Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ನೈಜ ವರದಿಗಳನ್ನು ಜನರಿಗೆ ತಲುಪಿಸುವಲ್ಲಿ...

ನೈಜ ವರದಿಗಳನ್ನು ಜನರಿಗೆ ತಲುಪಿಸುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದು: ಲತಾ ಮಲ್ಲಿಕಾರ್ಜುನ

ವಾರ್ತಾಭಾರತಿವಾರ್ತಾಭಾರತಿ30 July 2026 8:17 PM IST
share
ನೈಜ ವರದಿಗಳನ್ನು ಜನರಿಗೆ ತಲುಪಿಸುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದು: ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ: ನೈಜ ವರದಿಗಳನ್ನು ಜನರಿಗೆ ತಲುಪಿಸುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಮಹತ್ತರವಾಗಿವೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ತಿಳಿಸಿದರು.

ಪಟ್ಟಣದ ಎಡಿಬಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಸಮಾರಂಭವನ್ನ ಉದ್ಘಾಟಿಸಿ ಅವರು ಮಾತನಾಡಿದರು.

ಸುದ್ದಿಗಳ ವಿಷಯದಲ್ಲಿ ವಿದ್ಯುನ್ಮಾನ ಮಾಧ್ಯಮಗಳಿಗಿಂತ ಮುದ್ರಣ ಮಾಧ್ಯಮಗಳ ಮೇಲೆ ಜನರಿಗೆ ಹೆಚ್ಚಿನ ನಂಬಿಕೆ ಹಾಗೂ ವಿಶ್ವಾಸವಿದೆ, ಪತ್ರಿಕೆಗಳು ಯಾವಾಗಲೂ ನೈಜತೆ ಮತ್ತು ಸತ್ಯದ ಕಡೆ ನಿಲ್ಲುತ್ತವೆ. ಆದ್ದರಿಂದ ಪತ್ರಕರ್ತರು ಪ್ರಸ್ತುತ ಸ್ಥಿತಿಗತಿಗಳನ್ನು ನಿಷ್ಠೆಯಿಂದ ಬರೆಯುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಹಿಂದೆ ಹಿರಿಯರು ಪತ್ರಿಕೆಗಳನ್ನು ನಡೆಸುತ್ತಿದ್ದಾಗ ಸತ್ಯ ಮತ್ತು ನ್ಯಾಯಯುತ ವರದಿಗಳನ್ನ ಬಿತ್ತಿಸುತ್ತಿದ್ದರು. ಆದರೆ ಇಂದಿನ ಪರಿಸ್ಥಿತಿಯಲ್ಲಿ ಆ ಮಟ್ಟದ ನೈಜತೆ ಕಾಣಿಸಿಕೊಳ್ಳುವುದಿಲ್ಲ, ಪತ್ರಕರ್ತರಿಗೆ ಯಾವುದೇ ಆರ್ಥಿಕ ಭದ್ರತೆ ಇಲ್ಲದಿದ್ದರೂ, ತಮ್ಮ ಜೀವನವನ್ನು ಲೆಕ್ಕಿಸದೇ ಸತ್ಯಸಂಧ ಸುದ್ದಿಗಳನ್ನು ಜನತೆಗೆ ತಲುಪಿಸುವ ಕಾರ್ಯದಲ್ಲಿ ತೊಡಗಿರುವುದು ಶ್ಲಾಘನೀಯ ಎಂದರು.

