Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಸರಕಾರಿ ಆಸ್ಪತ್ರೆಯಲ್ಲಿ ಬಾಣಂತಿ...

ಸರಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಡಿಸ್ಚಾರ್ಜ್ ವೇಳೆ ಜನನ ಪ್ರಮಾಣ ಪತ್ರ ವಿತರಣೆ ಕಡ್ಡಾಯ : ಡಿಸಿ ಎಂ.ಎಸ್.ದಿವಾಕರ್

ವಾರ್ತಾಭಾರತಿವಾರ್ತಾಭಾರತಿ26 Aug 2025 7:52 PM IST
share
ಸರಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಡಿಸ್ಚಾರ್ಜ್ ವೇಳೆ ಜನನ ಪ್ರಮಾಣ ಪತ್ರ ವಿತರಣೆ ಕಡ್ಡಾಯ : ಡಿಸಿ ಎಂ.ಎಸ್.ದಿವಾಕರ್

ವಿಜಯನಗರ (ಹೊಸಪೇಟೆ) : ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿನ ಜನನ-ಮರಣ ನೋಂದಣಿ ಪ್ರಕ್ರಿಯೆ ವಿಳಂಬವಾಗಿ ಮಾಹಿತಿ ನೀಡುವ ಮೂಲಕ ಪ್ರಮಾಣ ಪತ್ರಕ್ಕಾಗಿ ಕುಟುಂಬಸ್ಥರನ್ನು ಅಲೆದಾಡಿಸುತ್ತಿರುವುದು ಶೋಚನೀಯ. ಇದಕ್ಕೆ ಆಯಾ ತಾಲೂಕು ವೈದ್ಯಾಧಿಕಾರಿಗಳೇ ಹೊಣೆ, ನಿರ್ಲಕ್ಷಿತ ಆಪರೇಟರ್ ಸಿಬ್ಬಂದಿಗಳನ್ನು ಕೂಡಲೇ ವಜಾಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು.

ಜಿಲ್ಲೆಯಲ್ಲಿ ಜನನ ಮತ್ತು ಮರಣ ನೊಂದಾಣಿಗಳು ಕಳೆದ 7 ತಿಂಗಳಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಜನನ 1332, ಮರಣ 852 ಒಟ್ಟು 2184 ನೊಂದಾಣಿ ವಿಳಂಬವಾಗಿವೆ. ಅದರಲ್ಲಿ ಹೊಸಪೇಟೆ 1279, ಹರಪನಹಳ್ಳಿ 251, ಹಗರಿಬೊಮ್ಮನಹಳ್ಳಿ 150, ಹೂವಿನಹಡಗಲಿ 116, ಕೊಟ್ಟೂರು 110, ಕೂಡ್ಲಿಗಿ 109, ಕಮಲಾಪುರ 88, ಮರಿಯಮ್ಮನಹಳ್ಳಿ 81 ನೊಂದಾಣಿ ವಿಳಂಬವಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ 21 ದಿನದೊಳಗೆ ಜನನ, ಮರಣ ಪ್ರಮಾಣ ಪತ್ರಗಳು ನೀಡಬೇಕು. ನಿಗದಿತ ಕಾಲಾವಧಿ ಮೀರಿ ವಿಳಂಬ ಪ್ರಕ್ರಿಯೆ ಯಾಕೆ? ವಿನಾಕಾರಣ ಸರ್ವರ್ ಪ್ರಾಬ್ಲಂ ನೆಪ ಹೇಳಿ ಕುಟುಂಬಸ್ಥರನ್ನು ಅನಗತ್ಯ ಅಲೆದಾಡಿಸುತ್ತಿರುವ ಅನೇಕ ದೂರುಗಳು ಬಂದಿವೆ ಎಂದರು.

ನಿರ್ಲಕ್ಷಿತ ಕಂಪ್ಯೂಟರ್ ಆಪರೇಟರ್‌ಗಳಿದ್ದರೇ ಅಂತಹ ಸಿಬ್ಬಂದಿಗಳನ್ನು ಕೂಡಲೇ ವಜಾಗೊಳಿಸಿ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿ ಡಿಸ್ಚಾರ್ಜ್ ವೇಳೆಯಲ್ಲಿ ಜನನ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ನೀಡಬೇಕು. ಖಾಸಗಿ ಆಸ್ಪತ್ರೆಗಳಿಂದ ಮಾಹಿತಿ ವಿಳಂಬವಾಗಿದ್ದರೇ ಜಿಲ್ಲಾ ಆರೋಗ್ಯಾಧಿಕಾರಿಗಳು ಕೆಪಿಎಂಇ ಕಾಯ್ದೆಯಡಿ ಸೂಕ್ತ ಕ್ರಮ ವಹಿಸಬೇಕು. ಎಲ್ಲಾ ತಾಲೂಕಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಶೀಘ್ರವೇ ನೋಟಿಸ್ ಜಾರಿ ಮಾಡಿ ಸರ್ಕಾರದ ಮಾರ್ಗಸೂಚಿಯಂತೆ 21 ದಿನಗಳ ಬದಲಾಗಿ 21 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಪ್ರಮಾಣ ಪತ್ರಗಳನ್ನು ಕುಟುಂಬಸ್ಥರಿಗೆ ನೀಡುವಂತಾಗಲಿ. ನಾನು ಖುದ್ದಾಗಿ ಆಸ್ಪತ್ರೆಗಳನ್ನು ಭೇಟಿ ನೀಡುವೆ ಪ್ರಮಾಣ ಪತ್ರಗಳ ವಿಳಂಬ ಕಂಡು ಬಂದರೆ ಆಯಾ ತಾಲೂಕು ವೈದ್ಯಾಧಿಕಾರಿಗಳೇ ಹೊಣೆ, ಮುಲಾಜಿಲ್ಲದೇ ಕ್ರಿಮಿನಲ್ ಪ್ರಕರಣ ದಾಖಲಿಸುವೆ ಎಂದು ಹೇಳಿದರು.

