಿಂದ ಕೆಲವರಿಗೆ ಸ್ಪರ್ಧಿಸಲು ಅವಕಾಶ ದೊರೆಯುವ ನಿರೀಕ್ಷೆಯಿದ್ದರೆ, ಇತ್ತ, ಕೆಲವರು ಪರ್ಯಾಯ ಕ್ಷೇತ್ರಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಟಿಕೆಟ್‌ಗಾಗಿ ಪೈಪೋಟಿ ಹೆಚ್ಚಾಗುವ ಸಾಧ್ಯತೆಯೂ ಇದ್ದು, ಸ್ಥಳೀಯ ಮುಖಂಡರ ರಾಜಕೀಯ ಪ್ರಭಾವ, ಜನಬೆಂಬಲ ಹಾಗೂ ಪಕ್ಷದ ಸಂಘಟನೆಯಲ್ಲಿ ಅವರ ಪಾತ್ರ ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರ್ಣಾಯಕವಾಗುವ ನಿರೀಕ್ಷೆಯಿದೆ.

ಪಕ್ಷ ಸಂಘಟನೆಗೆ ವೇಗ:

ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ,ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಗ್ರಾಮೀಣ ಪ್ರದೇಶಗಳಲ್ಲಿ ಸಂಘಟನೆಯನ್ನು ಬಲಪಡಿಸುವತ್ತ ಗಮನ ಹರಿಸುವ ಸಾಧ್ಯತೆಯಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಜನಸಂಪರ್ಕ ಹೆಚ್ಚಿಸುವುದು, ಕಾರ್ಯಕರ್ತರನ್ನು ಸಂಘಟಿಸುವುದು, ಸಂಭಾವ್ಯ ಅಭ್ಯರ್ಥಿಗಳ ಕುರಿತು ಮಾಹಿತಿ ಸಂಗ್ರಹಿಸುವುದು ಹಾಗೂ ಸ್ಥಳೀಯ ಸಮಸ್ಯೆಗಳನ್ನು ಗುರುತಿಸುವುದು ರಾಜಕೀಯ ಪಕ್ಷಗಳ ಮುಂದಿನ ಕಾರ್ಯತಂತ್ರದ ಭಾಗವಾಗಲಿದೆ.

ಇನ್ನೂ ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ಪೂರೈಕೆ, ಚರಂಡಿ ವ್ಯವಸ್ಥೆ, ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿ ಮುಂತಾದ ವಿಷಯಗಳು ಚುನಾವಣಾ ಪ್ರಚಾರದಲ್ಲಿ ಪ್ರಮುಖ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುವ ಸಾಮರ್ಥ್ಯ ಮತ್ತು ಜನರೊಂದಿಗೆ ಹೊಂದಿರುವ ಸಂಪರ್ಕವೂ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸುವಲ್ಲಿ ಮಹತ್ವ ಪಡೆಯಲಿದೆ.

ಒಟ್ಟಿನಲ್ಲಿ, ಮೀಸಲಾತಿ ಪ್ರಕಟಣೆಯು ಹರಪನಹಳ್ಳಿ ತಾಲ್ಲೂಕಿನ ಗ್ರಾಮೀಣ ರಾಜಕೀಯಕ್ಕೆ ಹೊಸ ಚೈತನ್ಯ ನೀಡಿದ್ದು, ಮುಂದಿನ ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ, ಪಕ್ಷಗಳ ಕಾರ್ಯತಂತ್ರ ಹಾಗೂ ಕ್ಷೇತ್ರಮಟ್ಟದ ರಾಜಕೀಯ ಚಟುವಟಿಕೆಗಳು ಮತ್ತಷ್ಟು ವೇಗ ಪಡೆಯುವ ಸಾಧ್ಯತೆಯಿದೆ. ಚುನಾವಣೆಯ ದಿನಾಂಕ ಹಾಗೂ ಅಧಿಕೃತ ವೇಳಾಪಟ್ಟಿ ಪ್ರಕಟವಾದ ಬಳಿಕ ರಾಜಕೀಯ ಕಣದ ಸ್ಪಷ್ಟ ಚಿತ್ರಣ ಹೊರಬೀಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X