Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹರಪನಹಳ್ಳಿಯಲ್ಲಿ ಎಸ್‌ಐಆರ್‌ಗೆ ವೇಗ:...

ಹರಪನಹಳ್ಳಿಯಲ್ಲಿ ಎಸ್‌ಐಆರ್‌ಗೆ ವೇಗ: ಶೇ.98ರಷ್ಟು ಗಣತಿ ನಮೂನೆಗಳ ವಿತರಣೆ

ವಾರ್ತಾಭಾರತಿವಾರ್ತಾಭಾರತಿ9 July 2026 8:02 PM IST
share
ಹರಪನಹಳ್ಳಿಯಲ್ಲಿ ಎಸ್‌ಐಆರ್‌ಗೆ ವೇಗ: ಶೇ.98ರಷ್ಟು ಗಣತಿ ನಮೂನೆಗಳ ವಿತರಣೆ
ಬಿಎಲ್‌ಒಗಳಿಗೆ ಭರ್ತಿ ಮಾಡಿದ ನಮೂನೆ ಸಲ್ಲಿಸುವಂತೆ ಮತದಾರರಿಗೆ ಮನವಿ

ಹರಪನಹಳ್ಳಿ : ಚುನಾವಣಾ ಆಯೋಗದ ನಿರ್ದೇಶನದಂತೆ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಚುರುಕುಗೊಂಡಿದ್ದು, ಇದುವರೆಗೆ ಶೇ.98ರಷ್ಟು ಗಣತಿ (ಎನ್ಯುಮರೇಶನ್) ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಸುರೇಶಕುಮಾರ ತಿಳಿಸಿದ್ದಾರೆ.

ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 253 ಮತಗಟ್ಟೆಗಳಿದ್ದು, 2,28,914 ಮತದಾರರಿದ್ದಾರೆ. ಎಲ್ಲ ಮತದಾರರಿಗೆ ಬಿಎಲ್‌ಒಗಳ ಮೂಲಕ ಗಣತಿ ನಮೂನೆಗಳನ್ನು ವಿತರಿಸಲಾಗಿದೆ ಎಂದು ಹೇಳಿದರು.

ತಹಶೀಲ್ದಾರ್ ಬಿ.ವಿ. ಗಿರೀಶಬಾಬು ಮಾತನಾಡಿ, ಸಾವಿರಕ್ಕೂ ಹೆಚ್ಚು ಮತದಾರರಿರುವ ಮತಗಟ್ಟೆಗಳಿಗೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರತಿ 10 ಮತಗಟ್ಟೆಗಳಿಗೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಿ ಎಸ್‌ಐಆರ್ ಕಾರ್ಯವನ್ನು ತ್ವರಿತಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮತದಾರರು ಗಣತಿ ನಮೂನೆಗಳನ್ನು ಭರ್ತಿ ಮಾಡಿ ಸಂಬಂಧಿಸಿದ ಬಿಎಲ್‌ಒಗಳಿಗೆ ಸಲ್ಲಿಸಬೇಕು. ಬಿಎಲ್‌ಒಗಳು ಅವುಗಳನ್ನು ಮೊಬೈಲ್ ಆ್ಯಪ್ ಮೂಲಕ ಅಪ್‌ಲೋಡ್ ಮಾಡಲಿದ್ದು, ಈವರೆಗೆ ಶೇ.11.94ರಷ್ಟು ಅಪ್‌ಲೋಡ್ ಕಾರ್ಯ ಪೂರ್ಣಗೊಂಡಿದೆ. ನಮೂನೆ ಸಲ್ಲಿಸಿದ ಬಳಿಕ ಸ್ವೀಕೃತಿ ಪಡೆಯುವಂತೆ ಮತದಾರರಿಗೆ ಅವರು ಮನವಿ ಮಾಡಿದರು.

ಉದ್ಯೋಗಕ್ಕಾಗಿ ಬೇರೆಡೆಗೆ ತೆರಳಿರುವ ಮತದಾರರ ಮಾಹಿತಿಯನ್ನು ಪಕ್ಕದ ಮನೆಯವರ ಮೂಲಕ ಸಂಗ್ರಹಿಸಿ ದೂರವಾಣಿ ಮೂಲಕ ಸಂಪರ್ಕಿಸಲಾಗುತ್ತಿದೆ. ಅಂತಹ ಮತದಾರರು ಜುಲೈ 30ರೊಳಗೆ ಆಗಮಿಸಿ ಗಣತಿ ನಮೂನೆಗಳನ್ನು ಭರ್ತಿ ಮಾಡಿ ಬಿಎಲ್‌ಒಗಳಿಗೆ ಸಲ್ಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಸಭೆಯಲ್ಲಿ ತಾ.ಪಂ. ಇಒ ವೈ.ಎಚ್. ಚಂದ್ರಶೇಖರ್, ಕೃಷಿ ಇಲಾಖೆ ಉಪನಿರ್ದೇಶಕ ಮಹಮ್ಮದ್ ಆಶ್ರಫ್, ಕಾಂಗ್ರೆಸ್ ಮುಖಂಡ ಪೂಜಾರ ಕೃಷ್ಣನಾಯ್ಕ್, ಬಿಜೆಪಿ ಮುಖಂಡ ಪೂರ್ಯನಾಯ್ಕ್, ಆರ್‌ಐ ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags

Harapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X