ಖಾಸಗಿ ಆಸ್ಪತ್ರೆಯಲ್ಲಿ ವಿಳಂಬ ಕಂಡರೆ ಕೆಪಿಎಂಇ ಕಾಯ್ದೆಯಡಿ ಕನಿಷ್ಟ 10 ದಿನಗಳು ಸೇವೆ ಸ್ಥಗಿತಕ್ಕೆ ಕ್ರಮ ವಹಿಸಲಾಗುವುದು. ಮಾಹಿತಿ ಮತ್ತು ವರದಿ ನಮೂನೆಗಳಾದ ಜನನ ವರದಿ-1, ಮರಣ ವರದಿ-2 ರಲ್ಲಿ ನೀಡಿದ ಮಾಹಿತಿಯನ್ನು ಜಾಗೂರಕತೆಯಿಂದ ನೊಂದಾಯಿಸಲು ಕ್ರಮ ವಹಿಸಬೇಕೆಂದು ಸೂಚಿಸಿದರು.

ವಿಮಾ ನೊಂದಾಣಿಯಲ್ಲಿ ಸಾಧನೆಗೆ ಪ್ರಶಂಸೆ :


ಜಿಲ್ಲೆಯಲ್ಲಿ 2025-26 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಲ್ಲಿ ಹೆಚ್ಚು ನೊಂದಾಣಿ ಆಗಿರುವುದಕ್ಕೆ ವಿಶೇಷವಾಗಿ ಕೃಷಿ ಇಲಾಖೆ ಅಧಿಕಾರಿಗಳನ್ನು ಜಿಲ್ಲಾಧಿಕಾರಿಗಳು ಪ್ರಶಂಸಿದರು. ಮುಂಗಾರು ಸಾಲಿನಲ್ಲಿ ಒಟ್ಟು 103495 ರೈತರು ನೊಂದಾಯಿಸಿದ್ದಾರೆ. 89561.9 ಹೆಕ್ಟರ್ ವಿಸ್ತೀರ್ಣ ಕೃಷಿ ಭೂಮಿಗೆ ವಿಮಾ ನೊಂದಾಯಿಸಲಾಗಿದೆ. ಒಟ್ಟು 52021.89 ಲಕ್ಷ ರೂಗಳ ವಿಮಾ ಮೊತ್ತ ಹಾಗೂ 1066.31 ಲಕ್ಷ ರೂ. ಗಳ ವಿಮಾ ಕಂತು ಪಾವತಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಮೊಟ್ಟ ಮೊದಲನೇ ಬಾರಿಗೆ ಈ ಪ್ರಗತಿ ಸಾಧನೆಯಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಶ್ಲಾಘಿಸಿದರು.

ಅಗತ್ಯ ಔಷಧಿಗಳ ಲಭ್ಯತೆ :

ಜಿಲ್ಲೆಯಲ್ಲಿ ಸುಮಾರು 18 ಜನ ಹಿಮೋಫಿಲಿಯಾ ರೋಗಿಗಳು ಇದ್ದಾರೆ. ಇವರ ಚಿಕಿತ್ಸೆಗೆ ತೊಂದರೆ ಆಗದಂತೆ ಅಗತ್ಯ ಔಷಧಿಗಳನ್ನು ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಸಂಗ್ರಹಿಸಿಡಿ. ತಾಲೂಕು ಆಸ್ಪತ್ರೆಗಳಲ್ಲಿ ನಿತ್ಯ ಅಗತ್ಯ ಔಷಧಿಗಳ ಕೊರತೆ ಆಗದಂತೆ ನಿರ್ವಹಿಸಿ ಎಂದು ಸಲಹೆ ನೀಡಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮುಹಮ್ಮದ್ ಅಕ್ರಮ್ ಅಲಿ ಷಾ ಅವರು ಮಾತನಾಡಿದರು.

ಈ ವೇಳೆ ಸಭೆಯಲ್ಲಿ ಜಿಲ್ಲಾ ಸಾಂಖ್ಯಿಕ ಅಧಿಕಾರಿ ಎನ್.ಕೆ.ಪತ್ರಿಬಸಪ್ಪ, ಜಂಟಿ ಕೃಷಿ ನಿರ್ದೇಶಕ ಜಿ.ಟಿ.ಮಂಜುನಾಥ, ಉಪ ಕೃಷಿ ನಿರ್ದೇಶಕ ನಯೀಮ್ ಪಾಷಾ, ತೋಟಗಾರಿಕೆ ಉಪನಿರ್ದೇಶಕ ಪಿ.ಜಿ.ಚಿದಾನಂದಪ್ಪ, ರೇಷ್ಮೇ ಉಪನಿರ್ದೇಶಕ ವಿ.ಸುಧೀರ್, ಜಿಲ್ಲಾ ಕುಷ್ಟರೋಗ ಅಧಿಕಾರಿ ಡಾ.ರಾಧಿಕಾ, ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕು ವೈದ್ಯಾಧಿಕಾರಿಗಳು, ತಾಪಂ ಇಒ ಗಳು, ಎಲ್ಲಾ ಕೃಷಿ ಇಲಾಖೆ ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X