ವಿಜಯನಗರ: ಅಕ್ರಮ ಮದ್ಯ ಮಾರಾಟಗಾರರಿಗೆ ಬಿಸಿ ಮುಟ್ಟಿಸಿದ ಎಸ್ಪಿ; 23 ಪ್ರಕರಣ ದಾಖಲು

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಲ್ ಶ್ರೀಹರಿಬಾಬು
ವಿಜಯನಗರ: ವಿಜಯನಗರ ಜಿಲ್ಲೆಯ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ವಿಜಯನಗರ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ/ಸಾಗಾಣಿಕೆ ಮಾಡುವವರ ಮೇಲೆ ದಾಳಿ ಮಾಡಿ, ಒಟ್ಟು 23 ಪ್ರಕರಣಗಳನ್ನು ದಾಖಲಿಸಿ, 40 ಲೀ 440 ಎಂ.ಎಲ್. ಮದ್ಯವನ್ನು ಜಪ್ತಿ ಮಾಡಲಾಯಿತು.
ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಹೋಟಲ್/ಡಾಬಾ ಹಾಗೂ ವ್ಯಾಪಾರ ಮಳಿಗೆಗಳ ಲೈಸನ್ಸ್ ರದ್ದುಪಡಿಸಲು, ಸಂಬಂಧಪಟ್ಟ ಇಲಾಖೆಗೆ ಪತ್ರ ವ್ಯವಹಾರ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಲ್ ಶ್ರೀಹರಿಬಾಬು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
Next Story