Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹಂಪಿ, ಮೈಸೂರು, ಲಕ್ಕುಂಡಿ ತಾಣಗಳ...

ಹಂಪಿ, ಮೈಸೂರು, ಲಕ್ಕುಂಡಿ ತಾಣಗಳ ಅಭಿವೃದ್ಧಿಗೆ ಬೃಹತ್ ಯೋಜನೆ : ಸಚಿವ ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ7 July 2026 7:00 PM IST
share
ಹಂಪಿ, ಮೈಸೂರು, ಲಕ್ಕುಂಡಿ ತಾಣಗಳ ಅಭಿವೃದ್ಧಿಗೆ ಬೃಹತ್ ಯೋಜನೆ : ಸಚಿವ ಕೆ.ಜೆ.ಜಾರ್ಜ್
"ಪ್ರವಾಸೋದ್ಯಮ ಕ್ಷೇತ್ರದ ಸಮಗ್ರ ಬೆಳವಣಿಗೆಗೆ ಖಾಸಗಿ ಸಹಭಾಗಿತ್ವ ಅತ್ಯಗತ್ಯ"

ವಿಜಯನಗರ (ಹೊಸಪೇಟೆ) : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 50 ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ಯೋಜನೆಯಡಿ ಕರ್ನಾಟಕದ ಹಂಪಿ, ಮೈಸೂರು ಹಾಗೂ ಲಕ್ಕುಂಡಿ ತಾಣಗಳನ್ನು ವಿಶ್ವಮಟ್ಟದ ಪ್ರವಾಸಿ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಪ್ರವಾಸೋದ್ಯಮ ಕ್ಷೇತ್ರದ ಸಮಗ್ರ ಬೆಳವಣಿಗೆಗೆ ಖಾಸಗಿ ಸಹಭಾಗಿತ್ವ ಅತ್ಯಗತ್ಯ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಹೊಸ ಮಲಪನಗುಡಿಯ ಹೆರಿಟೇಜ್ ರೆಸಾರ್ಟ್‌ನಲ್ಲಿ ಮಂಗಳವಾರ ನಡೆದ ಗ್ಲೋಬಲ್ ಡೆಸ್ಟಿನೇಷನ್ ಡೆವಲಪ್‌ಮೆಂಟ್ ಯೋಜನೆ ಕುರಿತ ರಾಜ್ಯಮಟ್ಟದ ಸಮಾಲೋಚನಾ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಯುನೆಸ್ಕೋ ಪಾರಂಪರಿಕ ತಾಣವಾಗಿರುವ ಹಂಪಿಗೆ ಮೊದಲ ಆದ್ಯತೆ ನೀಡಲಾಗಿದ್ದು, ಅದನ್ನು ಭಾರತದ ಪ್ರಮುಖ ಪ್ರವಾಸಿ ಆಕರ್ಷಣೆಯನ್ನಾಗಿ ರೂಪಿಸಲಾಗುವುದು ಎಂದರು.

ಮೈಸೂರು ನಗರವನ್ನು ಇನ್ನಷ್ಟು ಆಧುನಿಕ ಪ್ರವಾಸಿ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು. ಕಲ್ಯಾಣಿ ಚಾಲುಕ್ಯರ ವೈಭವವನ್ನು ಹೊಂದಿರುವ ಲಕ್ಕುಂಡಿ ತಾಣವನ್ನು ಭವಿಷ್ಯದ ಪ್ರಮುಖ ಸಾಂಸ್ಕೃತಿಕ ಪ್ರವಾಸಿ ಕೇಂದ್ರವನ್ನಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹಂಪಿ ಸೇರಿದಂತೆ ಪ್ರಮುಖ ಪಾರಂಪರಿಕ ತಾಣಗಳಲ್ಲಿ ವಿವಿಧ ಇಲಾಖೆಗಳ ನಡುವಿನ ಸಮನ್ವಯಕ್ಕಾಗಿ ಡೆಸ್ಟಿನೇಶನ್ ಮ್ಯಾನೇಜ್‌ಮೆಂಟ್ ಆರ್ಗನೈಸೇಶನ್ (DMO) ರಚಿಸುವ ಕುರಿತು ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಯುತ್ತಿದೆ. ಇದರಿಂದ ಆಡಳಿತಾತ್ಮಕ ವಿಳಂಬ ಕಡಿಮೆಯಾಗಿ ಹೂಡಿಕೆದಾರರು ಹಾಗೂ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಹೊಸಪೇಟೆ-ಬಳ್ಳಾರಿ ಭಾಗದ ಜಿಂದಾಲ್ ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಹಾಗೂ ಹಂಪಿಗೆ ದೇಶದ ಪ್ರಮುಖ ನಗರಗಳಿಂದ ಹೆಚ್ಚಿನ ರೈಲು ಸಂಪರ್ಕ ಕಲ್ಪಿಸಲು ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಶಾಸಕ ಹೆಚ್.ಆರ್. ಗವಿಯಪ್ಪ ಮಾತನಾಡಿ, ಹಂಪಿಯ 1,200ಕ್ಕೂ ಅಧಿಕ ಸ್ಮಾರಕಗಳನ್ನು ಸಂಪರ್ಕಿಸುವ 15.4 ಕಿ.ಮೀ. ಹೆರಿಟೇಜ್ ವಾಕ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಂಪಿ ಸ್ಮಾರಕಗಳ ಡಿಜಿಟಲ್ ಸಂರಕ್ಷಣೆ, ಹಂಪಿ ಹಾಗೂ ಬಳ್ಳಾರಿ ರೈಲು ನಿಲ್ದಾಣಗಳ ಪಾರಂಪರಿಕ ಅಭಿವೃದ್ಧಿ, ಕಮಲಾಪುರ ಕೆರೆಯ ಸೌಂದರ್ಯೀಕರಣ, ಅಂತಾರಾಷ್ಟ್ರೀಯ ಮಟ್ಟದ ಇಂಟರ್‌ಪ್ರಿಟೇಷನ್ ಸೆಂಟರ್ ಹಾಗೂ ಪ್ರವಾಸೋದ್ಯಮ ಕಾಲೇಜು ಸ್ಥಾಪನೆಗೂ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಮಾತನಾಡಿ, ಹೂಡಿಕೆದಾರರನ್ನು ಆಕರ್ಷಿಸಲು ಸಿಂಗಲ್ ವಿಂಡೋ ವ್ಯವಸ್ಥೆ ಜಾರಿಯಾಗಬೇಕು. ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಲು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರಗಳನ್ನು ಆರಂಭಿಸಬೇಕು. ಹಂಪಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕುಡಿಯುವ ನೀರು, ನೈರ್ಮಲ್ಯ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

Tags

K.J.GeorgeLakkundimysuruHampi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X