Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Hosapete | ನೀಟ್ ಪ್ರಶ್ನೆಪತ್ರಿಕೆ...

Hosapete | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 May 2026 9:56 PM IST
share
Hosapete | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

ಹೊಸಪೇಟೆ : ನೀಟ್ ಯುಜಿ (NEET UG) 2026 ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು, ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರಿಹಾರ ನೀಡಬೇಕು ಹಾಗೂ ಎನ್‌ಟಿಎ ಸಂಸ್ಥೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಎಸ್‌ಎಫ್‌ಐ ವಿಜಯನಗರ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ತಾಲೂಕು ದಂಡಾಧಿಕಾರಿ ಶ್ರುತಿ ಅವರ ಮೂಲಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಎಸ್‌ಎಫ್‌ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರೆಡ್ಡಿ, ದೇಶದಾದ್ಯಂತ ಸುಮಾರು 22 ಲಕ್ಷ ವಿದ್ಯಾರ್ಥಿಗಳು ಬರೆದಿದ್ದ NEET UG 2026 ಪರೀಕ್ಷೆಯ ಪ್ರಶ್ನೆಪತ್ರಿಕೆ ರಾಜಸ್ಥಾನದಲ್ಲಿ ಸೋರಿಕೆಯಾಗಿರುವ ಹಿನ್ನೆಲೆ ಎನ್‌ಟಿಎ ಮರುಪರೀಕ್ಷೆ ಘೋಷಿಸಿರುವುದು ವಿದ್ಯಾರ್ಥಿಗಳ ಭವಿಷ್ಯದ ಮೇಲಿನ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಆರೋಪಿಸಿದರು.

ಆರಂಭದಿಂದಲೂ ಪರೀಕ್ಷಾ ಅಕ್ರಮಗಳಿಗೆ ಕುಖ್ಯಾತವಾಗಿರುವ ಎನ್‌ಟಿಎ ಮತ್ತೊಮ್ಮೆ ತನ್ನ ಅಸಮರ್ಥತೆಯನ್ನು ಸಾಬೀತುಪಡಿಸಿದೆ. ಈ ಹಿಂದೆ ನಡೆದ ಅಕ್ರಮಗಳ ಮೇಲೂ ಕೇಂದ್ರ ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ. ಹೀಗಾಗಿ ಎನ್‌ಟಿಎ ಸಂಸ್ಥೆಯನ್ನು ತಕ್ಷಣವೇ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷ ಡಾ. ದೊಡ್ಡ ಬಸವರಾಜ್ ಗುಳೇದಳ್ ಮಾತನಾಡಿ, ಒಟ್ಟು 720 ಅಂಕಗಳಲ್ಲಿ ಸುಮಾರು 600 ಅಂಕಗಳಿಗೆ ಸಂಬಂಧಿಸಿದ ಪ್ರಶ್ನೆಗಳು ಸೋರಿಕೆಯಾಗಿವೆ ಎಂಬ ವರದಿಗಳು ಆತಂಕಕಾರಿ ಎಂದರು.

180 ಪ್ರಶ್ನೆಗಳ ಪೈಕಿ ಸುಮಾರು 15 ಪ್ರಶ್ನೆಗಳು ಮುಂಚಿತವಾಗಿಯೇ ಪ್ರಸಾರವಾಗಿದ್ದರೆ, ರಸಾಯನಶಾಸ್ತ್ರ ವಿಭಾಗದ ಸುಮಾರು 120 ಪ್ರಶ್ನೆಗಳು ಅಕ್ಷರಶಃ ಸೋರಿಕೆಯಾಗಿರುವುದು ಗಂಭೀರ ವಿಷಯವಾಗಿದೆ ಎಂದು ಹೇಳಿದರು.

ಎಸ್‌ಎಫ್‌ಐ ರಾಜ್ಯ ಪದಾಧಿಕಾರಿ ಅನಂತರಾಜ್ ಮಾತನಾಡಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಕೇಂದ್ರ ಸರ್ಕಾರದ ಕೇಂದ್ರೀಕೃತ ಪರೀಕ್ಷಾ ನೀತಿಗಳೇ ಕಾರಣ ಎಂದು ಆರೋಪಿಸಿದರು.

ಪರೀಕ್ಷಾ ವ್ಯವಸ್ಥೆಯನ್ನು ಕೇಂದ್ರೀಕರಿಸುವ ಮೂಲಕ ಸರ್ಕಾರ ಪರೀಕ್ಷಾ ಮಾಫಿಯಾಗಳಿಗೆ ಅವಕಾಶ ಕಲ್ಪಿಸಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಮಧ್ಯಮ ವರ್ಗದ ಕುಟುಂಬಗಳು ಆತಂಕ ಮತ್ತು ಅನಿಶ್ಚಿತತೆಯಲ್ಲಿ ಬದುಕುವಂತಾಗಿದೆ. ಜೊತೆಗೆ ಕೋಚಿಂಗ್ ಮಾಫಿಯಾಗಳು ಬೆಳೆಯಲು ಸಹ ಕಾರಣವಾಗಿದೆ ಎಂದು ಟೀಕಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಉಂಟಾದ ಹಾನಿಗೆ ಎನ್‌ಟಿಎ ಪರಿಹಾರ ನೀಡಬೇಕು ಹಾಗೂ ಕೇಂದ್ರ ಸರ್ಕಾರ ಎನ್‌ಟಿಎ ಸಂಸ್ಥೆಯನ್ನು ರದ್ದುಪಡಿಸಬೇಕು ಎಂದು ಎಸ್‌ಎಫ್‌ಐ ವಿಜಯನಗರ ಜಿಲ್ಲಾ ಸಮಿತಿ ಆಗ್ರಹಿಸಿತು.

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಜಿಲ್ಲಾ ಪದಾಧಿಕಾರಿಗಳಾದ ಪವನ್ ಕುಮಾರ್ ಸೇರಿದಂತೆ ಹಲವು ವಿದ್ಯಾರ್ಥಿ ಮುಖಂಡರು ಭಾಗವಹಿಸಿದ್ದರು.

Tags

Hosapete
share
ವಾರ್ತಾಭಾರತಿ
ವಾರ್ತಾಭಾರತಿ
Next Story
X