Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಅಂಧತ್ವ ಪ್ರಮಾಣ ಇಳಿಕೆಗೆ ಆಶಾಕಿರಣ...

ಅಂಧತ್ವ ಪ್ರಮಾಣ ಇಳಿಕೆಗೆ ಆಶಾಕಿರಣ ದೃಷ್ಟಿ ಕೇಂದ್ರಗಳು ಆರಂಭ: ವಿಜಯನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರನಾಯ್ಕ

ನೂತನ ದೃಷ್ಟಿ ಕೇಂದ್ರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ3 July 2025 7:39 PM IST
share
ಅಂಧತ್ವ ಪ್ರಮಾಣ ಇಳಿಕೆಗೆ ಆಶಾಕಿರಣ ದೃಷ್ಟಿ ಕೇಂದ್ರಗಳು ಆರಂಭ: ವಿಜಯನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರನಾಯ್ಕ

ವಿಜಯನಗರ(ಹೊಸಪೇಟೆ): ರಾಷ್ಟ್ರೀಯ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದಡಿಯಲ್ಲಿ ಅಂಧತ್ವ ಪ್ರಮಾಣ ದರವನ್ನು ಇಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆಶಾಕಿರಣ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಜಿಲ್ಲೆಯಲ್ಲಿ ಒಟ್ಟು 12 ದೃಷ್ಟಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಸೇವೆ ಆರಂಭಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ ನಾಯ್ಕ.ಎಲ್.ಆರ್ ತಿಳಿಸಿದ್ದಾರೆ.

ನಗರದ ಸರ್ಕಾರಿ ಸಾರ್ವಜನಿಕ ನೂರು ಹಾಸಿಗೆ ಆಸ್ಪತ್ರೆ ಆವರಣದಲ್ಲಿ ನೂತನ ಆಶಾಕಿರಣ ದೃಷ್ಟಿಕೇಂದ್ರವನ್ನು ಉದ್ಘಾಟಿಸಿ ಅವರು ಗುರುವಾರ ಮಾತನಾಡಿದರು.

