ಐಪಿಎಲ್ ಫೈನಲ್‌ನಲ್ಲಿ ಪಂಜಾಬ್ ವಿರುದ್ಧ ಗೆಲುವು | ಹೊಸಪೇಟೆಯಲ್ಲಿ ಮುಗಿಲು ಮುಟ್ಟಿದ ಆರ್‌ಸಿಬಿ ಅಭಿಮಾನಿಗಳ ಸಂಭ್ರಮ

ಹೊಸಪೇಟೆ : ಸಂಘಟಿತ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ ಅಂತರದಿಂದ ರೋಚಕವಾಗಿ ಮಣಿಸಿತು. ಈ ಮೂಲಕ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.
ಈ ಗೆಲುವಿನಿಂದ ಆರ್‌ಸಿಬಿ ಅಭಿಮಾನಿಗಳ ಸಂಭ್ರಮವೂ ಮುಗಿಲು ಮುಟ್ಟಿತ್ತು. ಹೊಸಪೇಟೆ ನಗರದಲ್ಲಿ ಆರ್‌ಸಿಬಿ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿ ಸಂಭ್ರಮಾಚರಣೆ ಮಾಡಿದರು.
ನಗರದ ಪುನೀತ್ ರಾಜಕುಮಾರ್ ವೃತ್ತದಲ್ಲಿ ಜಮಾಯಿಸಿದ ಅಭಿಮಾನಿಗಳು ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿದರು. 18 ವರ್ಷದ ಬಳಿಕ ಆರ್‌ಸಿಬಿ ಐಪಿಎಲ್ ನಲ್ಲಿ ಮೊದಲ ಬಾರಿಗೆ ಟ್ರೋಫಿಯನ್ನು ಮುಡಿಗೇರಿಸಿದ ಗಳಿಗೆಯನ್ನು ಆರ್‌ಸಿಬಿ ಅಭಿಮಾನಿಗಳು ಸಂಭ್ರಮಿಸಿದರು.
Next Story





