ವಿಜಯನಗರ | ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನೆ

ವಿಜಯನಗರ : ಹೊಸಪೇಟೆ ತಾಲೂಕಿನ ಸೀತಾರಾಮ್ ತಾಂಡಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಶಾಸಕ HR ಗವಿಯಪ್ಪ ಉದ್ಘಾಟನೆ ಮಾಡಿದರು.
ಕಳೆದ ಎರಡು ವರ್ಷಗಳಿಂದ ಶಾಲೆಯ ನೂತನ ಕಟ್ಟಡದ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಮಾಜಿ ಸಚಿವ ಆನಂದ್ ಸಿಂಗ್ ಅವರು ಕಾಮಗಾರಿಗೆ ಒಂದು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದರು.
ಈ ವೇಳೆ ಹೊಸಪೇಟೆ ಬಿಇಓ ಶೇಖರ್ ಹೊರಪೇಟೆ, ಸೀತಾರಾಮ್ ತಾಂಡ ಗ್ರಾಪಂ ಅಧ್ಯಕ್ಷ ಗೋವಿಂದ್ ನಾಯ್ಕ್, SDMC ಅಧ್ಯಕ್ಷ ರಾಮಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Next Story





