Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಕೂಡ್ಲಿಗಿ | 870 ಕೋಟಿ ವೆಚ್ಚದ 74...

ಕೂಡ್ಲಿಗಿ | 870 ಕೋಟಿ ವೆಚ್ಚದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ9 Nov 2025 4:51 PM IST
share
ಕೂಡ್ಲಿಗಿ | 870 ಕೋಟಿ ವೆಚ್ಚದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಕೂಡ್ಲಿಗಿ ನ9: ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ, ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಶ್ಲಾಘಿಸಿದರು.

ಬರಡು ನೆಲ ಕೂಡ್ಲಿಗಿಯನ್ನು ಹಸಿರಿನ ನೆಲವನ್ನಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿರುವ ಶಾಸಕ ಶ್ರೀನಿವಾಸ್ ಅವರು ಅತ್ಯಂತ ಕ್ರಿಯಾಶೀಲರು. ಇವರಿಂದ ಕ್ಷೇತ್ರದ ಅಭಿವೃದ್ಧಿ ಅತ್ಯಂತ ವೇಗ ಪಡೆದುಕೊಂಡಿದೆ ಎಂದರು.

ನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರಕಾರ. ಕಳೆದ ಎರಡು ವರ್ಷಗಳಲ್ಲಿ ಕೂಡ್ಲಿಗಿ‌ ಕ್ಷೇತ್ರಕ್ಕೆ 1,750 ಕೋಟಿಗೂ ಅಧಿಕ ಮೊತ್ತದ ಹಣದಲ್ಲಿ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜೊತೆಗೆ ಚುನಾವಣೆ ವೇಳೆ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿ, ಐದಕ್ಕೆ ಐದನ್ನೂ ಜಾರಿ ಮಾಡಿದ್ದೇವೆ. ರಾಜ್ಯದ ಜನರ ಮನೆ ಬಾಗಿಲಿಗೆ ಪ್ರತೀ ತಿಂಗಳು ಸರಕಾರದ ಗ್ಯಾರಂಟಿಗಳು ತಲುಪುತ್ತಿವೆ‌. 1.20 ಕೋಟಿ ಕುಟುಂಬಗಳ ಮನೆ ಯಜಮಾನಿಯರಿಗೆ ಗೃಹಲಕ್ಷ್ಮಿ ಹಣ ಮತ್ತು ಗೃಹಜ್ಯೋತಿಯ ಸವಲತ್ತು ತಲುಪುತ್ತಿದೆ ಎಂದರು.

ಎರಡು ವರ್ಷದಲ್ಲಿ ನಮ್ಮ ಸರಕಾರ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಜೇಬಿಗೆ ಹಾಕಿದೆ. ನಾವು ನುಡಿದಂತೆ ನಡೆದು ಜನರ ಜೇಬಿಗೆ ಹಣ ಹಂಚುತ್ತಿದ್ದರೆ, ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿರುವ ಬಿಜೆಪಿಯವರು ಮಾನ ಮರ್ಯಾದೆ ಬಿಟ್ಟು ರಾಜ್ಯದ ಜನರಿಗೆ ಸುಳ್ಳುಗಳನ್ನು ಹಂಚುತ್ತಿದ್ದಾರೆ ಎಂದು ಹೇಳಿದರು.

FRP ಮತ್ತು MSP ಎರಡನ್ನೂ ನಿಗದಿ ಮಾಡುವುದು ಕೇಂದ್ರದ ಬಿಜೆಪಿ ಸರಕಾರ. ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಹ್ಲಾದ್ ಜೋಶಿ. ಆದರೆ, ವಿಜಯೇಂದ್ರ ತಮ್ಮದೇ ಕೇಂದ್ರ ಸರಕಾರ ಕಬ್ಬು ಬೆಳೆಗಾರರಿಗೆ ಮಾಡಿದ ದ್ರೋಹವನ್ನು ಮರೆಮಾಚಿ ಬೆಳಗಾವಿಗೆ ಹೋಗಿ ಪ್ರತಿಭಟನೆಯ ಡ್ರಾಮಾ ಮಾಡುತ್ತಿದ್ದಾರೆ. ಕೇಂದ್ರ ಸರಕಾರ ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದರೂ ರಾಜ್ಯ ಸರಕಾರ ಹೆಚ್ಚುವರಿ ಹಣ ನೀಡಿ ನಮ್ಮ ಕಬ್ಬು ಬೆಳೆಗಾರರನ್ನು ಕಾಪಾಡುವ ಕೆಲಸ ಮಾಡಿದೆ ಎಂದು ತಿಳಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X