ಉಪವಿಭಾಗಧಿಕಾರಿ ಟಿ.ಸುರೇಶ್ ಕುಮಾರ್ ಮಾತನಾಡಿ ಪತ್ರಿಕೋದ್ಯಮವು ಪ್ರಜಾಪ್ರಭುತ್ವದಲ್ಲಿ ಆಡಳಿತಾತ್ಮಕ ವ್ಯವಸ್ಥೆಗಳು ಸರಿಯಾಗಿ ಕಾರ್ಯನಿರ್ವಹಿಸದ ಸಂದರ್ಭಗಳಲ್ಲಿ ಎಚ್ಚರಗೊಳಿಸುವ ಮಹತ್ವದ ಪಾತ್ರವಹಿಸುತ್ತದೆ. ವರದಿಗಳ ಮೂಲಕ ಸಾರ್ವಜನಿಕರಿಗೆ ದಿಕ್ಕು ತೋರಿಸುವುದರ ಜೊತೆಗೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಪ್ರತಿನಿತ್ಯ ಶ್ರಮಿಸುವುದು ಪತ್ರಕರ್ತರ ವೃತ್ತಿಗೆ ಗೌರವ ತರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಆಶಯ ನುಡಿಗಳನ್ನಾಡಿದ ಹಿರಿಯ ಪತ್ರಕರ್ತ ಬಸವರಾಜ್ ದೊಡ್ಮನಿಯವರು ಸತ್ಯ, ನ್ಯಾಯ ಮತ್ತು ನಿಷ್ಠೆಗೆ ಹೆಸರಾಗಿದ್ದ ಪತ್ರಿಕೋದ್ಯಮ ಇತ್ತೀಚಿನ ದಿನಗಳಲ್ಲಿ ಉಳ್ಳವರ ಹಿಂದೆ ಓಡುತ್ತಿರುವುದು ಬೇಸರದ ಸಂಗತಿಯಾಗಿದೆ, ಪತ್ರಿಕೋದ್ಯಮವು ಸಮಾಜದ ಹಿತವನ್ನು ಕಾಪಾಡುವ ಪ್ರಮುಖ ವೃತ್ತಿಯಾಗಿದ್ದರೂ, ಇತ್ತೀಚಿನ ದಿನಗಳಲ್ಲಿ ಅದರ ಮೂಲ ಮೌಲ್ಯಗಳಿಂದ ದೂರ ಸರಿಯುತ್ತಿರುವುದು ಕಾಣುತ್ತಿದೆ ಎಂದು ಹೇಳಿದರು.

ಇತ್ತೀಚೆಗೆ ನಾಗರಿಕ ಪತ್ರಿಕೋದ್ಯಮ ಹೆಚ್ಚಾಗಿ ಬೆಳೆಯುತ್ತಿದ್ದು, ಇದರ ಪರಿಣಾಮವಾಗಿ ಸಂಪ್ರದಾಯಬದ್ಧ ಪತ್ರಿಕೋದ್ಯಮದ ಮೂಲ ಲಕ್ಷಣಗಳು ನಿಧಾನವಾಗಿ ಕಳೆದುಹೋಗುತ್ತಿವೆ, ಕೃತಕ ಬುದ್ಧಿಮತ್ತೆ ಮತ್ತು ನಾಗರೀಕ ಪತ್ರಿಕೋದ್ಯಮದಿಂದ ಇಂದಿನ ನೈಜ ಪತ್ರಿಕೋದ್ಯಮದ ಮೇಲೆ ಪ್ರಭಾವ ಬೀರುತ್ತಿದ್ದು, ಸರಿಯಾದ ಮಾರ್ಗದರ್ಶನವಿಲ್ಲದೆ ಬಳಸಿದರೆ ಮಾಹಿತಿ ತಪ್ಪಾಗುವ ಸಾಧ್ಯತೆ ಇದೆ, ಆದ್ದರಿಂದ ಪತ್ರಕರ್ತರು ನಿಷ್ಠೆ, ಸತ್ಯ ಹಾಗೂ ಪ್ರಾಮಾಣಿಕತೆಯನ್ನು ಕಾಪಾಡಿಕೊಂಡು ಕೆಲಸ ಮಾಡುವುದು ಅತ್ಯಂತ ಅಗತ್ಯವಾಗಿದೆ ಎಂದರು.

ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಬಿ.ಧನಂಜಯಪ್ಪ ಮಾತನಾಡಿ ಪತ್ರಕರ್ತರ ಕಷ್ಟ–ಕಾರ್ಪಣ್ಯಗಳಿಗೆ ವಾರ್ತಾ ಇಲಾಖೆ ಸದಾ ಧ್ವನಿಯಾಗಿದ್ದು, ಅವರಿಗೆ ಮಾಸಿಕ ವೇತನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಗ್ರಾಮೀಣ ಪತ್ರಕರ್ತರ ಕಲ್ಯಾಣಕ್ಕಾಗಿ ಸರ್ಕಾರ ಪತ್ರಕರ್ತರ ಉಚಿತ ಬಸ್ ಪಾಸ್ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಪತ್ರಕರ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಾಮಾಜಿಕ ಜಾಲತಾಣಗಳ ಪ್ರಭಾವ ದಿನೇದಿನೇ ಹೆಚ್ಚುತ್ತಿದ್ದು, ಸುಳ್ಳು ಸುದ್ದಿಗಳ ಹರಡುವಿಕೆಯೂ ಹೆಚ್ಚಾಗಿದೆ. ಆದ್ದರಿಂದ ಜನರು ಸಾಮಾಜಿಕ ಜಾಲತಾಣಗಳಲ್ಲಿ ಬರುವ ಯಾವುದೇ ಸುದ್ದಿಗಳನ್ನು ಪರಿಶೀಲನೆ ಇಲ್ಲದೆ ನಂಬಬಾರದು ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಮಾತನಾಡಿ ಸುದ್ದಿ ಸಂಗ್ರಹಣೆಯ ಸಂದರ್ಭದಲ್ಲಿ ಹಲವಾರು ಬಾರಿ ಜೀವದ ಹಂಗನ್ನೂ ಲೆಕ್ಕಿಸದೆ ಕಾರ್ಯನಿರ್ವಹಿಸುವ ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಯಾಗಿದ್ದಾರೆ, ಆದ್ದರಿಂದ ಅವರ ಭದ್ರತೆ ಹಾಗೂ ಕಲ್ಯಾಣಕ್ಕಾಗಿ ಸರ್ಕಾರ ಹೆಚ್ಚಿನ ಗಮನ ಹರಿಸಬೇಕಿದೆ ಎಂದರು.

ಸಿಪಿಐ ಮಹಾಂತೇಶ್ ಜಿ.ಸಜ್ಜನ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಇದರಿಂದ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಕಾನಿಪ ಜಿಲ್ಲಾಧ್ಯಕ್ಷರಾದ ಪಿ.ಸತ್ಯ ನಾರಾಯಣ್ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನ ಕಾನಿಪ ತಾಲೂಕು ಘಟಕದ ಅಧ್ಯಕ್ಷ ತಳವಾರ ಚಂದ್ರಪ್ಪ ವಹಿಸಿದ್ದರು, ಕಾರ್ಯದರ್ಶಿ ಹೆಚ್.ದೇವೇಂದ್ರಪ್ಪ ನಿರೂಪಿಸಿದರು, ಪಿ.ಕರಿಬಸಪ್ಪ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಕಾನಿಪ ರಾಜ್ಯ ಸಮಿತಿ ಸದಸ್ಯ ಪಿ.ವೆಂಕೋಬ ನಾಯಕ, ಜಿಲ್ಲಾ ಕಾರ್ಯದರ್ಶಿ ಕೆ.ಲಕ್ಷ್ಮಣ್, ಜಿಲ್ಲಾ ಉಪಾಧ್ಯಕ್ಷ ಸಿ.ಕೆ.ನಾಗರಾಜ್, ಟಿ.ಬಿ.ರಾಜ, ಜಿಲ್ಲಾ ಸಮಿತಿ ಸದಸ್ಯ ಬಿ.ರಾಮ್ ಪ್ರಸಾದ್ ಗಾಂಧಿ, ಪತ್ರಕರ್ತರಾದ ನಾಗರಾಜ್ ನಾಯ್ಕ್, ಬಿ.ಮಾಧರರಾವ್, ಗುಡಿಹಳ್ಳಿ ಮಂಜುನಾಥ್, ಕೆ.ಕುಬೇರಪ್ಪ, ಎಂ.ಮಂಜುನಾಥ್, ಎಡಿಬಿ ಪ್ರಥಮ ದರ್ಜೆ ಕಾಲೇಜಿನ ಪ್ರಚಾರ್ಯ ಡಾ.ಸಿದ್ದಲಿಂಗ ಮೂರ್ತಿ, ಮುಖಂಡರಾದ ಹೆಚ್.ವಸಂತಪ್ಪ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಲಾಟಿ ದಾದಪೀರ್, ವಕೀಲ ಬಸವರಾಜ್ ಸಂಗಪ್ಪನವರ, ಇಸ್ಮಾಯಿಲ್ ಯಲಿಗಾರ, ಮೈದೂರು ರಾಮಣ್ಣ, ದೇವೇಂದ್ರಗೌಡ, ಗುಡಿ ನಾಗರಾಜ್, ಉದ್ದಾರ ಗಣೇಶ್, ಶಶಿಕುಮಾರ ನಾಯ್ಕ್, ವಿರೇಶ್ ನಾಯ್ಕ್, ಪ್ರಸಾದ ಕಾವಡಿ, ಹರಿಯಮ್ಮನಹಳ್ಳಿ ಶಿವರಾಜ್, ಮಲ್ಲಿಕಾರ್ಜುನ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

Tags

Lata Mallikarjunvijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X