Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹೂವಿನಹಡಗಲಿ | ಚಂದ್ರಶೇಖರ ದೊಡ್ಡಮನಿ...

ಹೂವಿನಹಡಗಲಿ | ಚಂದ್ರಶೇಖರ ದೊಡ್ಡಮನಿ ಮೇಲಿನ ಹಲ್ಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಕೆಆರ್‌ಎಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 Nov 2026 10:47 PM IST
share
ಹೂವಿನಹಡಗಲಿ | ಚಂದ್ರಶೇಖರ ದೊಡ್ಡಮನಿ ಮೇಲಿನ ಹಲ್ಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಕೆಆರ್‌ಎಸ್ ಆಗ್ರಹ

ಹೂವಿನಹಡಗಲಿ: ಹಲ್ಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಹಾಗೂ ಕೆಆರ್‌ಎಸ್ ಪಕ್ಷದ ಕಾರ್ಯಕರ್ತ ಚಂದ್ರಶೇಖರ ದೊಡ್ಡಮನಿ ಅವರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಹೋರಾಟ ನಡೆಸಲು ಹಡಗಲಿಗೆ ಬಂದಿದ್ದೇವೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು.

ಪಟ್ಟಣದಲ್ಲಿ ಕೆಆರ್‌ಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಕಾರ್ಯಕ್ರಮಕ್ಕೆ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ಬಳಿಕ ನಡೆದ ಸಭೆಯಲ್ಲಿ ಪಾಯ ಗಣೇಶ್, ರಘು ಜಾಣಗೆರೆ, ಶಕ್ತಿಕುಮಾರ್, ರಘುಪತಿ ಭಟ್ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಿದ್ದರು.

ಪಾಯ ಗಣೇಶ್ ಮಾತನಾಡಿ, ಹಡಗಲಿಯಲ್ಲಿ ನಡೆಯುತ್ತಿರುವ ಅನ್ಯಾಯ ಹಾಗೂ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಲು ಪಕ್ಷದ ಕಾರ್ಯಕರ್ತರು ಆಗಮಿಸಿದ್ದಾರೆ. ಕೆಆರ್‌ಎಸ್ ಪಕ್ಷದಲ್ಲಿ 72 ಸಾವಿರಕ್ಕೂ ಹೆಚ್ಚು ಸೈನಿಕರಿದ್ದು, ನಮ್ಮ ಊರಿನ ರಕ್ಷಣೆಯನ್ನು ನಾವೇ ಮಾಡಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರತಿ ಕ್ಷೇತ್ರದಲ್ಲೂ ಕೆಆರ್‌ಎಸ್ ಪಕ್ಷದ ಒಬ್ಬ ಸೈನಿಕ ಶಾಸಕನಾಗಬೇಕು. ಸಂವಿಧಾನಬದ್ಧ ಆಡಳಿತ ನೀಡುವುದು ನಮ್ಮ ಪಕ್ಷದ ಆಶಯವಾಗಿದೆ ಎಂದರು.

ರಘು ಜಾಣಗೆರೆ ಮಾತನಾಡಿ, ರಾಜ್ಯದ ಮೂಲೆ ಮೂಲೆಗಳಿಂದ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಆಗಮಿಸಿದ್ದಾರೆ. ಇಂದಿನ ರಾಜಕಾರಣ ವ್ಯಾಪಾರ ಮತ್ತು ವ್ಯವಹಾರವಾಗಿ ಮಾರ್ಪಟ್ಟಿದ್ದು, ಜನರ ತೆರಿಗೆ ಹಣವನ್ನು ಭ್ರಷ್ಟಾಚಾರದ ಮೂಲಕ ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಹಳೆಯ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿಗಳಲ್ಲಿಯೂ ಅವ್ಯವಹಾರ ನಡೆದಿದೆ ಎಂದು ದೂರಿದರು.

