ಹೊಸಪೇಟೆ | ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ; ಜನಜೀವನ ಅಸ್ತವ್ಯಸ್ತ

ವಿಜಯನಗರ (ಹೊಸಪೇಟೆ) : ನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಶಾಲೆಗೆ ಹೋಗಲು ಮಕ್ಕಳು ಹರಸಾಹಸ ಪಡುತ್ತಿದ್ದಾರೆ.
ಹೊಸಪೇಟೆ ನಗರದಲ್ಲಿ ಎಲ್ಲೆಡೆ ನೋಡಿದರೂ ಮಳೆ ನೀರು ನಿಂತಿದ್ದು, ನೀರು ಹೋಗಲು ದಾರಿ ಇಲ್ಲದಂತಾಗಿದೆ. ಒಳಚರಂಡಿ ವ್ಯವಸ್ಥೆ ಕಾಮಗಾರಿಗಳನ್ನು ಪರಿಶೀಲಿಸಿ ಸ್ವಚ್ಛಗೊಳಿಸಿದ್ದರೆ, ಇಂದು ನಮಗೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಗರದ ಕೌಲ್ ಪೇಟೆಯಲ್ಲಿರುವ ವಾರ್ಡ್ ನಂ 19ರಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಸುಲೇಮಾನ್ ಎಂಬವರ ಮನೆಯ ಗೋಡೆ ಕುಸಿದಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
Next Story





