ಹೊಸಪೇಟೆ | ತಾಲೂಕು ಪಂಚಾಯತ್ ಕಟ್ಟಡದ ಮೇಲ್ಚಾವಣಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ

ವಿಜಯನಗರ / ಹೊಸಪೇಟೆ: ನಗರದ ತಾಲೂಕು ಪಂಚಾಯಿತಿ ಕಟ್ಟಡದ ಮೇಲ್ಚಾವಣಿಯಲ್ಲಿ ಮಂಗಳವಾರ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ತಾಲೂಕು ದಂಡಾಧಿಕಾರಿ ಶ್ರುತಿ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆಲಂ ಬಾಷಾ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Next Story







