ಹೊಸಪೇಟೆ | ಲಕ್ಷಾಂತರ ರೂ. ಮೌಲ್ಯದ ಅಕ್ರಮ ಪಡಿತರ ಅಕ್ಕಿ, ರಾಗಿ ವಶ

ಹೊಸಪೇಟೆ : ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಪಡಿತರ ಅಕ್ಕಿ, ರಾಗಿಯನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟ ಲಕ್ಷಾಂತರ ರೂ. ಮೌಲ್ಯದ ಅಕ್ರಮ ಪಡಿತರವನ್ನು ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ಹೊಸಪೇಟೆ ನಗರದ ನಾಲ್ಕು ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿ, ಪಡಿತರ ಅಕ್ಕಿ, ರಾಗಿ ಹಾಗೂ ಒಂದು ಟಾಟಾ ಎಂಟ್ರಾ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಹೊಸಪೇಟೆಯ ಜೆ.ಪಿ ನಗರ, ಅರವಿಂದ ನಗರ, ಚಪ್ಪರದಹಳ್ಳಿ ಹಾಗೂ ಚಿತ್ತವಾಡ್ಗಿ ನಾಲ್ಕು ಕಡೆಗಳಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಟ್ಟಿರುವ ಖಚಿತ ಮಾಹಿತಿಯ ಮೇರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ರಿಯಾಝ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ 200ಕ್ಕೂ ಹೆಚ್ಚು ಅಕ್ಕಿ ಚೀಲಗಳು ಮತ್ತು 20ಕ್ಕೂ ಹೆಚ್ಚು ರಾಗಿ ಚೀಲವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





