Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಶೈಕ್ಷಣಿಕ ಫಲಿತಾಂಶದಲ್ಲಿ ವಿಜಯನಗರ...

ಶೈಕ್ಷಣಿಕ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆಯನ್ನು ನಂಬರ್ ಒನ್ ಮಾಡೋಣ: ಗರಿಮಾ ಪನ್ವಾರ್

ವಾರ್ತಾಭಾರತಿವಾರ್ತಾಭಾರತಿ29 Sept 2026 9:20 PM IST
share
ಶೈಕ್ಷಣಿಕ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆಯನ್ನು ನಂಬರ್ ಒನ್ ಮಾಡೋಣ: ಗರಿಮಾ ಪನ್ವಾರ್

ವಿಜಯನಗರ (ಹೊಸಪೇಟೆ) : ಜಿಲ್ಲೆ ಈಗಾಗಲೇ ಶೇ. 96ರಷ್ಟು ಉತ್ತಮ ಶೈಕ್ಷಣಿಕ ಫಲಿತಾಂಶದೊಂದಿಗೆ ರಾಜ್ಯದಲ್ಲಿ 10ನೇ ಸ್ಥಾನದಲ್ಲಿದೆ. ಉಳಿದ ಶೇ. 4ರಿಂದ 5ರಷ್ಟು ಸುಧಾರಣೆ ಸಾಧಿಸುವ ಮೂಲಕ ಶೈಕ್ಷಣಿಕವಾಗಿ ರಾಜ್ಯದಲ್ಲೇ ಜಿಲ್ಲೆಯನ್ನು ನಂಬರ್ ಒನ್ ಸ್ಥಾನಕ್ಕೆ ಕೊಂಡೊಯ್ಯಲು ಒಟ್ಟಾಗಿ ಶ್ರಮಿಸೋಣ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಗರಿಮಾ ಪನ್ವಾರ್ ಕರೆ ನೀಡಿದರು.

ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಸಮನ್ವಯಾಧಿಕಾರಿಗಳ ಸಹಯೋಗದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಗೆ ವರ್ಗಾವಣೆಯಾಗಿ ಬಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ದೊರೆತಿರುವುದು ಸಂತೋಷದ ಸಂಗತಿ. ‘ಅಕ್ಷರ ಆವಿಷ್ಕಾರ’ ನಂತರ ಆರಂಭವಾದ ‘ಕಲಿಕಾ ಆಸರೆ’ಯಂತಹ ಯೋಜನೆಗಳು ಹಲವು ವರ್ಷಗಳಾದರೂ ವಿದ್ಯಾರ್ಥಿಗಳ ಕಲಿಕೆಗೆ ನಿರಂತರವಾಗಿ ನೆರವಾಗುತ್ತಿರುವುದು ಸಂತಸದ ಸಂಗತಿ ಎಂದರು.

ಶಿಕ್ಷಕರು ತಾವು ಮಾಡುವ ಕೆಲಸದಲ್ಲಿ ಸಂತೃಪ್ತಿ ಕಾಣುವುದರ ಜತೆಗೆ ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು. ಶಿಕ್ಷಕರು ಇಂದು ಮಾಡುವ ಪರಿಶ್ರಮದ ಫಲಿತಾಂಶ ತಕ್ಷಣ ದೊರೆಯುವುದಿಲ್ಲ. ಆದರೆ ವರ್ಷಗಳ ನಂತರ ಅದೇ ಮಕ್ಕಳು ಉನ್ನತ ಹುದ್ದೆಗೇರಿ ತಮ್ಮ ಜೀವನ ರೂಪಿಸಿದ ಶಿಕ್ಷಕರನ್ನು ನೆನಪಿಸಿಕೊಳ್ಳುವಾಗ ಶಿಕ್ಷಕರ ಸೇವೆಯ ಸಾರ್ಥಕತೆ ಅರಿವಾಗುತ್ತದೆ ಎಂದು ಹೇಳಿದರು.

ಮಕ್ಕಳ ಶೈಕ್ಷಣಿಕ ಪ್ರಗತಿಯ ಜತೆಗೆ ಅವರಲ್ಲಿ ಸನ್ಮಾರ್ಗ, ಧನಾತ್ಮಕ ಚಿಂತನೆ ಹಾಗೂ ಜವಾಬ್ದಾರಿಯುತ ನಾಗರಿಕತ್ವದ ಗುಣಗಳನ್ನು ಬೆಳೆಸುವ ಜವಾಬ್ದಾರಿಯೂ ಶಿಕ್ಷಕರ ಮೇಲಿದೆ. ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಜಿಲ್ಲೆಯ ಶ್ರೇಯೋಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸೋಣ. ವಿಶೇಷವಾಗಿ ಶೈಕ್ಷಣಿಕ ಪ್ರಗತಿಗೆ ಸದಾ ಬೆಂಬಲವಾಗಿ ನಿಲ್ಲುವುದಾಗಿ ಗರಿಮಾ ಪನ್ವಾರ್ ಭರವಸೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಉಮಾಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಹಾಗೂ ನಿವೃತ್ತ ಶಿಕ್ಷಕರಿಗೆ ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ ಸ್ವಾಗತಿಸಿದರು. ಕೂಡ್ಲಿಗಿ ಹಿರೇಮಠ ಸಂಸ್ಥಾನದ ಷ.ಬ್ರ. ಶ್ರೀ ಪ್ರಶಾಂತ ಸಾಗರ ಶಿವಾಚಾರ್ಯ ಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಚಂದ್ರಪ್ಪ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X