ಸಾರ್ವಜನಿಕರಲ್ಲಿ ಕಣ್ಣಿನ ಪೊರೆ ಮತ್ತು ವಕ್ರೀಕಾರಕ ದೋಷಗಳಿಂದ ದೃಷ್ಟಿ ಸಮಸ್ಯೆಗಳ ಸಂಭವವನ್ನು ಕಡಿಮೆ ಮಾಡಲು ಮತ್ತು ದೃಷ್ಟಿ ಕೇಂದ್ರಗಳಲ್ಲಿ ಕಣ್ಣಿನ ತಪಾಸಣೆ ಮತ್ತು ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ನಡೆಸುವುದು ಇವುಗಳ ಉದ್ದೇಶವಾಗಿದೆ. ಈಗಾಗಲೇ ತಾಲೂಕಿನ ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ, ಕೂಡ್ಲಿಗಿ, ಹಡಗಲಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹಾಗೂ ಹಂಪಸಾಗರ, ಇಟಿಗಿ. ತೆಲಗಿ, ಅರಸೀಕೆರಿ, ಚಿಕ್ಕಜೋಗಿಹಳ್ಳಿ, ಕೊಟ್ಟೂರು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದೃಷ್ಟಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಶಸ್ತ್ರ ಚಿಕಿತ್ಸೆಗಳು ಮತ್ತು ಇತರೆ ಕಣ್ಣಿನ ಚಿಕಿತ್ಸೆಗಳಿಗೆ ಉಚಿತ ವ್ಯವಸ್ಥೆ ಕಲ್ಪಿಸುವುದು. ಕ್ಷೇತ್ರ ಸಿಬ್ಬಂದಿಗಳಾದ ಆಶಾ ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ದಿನನಿತ್ಯದ ಚಟುವಟಿಕೆಯಡಿಯಲ್ಲಿ ಮನೆ, ಮನೆ ಭೇಟಿ ನೀಡಿ ಜನರ ಪ್ರಾಥಮಿಕ ತಪಾಸಣೆ ನಡೆಸಿ ಶಂಕಿತ ಪ್ರಕರಣಗಳು ಕಂಡು ಬಂದಲ್ಲಿ ಹೆಚ್ಚಿನ ಕಣ್ಣಿನ ತಪಾಸಣೆಗೆ ಸಮೀಪದ ದೃಷ್ಠಿ ಕೇಂದ್ರಗಳಿಗೆ ಹೋಗಲು ಸಲಹೆ ನೀಡಲಿದ್ದಾರೆ. ದೃಷ್ಠಿ ಕೇಂದ್ರಗಳಲ್ಲಿ ಅಗತ್ಯವಿದ್ದ ಫಲಾನುಭವಿಗಳಿಗೆ ಪರೀಕ್ಷೆ ನಡೆಸಿ ಉಚಿತವಾಗಿ ಕನ್ನಡಕಗಳನ್ನು ನೀಡಲಾಗುತ್ತದೆ. ಹಾಗೂ ಶಸ್ತ್ರಚಿಕಿತ್ಸೆ ಅಗತ್ಯ ಇದ್ದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ನೇತ್ರಾಧಿಕಾರಿಗಳು ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಹಾಜರಾಗುವ ಎಲ್ಲಾ ಫಲಾನುಭವಿಗಳಿಗೆ ವಕ್ರೀಕಾರಕ ದೋಷ ತಪಾಸಣೆಯನ್ನು ನಡೆಸುತ್ತಾರೆ. ವಕ್ರೀಕಾರಕ ದೋಷವುಳ್ಳ ಫಲಾನುಭವಿಯ ಮಾಹಿತಿಯನ್ನು ನೇತ್ರಾಧಿಕಾರಿಗಳು ನಮೂದಿಸಲಿದ್ದಾರೆ. 2024-25ನೇ ಸಾಲಿನಲ್ಲಿ ಶಾಲಾ ಮಕ್ಕಳಿಗೆ ಒಟ್ಟು 4333 ಕನ್ನಡಕಗಳನ್ನು ಉಚಿತವಾಗಿ ವಿತರಿಸಿದ್ದೇವೆ. ಹಾಗೂ 2024-25ನೇ ಸಾಲಿನಲ್ಲಿ ವಿಜಯನಗರ ಜಿಲ್ಲೆಯಲ್ಲಿ 1580 ಕನ್ನಡಕಗಳನ್ನು ಉಚಿತವಾಗಿ ಫಲಾನುಭವಿಗಳಿಗೆ ವಿತರಿಸಲಾಗಿದೆ. 2025-26ನೇ ಸಾಲಿನಲ್ಲಿ ಸುಮಾರು 10,500 ಜನ ಫಲಾನುಭವಿಗಳನ್ನು ಗುರುತಿಸಿ ಉಚಿತವಾಗಿ ಕನ್ನಡಕಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದರು.

ಈ ವೇಳೆ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳು ಡಾ.ಕೆ.ರಾಧಿಕಾ, ಜಿಲ್ಲಾ ಕ್ಷಯರೋಗ ನಿರ್ಮೂಲಾಧಿಕಾರಿಗಳು ಡಾ.ಡಿ.ಭಾಸ್ಕರ್, ಮುಖ್ಯ ವೈದ್ಯಾಧಿಕಾರಿ ಡಾ.ಹರಿಪ್ರಸಾದ್, ನೇತ್ರ ತಜ್ಞರು ಡಾ.ರಾಜಶೇಖರ್, ಡಾ.ರಾಘವೇಂದ್ರ, ಡಾ.ಕೊಟ್ರೇಶ್, ಜಿಲ್ಲಾ ಕುಷ್ಠರೋಗ ಸಲಹೆಗಾರರು ಮತ್ತು ನೇತ್ರಾಧಿಕಾರಿ ನಜಬುನ್ನಿಸಾ ಬೇಗಂ, ವಾಣಿಶ್ರೀ ಹಾಗೂ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ವೆಂಕಟೇಶ್, ಹನುಮಂತರೆಡ್ಡಿ, ಗಿಡ್ಡ ಗಂಗಪ್ಪ, ಗುಂಡಿ ರಾಘು ಸೇರಿದಂತೆ ಆಸ್ಪತ್ರೆ ಸಿಬ್ಬಂದಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X