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕಾಗಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತ ಚಂದ್ರಶೇಖರ ದೊಡ್ಡಮನಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಕುಡುಗೋಲುಮಟ್ಟಿ ಏತ ನೀರಾವರಿ ಯೋಜನೆಯಲ್ಲಿನ ಅಕ್ರಮಗಳನ್ನು ಪ್ರಶ್ನಿಸಿ, ರೈತರಿಗೆ ನೀರು ದೊರಕಿಸುವಂತೆ ಅವರು ಹೋರಾಟ ನಡೆಸಿದ್ದಾರೆ. ಇದೀಗ ಅವರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿದೆ. ಅವರು ದೂರು ನೀಡಲು ಹೋದಾಗಲೂ ಪೊಲೀಸರು ಸ್ವೀಕರಿಸಲಿಲ್ಲ ಎಂಬ ಆರೋಪವಿದೆ. ನ್ಯಾಯಕ್ಕಾಗಿ ಹೋರಾಡುತ್ತಿರುವ ಚಂದ್ರಶೇಖರ ದೊಡ್ಡಮನಿ ಅವರ ಬೆಂಬಲಕ್ಕೆ ಹಡಗಲಿಯ ಜನತೆ ನಿಲ್ಲಬೇಕು. ಪೊಲೀಸರು ಸಂವಿಧಾನವನ್ನು ಓದಿ, ಅದರ ಆಶಯದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಆಗ್ರಹಿಸಿದರು.

ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಮಾತನಾಡಿ, ಹಲ್ಲೆಗೊಳಗಾದವರನ್ನೇ ಬಂಧಿಸಿ ಜೈಲಿಗೆ ಕಳುಹಿಸಿರುವುದು ದುರದೃಷ್ಟಕರ. ಪ್ರಾಥಮಿಕ ತನಿಖೆ ನಡೆಸದೆ ಎಫ್‌ಐಆರ್ ದಾಖಲಿಸಿರುವ ಪೊಲೀಸರ ಕ್ರಮ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚಂದ್ರಶೇಖರ ದೊಡ್ಡಮನಿ ಅವರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿರುವುದರ ಹಿಂದಿನ ಉದ್ದೇಶದ ಬಗ್ಗೆಯೂ ಪ್ರಶ್ನಿಸಿದರು.

ಮಾಜಿ ಶಾಸಕ ಪರಮೇಶ್ವರ ನಾಯಕ್ ಅವರ ಆಡಳಿತದ ಅವಧಿಯಲ್ಲಿ ಶೇ. 5ರಿಂದ 7ರಷ್ಟು ಕಮಿಷನ್ ಪಡೆಯಲಾಗುತ್ತಿತ್ತು ಎಂಬ ಆರೋಪವಿತ್ತು. ಆದರೆ, ಈಗಿನ ಶಾಸಕ ಕೃಷ್ಣ ನಾಯಕ್ ಅವರ ಅವಧಿಯಲ್ಲಿ ಶೇ. 20ರಿಂದ 30ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿದ ಅವರು, ಈ ಆರೋಪಗಳ ಕುರಿತು ಸಂಬಂಧಪಟ್ಟವರು ಸ್ಪಷ್ಟನೆ ನೀಡಬೇಕು ಎಂದರು.

ಚಂದ್ರಶೇಖರ ದೊಡ್ಡಮನಿ ಅವರು ಜೈಲಿನಿಂದ ಹೊರಬಂದ ಬಳಿಕ ಸಂಘಟಿತ ಹೋರಾಟ ನಡೆಸಲಾಗುವುದು. ಶಾಸಕ ಕೃಷ್ಣ ನಾಯಕ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸುತ್ತೇವೆ. ಕೆಆರ್‌ಎಸ್ ಪಕ್ಷದಲ್ಲಿ ಜಾತಿ, ಕುಲ, ಮತದ ಭೇದವಿಲ್ಲ. ಸಂವಿಧಾನಬದ್ಧ ಆಡಳಿತ ಮತ್ತು ಭ್ರಷ್ಟಾಚಾರ ಮುಕ್ತ ವ್ಯವಸ್ಥೆ ನಮ್ಮ ಗುರಿಯಾಗಿದೆ. ಹೂವಿನಹಡಗಲಿ ಜನತೆ ಕೆಆರ್‌ಎಸ್ ಪಕ್ಷವನ್ನು ಬೆಂಬಲಿಸಬೇಕು. ನಿಮ್ಮ ನ್ಯಾಯಯುತ ಹೋರಾಟದಲ್ಲಿ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ವಿವಿಧ ಭಾಗಗಳಿಂದ ಆಗಮಿಸಿದ್ದ ಬೆಂಬಲಿಗರು ಪಾಲ್ಗೊಂಡಿದ್ದರು.

Tags

Chandrashekhara DoddamaniKRSHoovinaHadagali
share
ವಾರ್ತಾಭಾರತಿ
ವಾರ್ತಾಭಾರತಿ
Next Story
X